ಆಳಂದ: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ
Team Udayavani, Mar 31, 2022, 11:52 AM IST
ಕಲಬುರಗಿ: ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದ ಮಾ.31ರೊಳಗಾಗಿ 50 ಲಕ್ಷ ಸದಸ್ಯತ್ವ ಗುರಿಯೊಂದಿಗೆ ಹಮ್ಮಿಕೊಂಡಿರುವ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಭರದಿಂದ ಸಾಗಿದೆ.
ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಬಿ.ಆರ್. ಪಾಟೀಲ ಮಾರ್ಗದರ್ಶನದಲ್ಲಿ ಆರಂಭವಾಗಿರುವ ಅಭಿಯಾನ ವೇಗದಲ್ಲಿ ಸಾಗಿದೆ. ಪ್ರತಿ ಹೋಬಳಿ, ಹಳ್ಳಿಗಳಿಗೆ ಹೋಗುತ್ತಿರುವ ಪಕ್ಷದ ಯುವ ಕಾರ್ಯಕರ್ತರು ಮತದಾರರ ಪಟ್ಟಿಯಂತೆ ಮತದಾರ ಗುರುತಿನ ಚಿಟ್ಟಿ ಜನರಿಂದ ಪಡೆದು ಅವರ ಮನೆಗಳಿಗೆ ತೆರಳಿ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಮುನ್ನಡೆಸುತ್ತಿದ್ದಾರೆ.
ವಿವಿಧ ಗ್ರಾಮಗಳಿಗೆ ಕೆಪಿಸಿಸಿ ಸದಸ್ಯರಾದ ಹಣಮಂತರಾವ ಭೂಸನೂರ್, ಆಳಂದ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಶರಣಬಸವ (ಚಿನ್ನು) ಪಾಟೀಲ, ನೋಂದಣಿ ಸಮನ್ವಯಕಾರ ಗಣೇಶ ಪಾಟೀಲ, ಹಿರಿಯರಾದ ವೈಜನಾಥ ಪಾಟೀಲ, ಸಿದ್ಧು ಪಾಟೀಲ, ಯುವ ಮುಖಂಡರಾದ ಲಿಂಗರಾಜು ಪಾಟೀಲ, ಪಿಂಟುಗೌಡ ಪಡಸಾವಳಗಿ ಹಾಗೂ ಇನ್ನಿತರರು ವಿವಿಧ ಹಳ್ಳಿ, ಹೋಬಳಿಗಳಿಗೆ ಸುತ್ತಾಡಿ ಜನರ ಮನೆ, ಮಳಿಗೆಗಳಿಗೆ ತೆರಳಿ ಸದಸ್ಯತ್ವ ಅಭಿಯಾನ ನಡೆಸಿದರು.
ಕಡಗಂಚಿಯಲ್ಲಿ ಶರಣು ಭೂಸನೂರ್ ನೇತೃತ್ವ ವಹಿಸಿದ್ದರು. ಮಾ. 31ರ ವರೆಗೂ ಡಿಜಿಟಲ್ ಸದಸ್ಯತ್ವ ಅಭಿಯಾನ ನಡೆಯಲಿದೆ. ಪ್ರತಿ ಮತಗಟ್ಟೆಗೆ ಇಬ್ಬರು ನೋಂದಣಿದಾರರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಬಗ್ಗೆ ನಂಬಿಕೆ, ವಿಶ್ವಾಸ ಇರುವವರನ್ನು ನೋಂದಣಿ ಮಾಡಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.