ಬಸ್‌ಗಳಿಗೆ ಹಾನಿ: 7 ಸಾರಿಗೆ ನೌಕರರ ಬಂಧನ
6 ನಿರ್ವಾಹಕರು, 28 ಮಂದಿ ಚಾಲಕರು ಕಂ ನಿರ್ವಾಹಕರು ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದ್ದಾರೆ.
Team Udayavani, Apr 17, 2021, 6:19 PM IST
ಕಲಬುರಗಿ: ರಾಜ್ಯಾದ್ಯಂತ ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗದ ಅನ್ವಯ ಸಂಬಳ ಜಾರಿಗೆ ಮಾಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಮುಷ್ಕರ ಶುಕ್ರವಾರ ಹತ್ತನೇ ದಿನಕ್ಕೆ ಪೂರೈಸಿದೆ. ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಮತ್ತು ಸಾರಿಗೆ ಬಸ್‌ಗಳನ್ನು ಜಖಂಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯಕ್ಕೆ ಅಡ್ಡಿ, ಬಸ್‌ಗಳಿಗೆ ಹಾನಿ ಮತ್ತು ಮುಷ್ಕರಕ್ಕೆ ಪ್ರಚೋದನೆ ಕುರಿತಂತೆ 52 ನೌಕರರ ವಿರುದ್ಧ 22 ಪೊಲೀಸ್ ಕೇಸ್ ದಾಖಲಾಗಿವೆ. ಇದರಲ್ಲಿ ಬಸ್ ಗಳಿಗೆ ಹಾನಿ ಸಂಬಂಧ 12 ಪ್ರಕರಣಗಳು ದಾಖಲಾಗಿದ್ದು, ಕೃತ್ಯ ಎಸಗಿದ ಎಂಟು ಜನರ ಪೈಕಿ ಈಗಾಗಲೇ ಏಳು ಸಿಬ್ಬಂದಿ ಬಂಧಿಸಲಾಗಿದೆ.
ಅಲ್ಲದೇ, ಮುಷ್ಕರದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾದ ಆರೋಪದ ಮೇಲೆ ಇದುವರೆಗೆ 55 ಜನ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇದರಲ್ಲಿ 16 ಚಾಲಕರು, 6 ನಿರ್ವಾಹಕರು, 28 ಮಂದಿ ಚಾಲಕರು ಕಂ ನಿರ್ವಾಹಕರು ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದ್ದಾರೆ. ಜತೆಗೆ ಇದುವರೆಗೆ ಬೇರೆ-ಬೇರೆ 135 ನೌಕರರನ್ನು ವರ್ಗಾವಣೆ ಮಾಡಲಾಗಿದೆ.
ಮುಷ್ಕರದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೆ ಏ.7ರಿಂದ 16ರ ವರೆಗೆ 50 ಕೋಟಿ ರೂ. ಆದಾಯದಲ್ಲಿ ಕೊರತೆಯುಂಟಾಗಿದೆ. ಇದುವರೆಗೆ ಕರ್ತವ್ಯಕ್ಕೆ ಹಾಜರಾದ 9,262 ನೌಕರರಿಗೆ 17.96 ಕೋಟಿ ರೂ. ಗಳಷ್ಟು ಮಾರ್ಚ್ ತಿಂಗಳ ವೇತನ ಪಾವತಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.