ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಸಹಕಾರ: ಅಪ್ಪು ಗೌಡ
Team Udayavani, Dec 26, 2021, 9:59 AM IST
ಕಲಬುರಗಿ: ಬರುವ ಜನವರಿ 3 ಮತ್ತು 4ರಂದು 25 ವರ್ಷದ ನಂತರ ನಗರದಲ್ಲಿ ನಡೆಯುತ್ತಿರುವ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಯಶಸ್ಸಿಗೆ ಸಹಕಾರ, ಸಹಾಯ ಕಲ್ಪಿಸುವುದಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಅಧ್ಯಕ್ಷ, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.
ಸಮ್ಮೇಳನದ ಸಿದ್ಧತೆ ಕುರಿತು ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಅವರು, ಸಮ್ಮೇಳನ ನಮ್ಮೆಲ್ಲರ ಕಾರ್ಯಕ್ರಮವಾಗಿದೆ. ಮೊದಲ ದಿನದ ಅಂದರೆ ಜ. 3ರ ಸಂಪೂರ್ಣ ದಿನದ (ಬೆಳಗಿನ ಉಪಹಾರ, ಮಧ್ಯಾಹ್ನ ಊಟ, ರಾತ್ರಿ ಎರಡು ಕಡೆ ಊಟ) ಅನ್ನದಾಸೋಹ ಸೇವೆ ತಮ್ಮಿಂದ ಆಗಲಿದೆ ಎಂದರು.
ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಪತ್ರಕರ್ತರು ತಮ್ಮ ಆತಿಥ್ಯ ಸ್ವೀಕರಿಸಲಿ. ಒಟ್ಟಾರೆ ಸಮ್ಮೇಳನಕ್ಕೆ ಯಾವುದೇ ಕೊರತೆಯಾಗದಂತೆ ನಿಗಾ ವಹಿಸುವುದು ಸ್ಥಳೀಯ ಪತ್ರಕರ್ತರು ಹಾಗೂ ತಮ್ಮ ಕಾರ್ಯವಾಗಿದೆ ಎಂದು ಹೇಳಿದರು.
ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸುವುದು ಸವಾಲಿನ ಕೆಲಸವಾಗಿದೆ. ಮುಖ್ಯವಾಗಿ ಸರ್ಕಾರಿ ವಸತಿ ಗೃಹಗಳನ್ನು ಪತ್ರಕರ್ತರಿಗೆ ಮೀಸಲಿಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಶರಣಬಸವೇಶ್ವರರ ಮಹಾದಾಸೋಹ ಸಂಸ್ಥಾನದ ಬಸವರಾಜಪ್ಪ ಸ್ಮಾರಕ ಭವನದಲ್ಲಿ ಸಮ್ಮೇಳನ ನಡೆಯುವಂತಾಗಲು ಹಾಗೂ ಸಮ್ಮೇಳನ ಯಶಸ್ವಿಗೆ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಶುಭ ಹಾರೈಸಿರುವುದು ಮಾದರಿಯಾಗಿದೆ ಎಂದು ಹೇಳಿದರು.
ಜ. 4ರಂದು ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದಾಗಿ ಹೇಳಿದ್ದಾರೆ. ಅದೇ ರೀತಿ ನಾಡಿನ ಹಿರಿಯ ಪತ್ರಕರ್ತರೆಲ್ಲರು ಆಗಮಿಸುತ್ತಿರುವುದರಿಂದ ಸಮ್ಮೇಳನಕ್ಕೆ ಕಳೆ ಬರಲಿದೆ. ಒಟ್ಟಾರೆ ಅರ್ಥಪೂರ್ಣ ರೀತಿಯಲ್ಲಿ ಸಮ್ಮೇಳನಕ್ಕೆ ಸರ್ವ ನಿಟ್ಟಿನಲ್ಲಿಯೂ ಸಹಕಾರ ನೀಡಲಾಗುವುದು ಎಂದು ಪುನರುಚ್ಚರಿಸಿದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ, ಸಮ್ಮೇಳನದ ಆಹಾರ ಸಮಿತಿ ಅಧ್ಯಕ್ಷ ಪ್ರವೀಣ ರೆಡ್ಡಿ, ಸದಸ್ಯ ಭಜರಂಗಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.