ಪುರಸಭೆ ಸ್ಥಳ ನೀಡಿದರೆ 2 ಸಾವಿರ ಮನೆ ನಿರ್ಮಾಣ
Team Udayavani, Sep 6, 2022, 4:27 PM IST
ಸೇಡಂ: ಪುರಸಭೆ 15 ರಿಂದ 20 ಎಕ್ಕರೆ ಸ್ಥಳ ನಿಡಿದರೆ 2 ಸಾವಿರ ಮನೆಗಳ ನಿರ್ಮಾಣಕ್ಕೆ ಬೇಕಾಗುವ ಅನುದಾನ ತರಲಾಗುವುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು.
ಪಟ್ಟಣದ ಸುವರ್ಣ ಕರ್ನಾಟಕ ಭವನದಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ 75 ಜನ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು, ಹಳೆಯ ಕಟ್ಟಡ ಅಥವಾ ಖಾಲಿ ನಿವೇಶನ ಹೊಂದಿದ್ದರೆ ಅವರಿಗೆ ಮನೆ ಕಟ್ಟಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 3.5 ಲಕ್ಷ ಹಣವನ್ನು ನೀಡಲಾಗುತ್ತಿದೆ . ನಾನು ಶಾಸಕನಾಗಿ ಬಂದಮೇಲೆ ಕೊಳಚೆ ಪ್ರದೇಶದ ನಿವಾಸಿಗಳಿಗೆ ತಲಾ 5 ಲಕ್ಷ ವೆಚ್ಚದಲ್ಲಿ 500 ಮನೆಗಳನ್ನು ಮಂಜೂರು ಮಾಡಲಾಗಿದ್ದು 300 ಮನೆಗಳು ಪೂರ್ಣವಾಗಿವೆ ಎಂದರು.
ವಾಸಿಸಲು ಸೂರಿಲ್ಲದವರಿಗಾಗಿ ಚಿಂಚೋಳಿ ರಸ್ತೆಯಲ್ಲಿ 50 ಕೋಟಿ ವೆಚ್ಚದಲ್ಲಿ 750 ಮನೆಗಳ ನಿರ್ಮಾಣಕಾರ್ಯ ಆರಂಭವಾಗಿದ್ದು ಮುಂದಿನ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಹಿಂದಿನ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ಯಾವುದೇ ಆಧಾರವಿಲ್ಲದೆ 10 ಸಾವಿರ ಹಕ್ಕು ಪತ್ರ ವಿತರಣೆ ಮಾಡಿತ್ತು ಅದನ್ನು ನಾವು ಸರಿಮಾಡಿ ಜನರಿಗೆ ಹಣ ನೀಡುವ ಕೆಲಸ ಮಾಡಿದ್ದೇವೆ. ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ 4ಸಾವಿರ ಕುಟುಂಬಗಳಿಗೆ ವಸತಿ ಯೋಜನೆ ಕಲ್ಪಿಸಲಾಗಿದೆ. ಕಾಚೂರ ಬ್ರಿಡ್ಜ್ನಿಂದ 50ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಕೆಲಸಕ್ಕೆ ಹಣ ಮೀಸಲಿಡಲಾಗಿದೆ ಎಂದರು.
ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ಪುರಸಭೆ ಅಧ್ಯಕ್ಷೆ ಶೋಭಾ ಹೂಗಾರ, ಮುಖ್ಯಾ ಧಿಕಾರಿ ಸತೀಶ ಗುಡ್ಡೆ, ಉಪಾಧ್ಯಕ್ಷ ಚಂದ್ರಶೇಖರ ಕೇರಳ್ಳಿ, ಬಿಜೆಪಿ ನಗರಾಧ್ಯಕ್ಷ ಸತೀಶ ಪಾಟೀಲ ತರನಳ್ಳಿ, ಪುರಸಭೆ ಸದಸ್ಯರಾದ ಶಿವಾನಂದಸ್ವಾಮಿ ಕೇಶ್ವಾರ, ಬಸಣ್ಣ ರನ್ನೇಟ್ಲಾ, ನೀಲಾಧರ ಶೆಟ್ಟಿ, ರಾಘವೇಂದ್ರ ಮೆಕ್ಯಾನಿಕ್, ರಾಜು ಗುತ್ತೇದಾರ, ಚಾಂದಬೀ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.