ಸರ್ಕಾರಿ ನೌಕರರಲ್ಲಿ ರಚನಾತ್ಮಕತೆ ಅವಶ್ಯ
Team Udayavani, Feb 11, 2022, 11:21 AM IST
ಆಳಂದ: ಸರ್ಕಾರಿ ಸೇವೆ ಅತ್ಯಂತ ಶ್ರೇಷ್ಠ ಕೆಲಸವಾಗಿದ್ದು, ನೌಕರರು ವೃತ್ತಿ ಘನತೆ ಕಾಪಾಡಲು ಪ್ರಾಮಾಣಿಕವಾಗಿ, ರಚನಾತ್ಮಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ವಿ.ಎಸ್. ಷಡಕ್ಷರಿ ಹೇಳಿದರು.
ಪಟ್ಟಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನವೀಕರಣ ಭವನದ ಉದ್ಘಾಟನೆ, ನೌಕರರ ಸಂವಾದ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ತಿಂಗಳ ವೇತನ ಪಡೆದಂತೆ ಸರ್ಕಾರಿ ನೌಕರರು ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದರು.
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಇಲ್ಲದೇ ಮುಂಬಡ್ತಿ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು. ತುಟ್ಟಿ ಭತ್ಯೆ ಹೆಚ್ಚಿಸಬೇಕು ಎಂದು ಸಂಘವು ಸರ್ಕಾರದೊಂದಿಗೆ ಸಂಧಾನದ ಮೂಲಕ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುಭಾಷ ಗುತ್ತೇದಾರ ಮಾತನಾಡಿ, ನೌಕರ ಸಂಘದ ತಾಲೂಕು ಅಧ್ಯಕ್ಷ ಸಿದ್ಧರಾಮ ಪಾಟೀಲ ಮಾತನಾಡಿ, ಅದ್ಧೂರಿಯಾಗಿ ಸಮಾರಂಭ ಕೈಗೊಂಡಿದ್ದು ಶ್ಲಾಘನೀಯವಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರಿಗೆ ಬಿಜೆಪಿ ಸರ್ಕಾರದ ಹಿಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ. ತಾಲೂಕು ಸಂಘಕ್ಕೆ ಬೇಕಾದ ಸೌಲಭ್ಯ ಒದಗಿಸಲು ಬದ್ಧವಾಗಿದ್ದು, ಎರಡು ಎಕರೆ ನಿವೇಶನ ನೀಡಿ ಮತ್ತೂಂದು ಭವನ ನಿರ್ಮಾಣಕ್ಕೆ ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯಮಟ್ಟದ ಇನ್ನುಳಿದ ನೌಕರರ ಬೇಡಿಕೆಗೆ ಸಂಘದ ರಾಜ್ಯಾಧ್ಯಕ್ಷರೊಂದಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರಕ್ಕೆ ಶ್ರಮಿಸಲಾಗುವುದು ಎಂದರು.
ಮಾದನಹಿಪ್ಪರಗಾ ಮಠದ ಶ್ರೀ ಅಭಿನವ ಶಿವಲಿಂಗ ಮಹಾ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್. ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ತಾಪಂ ಇಒ ಡಾ| ಸಂಜಯ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸಂತಾಬಾಯಿ ಅಕ್ಕಿ, ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಅಬ್ದುಲ್ ಅಜೀಜ್ ಹಾಗೂ ಸಂಘದ ಜಿಲ್ಲೆ, ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಂಘದ ತಾಲೂಕು ಅಧ್ಯಕ್ಷ ಸಿದ್ಧರಾಮ ವಿ. ಪಾಟೀಲ ಸ್ವಾಗತಿಸಿದರು, ಮುಖ್ಯ ಶಿಕ್ಷಕ ಡಿ.ಎನ್. ಪಾಟೀಲ ನಿರೂಪಿಸಿದರು, ಜಾಫರ್ ಅನ್ಸಾರಿ ವಂದಿಸಿದರು.
ಸಂಘದ ಉಪಾಧ್ಯಕ್ಷ ಬನಸಿದ್ಧ ಬಿರಾದಾರ, ಕೋಶಾಧ್ಯಕ್ಷ ಲೋಕೇಶ ಜಾಧವ, ಉಮೇಶ ಮಡಿವಾಳ, ಸಂತೋಷ, ಶ್ರೀನಿವಾಸ ಕುಲಕರ್ಣಿ, ಭೋಗಲಿಂಗಪ್ಪ, ಅಂಕುಶ ಚಳಕಾಪುರ, ವಿಶ್ವನಾಥ ಘೋಡಕೆ, ಶಿವಣ್ಣಾ ಬಿರಾದಾರ, ಶ್ರೀಶೈಲ ಕುಡಕಿ, ಮಲ್ಲಮ್ಮಾ, ಅವಿನಾಶ ಸಂಗೋಳಗಿ, ಸಿದ್ಧಲಿಂಗ ಅವುಟೆ, ಶ್ರೀಕಾಂತ ಭೂಸನೂರ, ಮಲ್ಲಿಕಾರ್ಜುನ ಕಾಟಕರ್, ಶರಣಬಸಪ್ಪ, ಮಹಾದೇವ ಗುಣಕಿ, ಪ್ರಕಾಶ ಖಾನಾಪುರೆ ಮತ್ತಿತರರು ಇದ್ದರು. ದೂರದರ್ಶನ ಕಲಾವಿದ ಶಂಕರ ಹೂಗಾರ, ಶಿವಶರಣಪ್ಪ ಪೂಜಾರಿ, ತಬಲಾ ಸಾಥಿ ಅಶೋಕ ಆಳಂದ ಸಂಗೀತ ಸೇವೆ ನೀಡಿದರು. ವಿವಿಧ ಇಲಾಖೆಯ 60 ನೌಕರರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.