ಗಡಿಕೇಶ್ವಾರದಲ್ಲಿ ತಾತ್ಕಾಲಿಕ ಶೆಡ್ ನಿರ್ಮಾಣ
Team Udayavani, May 14, 2022, 2:29 PM IST
ಚಿಂಚೋಳಿ: ತಾಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ಸರ್ಕಾರ ಕಂದಾಯ ಇಲಾಖೆಯಿಂದ ಮಂಜೂರಿಗೊಳಿಸಿದ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯ ಮನೆಗಳ ಎದುರು ಖಾಲಿ ಇರುವ ಸ್ಥಳದಲ್ಲಿ ನಡೆಯುತ್ತಿದೆ.
ಮೇಲಿಂದ ಮೇಲೆ ಲಘು ಭೂಕಂಪವಾಗಿ ಭಯಭೀತರಾಗಿದ್ದ ಗ್ರಾಮಸ್ಥರಿಗೆ ತಾತ್ಕಾಲಿಕ ಆಶ್ರಯಕ್ಕಾಗಿ ಮನೆಗಳ ಅಕ್ಕಪಕ್ಕದ ಖಾಲಿ ಜಾಗದಲ್ಲಿ 10×10 ಅಳತೆಯ 853 ತಾತ್ಕಾಲಿಕ ಟಿನ್ ಶೆಡ್ ಗಳನ್ನು ನಿರ್ಮಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲಾಗಿರುವ 3ಕೋಟಿ ರೂ.ಗಳನ್ನು ಕಂದಾಯ ಇಲಾಖೆಯ ವಿಪತ್ತು ಪರಿಹಾರ ನಿಧಿಗೆ ಜಮೆ ಮಾಡಿದ್ದರಿಂದ ಗ್ರಾಮದಲ್ಲಿ ಶೆಡ್ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ.
ಪ್ರತಿ ಶೆಡ್‌ಗೆ 23,500ರೂ.ಗಳನ್ನು ಸರ್ಕಾರ ನಿಗದಿಪಡಿಸಿದ್ದರಿಂದ ಮನೆಗಳ ಎದುರು ತೆಗ್ಗು ತೋಡಿಸಲಾಗಿದ್ದು, ಶೆಡ್ ಕಾರ್ಯ ಕಳೆದೆರಡು ದಿನಗಳಿಂದ ನಡೆಯುತ್ತಿದೆ. ಸೇಡಂ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಮನೆಗಳ ಸಮೀಕ್ಷೆ ಮಾಡಲಾಗಿದೆ. ಗ್ರಾಮದಲ್ಲಿ ಒಟ್ಟು 1057 ಜನ ವಸತಿ ಮನೆಗಳಿವೆ. ಇವುಗಳ ಪೈಕಿ 853 ಮನೆಗಳ ಎದುರು ಮತ್ತು ಅಕ್ಕಪಕ್ಕದಲ್ಲಿ ಮಾತ್ರ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ಶೆಡ್ ಸುತ್ತ ಟಿನ್ ಅಳವಡಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.
ಗಡಿಕೇಶ್ವಾರ ಗ್ರಾಮದಲ್ಲಿ ಪದೇ ಪದೇ ಭೂಮಿಯಿಂದ ಭಾರಿ ಶಬ್ದ ಉಂಟಾಗಿ, ನಂತರ ಭೂಮಿ ನಡುಗುತ್ತಿತ್ತು. ಹೀಗಾಗಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕಂದಾಯ ಸಚಿವ ಆರ್.ಅಶೋಕಗೆ ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಿಸಲು ಮನವಿ ಮಾಡಿದ್ದರು. ಆನಂತರ ಕಂದಾಯ ಸಚಿವ ಆರ್. ಅಶೋಕ, ಸಂಸದ ಡಾ| ಉಮೇಶ ಜಾಧವ, ಆಗಿನ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ನಾ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಖುದ್ದಾಗಿ ಅರಿತು ಸರ್ಕಾರಕ್ಕೆ ಮಾಹಿತಿ ಒದಗಿಸಿದ್ದರಿಂದ ಅನುದಾನ ಮಂಜೂರಿಯಾಗಿ ಶೆಡ್ ನಿರ್ಮಾಣ ಕಾರ್ಯ ಆರಂಭವಾಗಿದೆ.
