ಟಿಎಪಿಸಿಎಂಎಸ್‌ನಿಂದ ಕಲ್ಯಾಣಮಂಟಪ ನಿರ್ಮಾಣ
Team Udayavani, Nov 26, 2021, 12:09 PM IST
ಚಿಂಚೋಳಿ: ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಡಿಯಲ್ಲಿ ಕಲ್ಯಾಣ ಕಾರ್ಯಕ್ರಮಕ್ಕಾಗಿ ಸಂಘದ ಆವರಣದಲ್ಲಿ ಕಲ್ಯಾಣ ಮಂಟಪ ನಿರ್ಮಿಸಲು ಉದ್ದೇಶಿಸಲಾಗಿದ್ದು ಶಾಸಕರು, ಸಂಸದರು ಸರ್ಕಾರದಿಂದ ದೇಣಿಗೆ ಕೊಡಿಸಬೇಕು ಎಂದು ಸಂಘದ ಅಧ್ಯಕ್ಷ ರಮೇಶ ಯಾಕಾಪುರ ಕೋರಿದರು.
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ 2019-20ನೇ ಸಾಲಿನ 62ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಆಶ್ರಯದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಕಲ್ಯಾಣ ಮಂಟಪ ನಿರ್ಮಿಸಲು ಪ್ರತಿಯೊಬ್ಬ ಸದಸ್ಯರು ಒಂದು ಸಾವಿರ ರೂ. ದೇಣಿಗೆ ನೀಡಿದರೆ ಅನುಕೂಲವಾಗುತ್ತದೆ ಎಂದರು.
ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಉದ್ದೇಶಿಸಲಾಗಿದೆ. ಚಂದಾಪುರ ನಗರದಲ್ಲಿ ಸರ್ವೇ ನಂ.15ರಲ್ಲಿ ಸಂಘದ ಆಸ್ತಿಯನ್ನು 1962-63ನೇ ಸಾಲಿನಲ್ಲಿ ಕೇವಲ 500ರೂ. ಗಳಲ್ಲಿ ಖರೀದಿಸಲಾಗಿದೆ. ಆದರೆ ಸಂಘದ ಹೆಸರಿನಲ್ಲಿ ನೋಂದಣಿ ಆಗಿಲ್ಲ. ಪೊಲೀಸ್ ಠಾಣೆ ಹತ್ತಿರ ಸಂಘದ ಆಶ್ರಯದಲ್ಲಿ ಆಸ್ತಿ ಇದೆ. ಅದನ್ನು ಬೇರೆಯವರು ಕಬ್ಬೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅಲ್ಲಿಯ ಅನ ಧಿಕೃತ ಶೆಡ್‌ಗಳನ್ನು ತೆರವುಗೊಳಿಸಬೇಕಿದೆ. ಬೀಜ, ರಸಗೊಬ್ಬರ, ಶುದ್ಧ ನೀರು ಪೂರೈಕೆ ಇನ್ನಿತರ ಆದಾಯದಿಂದ ಸಂಘಕ್ಕೆ ಲಾಭವಾಗುತ್ತಿದೆ ಎಂದರು.
62ನೇ ವಾರ್ಷಿಕ ಮಹಾಸಭೆಯಲ್ಲಿ ಶಂಕರ ಭಗವಂತಿ, ಸಂಗಪ್ಪ ವಲಗಿರಿ, ಅಮೃತರಾವ್ ದರವೇಶ ಸಂಘದಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಹಣಕಾಸಿನ ವ್ಯವಹಾರಗಳ ಕುರಿತು ಚರ್ಚಿಸಿದರು.ನಿರ್ದೇಶಕರಾದ ಪ್ರಭುಲಿಂಗ ಲೇವಡಿ, ಅಬ್ದುಲ್ ಬಾಸೀತ್, ವೀರಶೆಟ್ಟಿ ಪಾಟೀಲ, ರಜಿಯಾಬೇಗಂ ನಾವದಗಿ, ಪೀರಪ್ಪ ಸಾಸರಗಾಂವ, ಸಂಘದ ಖರ್ಚು-ವೆಚ್ಚಗಳ ಮತ್ತು ಜಮೆ ಕುರಿತು ಸಭೆಯಲ್ಲಿ ಚರ್ಚಿಸಿದರು. ಅಧ್ಯಕ್ಷರು ಸದಸ್ಯರು, ನಿರ್ದೇಶಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ವ್ಯವಸ್ಥಾಪಕ ವಿಜಯಕುಮಾರ ಶಾಬಾದಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.