ಸಿಎಂ ಪ್ರವಾಸ ಯಶಸ್ಸಿಗೆ ಶ್ರಮಿಸಲು ಸೂಚನೆ
Team Udayavani, Jan 2, 2022, 11:54 AM IST
ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜ.4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದು ಪ್ರಭಾರಿ ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ದಿಲೀಷ್ ಸಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಜ.4ರಂದು ಬೆಳಗ್ಗೆ 11 ಗಂಟೆಗೆ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗವಹಿಸುವರು. ನಂತರ ಬೆಳಗ್ಗೆ 11:45ಕ್ಕೆ ಡಾ| ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕಿನ ನೂತನ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸುವರು. ಇದೇ ವೇಳೆ ಸಾಲ ಮನ್ನಾ ಆದ ರೈತರಿಗೆ ಸಾಲ ವಿತರಿಸುವರು. ನಂತರ ಎಟಿಎಂ ಮೊಬೈಲ್ ವ್ಯಾನ್ ಉದ್ಘಾಟನೆ ಹಾಗೂ 300 ಸಹಕಾರ ಸಂಘಗಳಿಗೆ ಎಟಿಎಂ ಯಂತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ಗಂಟೆಗೆ ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಈ ಮೂರು ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್ ಅವರಿಗೆ ಸೂಚಿಸಿದರು. ಕಾರ್ಯಕ್ರಮಗಳ ಸ್ಥಳಗಳಲ್ಲಿ ವೇದಿಕೆ ಅಲಂಕಾರ, ಸ್ವತ್ಛತೆ, ಪೊಲೀಸ್ ಭದ್ರತೆ, ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಅಂದು ಯಾರು ಗೈರಾಗುವಂತಿಲ್ಲ. ಮುಖ್ಯಮಂತ್ರಿಗಳ ಪ್ರವಾಸ ಯಶಸ್ಸಿಗೆ ವಿವಿಧ ಸಮಿತಿ ರಚಿಸಲಾಗಿದ್ದು, ಅದರಂತೆ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವಜನರಿಂದ, ಯುವಜನರಿಗಾಗಿ, ಯುವಜನರಿಗೋಸ್ಕರ ರಾಜ್ಯ ಸರ್ಕಾರ ರೂಪಿಸುತ್ತಿರುವ ನೂತನ ಯುವ ನೀತಿ-2021-22 ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು. ಎಸ್‌ಪಿ ಇಶಾ ಪಂತ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಕೆ.ಆರ್.ದುಗೇìಶ, ಸಹಾಯಕ ಆಯುಕ್ತೆ ಮೋನಾ ರೋಟ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು
ಹೈಸ್ಕೂಲ್‌ನಲ್ಲಿ ಹಿಂದಿ ಬದಲಿಗೆ ಕೌಶಲ ವಿಷಯ ಆಯ್ಕೆಗೆ ಒತ್ತಡ
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್