ಗ್ರಾಮದ ಸರ್ಕಾರಿ ಬಾಲಕರ ವಸತಿ ನಿಲಯದ ಆವರಣದಲ್ಲಿ ಶೆಡ್ ನಿರ್ಮಾಣಕ್ಕಾಗಿ ಬೇಕಾಗುವ ಕಬ್ಬಿಣದ ಸಲಾಕೆ, ಟಿನ್ ಶೆಡ್ ಮತ್ತು ಇನ್ನಿತರ ಸಲಕರಣೆಗಳನ್ನು ತಂದಿಡಲಾಗಿದೆ.
ರಾಜ್ಯ ಸರ್ಕಾರದಿಂದ ಗಡಿಕೇಶ್ವಾರ ಗ್ರಾಮದ ಮನೆಗಳ ಎದುರು ನಿರ್ಮಿಸಲಾಗುತ್ತಿರುವ ಶೆಡ್ ಕೇವಲ 10×10 ಆಗಿದ್ದರಿಂದ ಭೂಕಂಪದ ಸಂದರ್ಭದಲ್ಲಿ ಯಾವುದಕ್ಕೂ ಉಪಯೋಗ ಬರುವುದಿಲ್ಲ. ಶೆಡ್ ಕೇವಲ ಚಪ್ಪರದಂತೆ ನಿರ್ಮಸಲಾಗುತ್ತಿದೆ. ಮಳೆ, ಗಾಳಿ, ಚಳಿ ತಡೆದುಕೊಳ್ಳಲು ಸುತ್ತಲೂ ತಗಡುಗಳಿಲ್ಲದೇ ನಿರ್ಮಾಣ ಮಾಡುತ್ತಿರುವುದರಿಂದ ಗ್ರಾಮಸ್ಥರಿಗೆ ಉಪಯೋಗ ಆಗುವುದಿಲ್ಲವೆಂದು ಹಸರಗುಂಡಗಿ-ಗುರಂಪಳ್ಳಿ ಗ್ರಾಮಸ್ಥರಿಗೆ ನಿರ್ಮಿಸಿಕೊಟ್ಟ ಶೆಡ್ ಮಾದರಿಯಂತೆ ಇರಬೇಕು. ಸದ್ಯ ಶೆಡ್ ನಿರ್ಮಾಣ ಸರಿಯಾಗುತ್ತಿಲ್ಲ. -ಜಿಶಾನ್ ಅಲಿ ಪಟ್ಟೇದಾರ, ಗ್ರಾಪಂ ಉಪಾಧ್ಯಕ್ಷ, ಗಡಿಕೇಶ್ವಾರ
ಗಡಿಕೇಶ್ವಾರ ಗ್ರಾಮಸ್ಥರ ಮನೆ ಎದುರು ಶೆಡ್ ನಿರ್ಮಿಸಲು ಸರ್ಕಾರ ಪ್ರತಿ ಮನೆಗೊಂದರಂತೆ 23,500ರೂ. ಅನುದಾನ ನೀಡಿದೆ. ಆದರೆ ಸರ್ಕಾರದ ಅಂದಾಜಿನಂತೆ ಗುತ್ತಿಗೆದಾರ ಶೆಡ್ ನಿರ್ಮಿಸಬೇಕಾಗುತ್ತದೆ. ಜನರ ಬೇಡಿಕೆಯಂತೆ ಶೆಡ್ ಸುತ್ತ ಟಿನ್ ಹಾಕಲು ಇನ್ನು ಹೆಚ್ಚುವರಿಯಾಗಿ ಐದು ಕೋಟಿ ರೂ.ಅನುದಾನ ಬೇಕಾಗುತ್ತದೆ. ಸೇಡಂ ಶಾಸಕ ರಾಜಕುಮಾರ ಪಾಟೀಲ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರಿಗೆ ಸೂಚಿಸಿದ್ದರಿಂದ ಹೊಸದಾಗಿ ಅಂದಾಜು ಪತ್ರಿಕೆ ಸಿದ್ಧಪಡಿಸಿ ಮೇ 16ರಂದು (ಸೋಮವಾರ) ಸರ್ಕಾರಕ್ಕೆ ಸಲ್ಲಿಸಲಾಗುವುದು. -ಸಿದ್ರಾಮ ದಂಡಗುಲಕರ, ಎಇಇ, ಲೋಕೋಪಯೋಗಿ ಇಲಾಖೆ, ಕಾಳಗಿ
-ಶಾಮರಾವ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.