ಅಮೃತ ಮಹೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ
Team Udayavani, Aug 5, 2022, 2:46 PM IST
ಆಳಂದ: ತಾಲೂಕು ಆಡಳಿತದಿಂದ ಆ.15 ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಸುಭಾಷ ಗುತ್ತೇದಾರ ಅಧ್ಯಕ್ಷತೆಯಲ್ಲಿ ಗುರುವಾರ ಕರೆದ ಅಧಿಕಾರಿಗಳ ಸಭೆಯಲ್ಲಿ ಅಮೃತ ಮಹೋತ್ಸವ ಆಚರಣೆ ರೂಪುರೇಷೆ ಕುರಿತು ಚರ್ಚಿಸಿ ಅದ್ಧೂರಿ ಆಚರಣೆಗೆ ನಿರ್ಧರಿಸಲಾಯಿತು. ಶಾಸಕ ಸುಭಾಷ ಗುತ್ತೇದಾರ ಮಾತ ನಾಡಿ, ಅಮೃತ ಮಹೋತ್ಸವ ಅದ್ಧೂರಿ ಆಚರಣೆಯಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು. ಶ್ರೀರಾಮ ಮಾರುಕಟ್ಟೆಯಲ್ಲಿ ಕೈಗೊಳ್ಳುವ ಸಾರ್ವಜನಿಕ ಧ್ವಜಾರೋಹಣದ ಕಂಬವು 75 ಅಡಿ ಎತ್ತರದ ಕಂಬದಲ್ಲಿ ರಾಷ್ಟ್ರಧ್ವಜಾರೋಣ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಿ. ಸಾರ್ವಜನಿಕರನ್ನು ಆಹ್ವಾನಿಸಿ, ಆಸನದ ವ್ಯವಸ್ಥೆ ಮಾಡಿ, ಪೆಂಡಾಲ್ ಹಾಕಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮಾತನಾಡಿ, ಆ.15ರಂದು 8 ಗಂಟೆಗೆ ತಹಶೀಲ್ದಾರ್ ಸೇರಿ ಇನ್ನುಳಿದ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ 9ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮತ್ತು ಸಾರ್ವಜನಿಕ ಸಮಾರಂಭ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಆ. 13ರಂದು ಬೆಳಗ್ಗೆ 9:30ಗಂಟೆಗೆ ತಾಲೂಕು ಆಡಳಿತಸೌಧದಿಂದ 5ಕಿ.ಮೀ ಅಂತರದ ಪಟ್ಟಟಣದ ಶ್ರೀರಾಮ ಮಾರುಕಟ್ಟೆ ವರೆಗೆ ರಾಷ್ಟ್ರಧ್ವಜದೊಂದಿಗೆ ಬೈಕ್ ರ್ಯಾಲಿ ಮೂಲಕ ತಿರಂಗಾ ಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು.
ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ ಮಾತನಾಡಿ, ಸಮಾರಂಭ ಕೈಗೊಳ್ಳುವ ಸ್ಥಳದಲ್ಲಿ ಸ್ವತ್ಛತೆ, ನೀರಿನ ವ್ಯವಸ್ಥೆ ಮತ್ತಿತರ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ ಮಾತನಾಡಿ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ, ಪದಕ ಪುರಸ್ಕಾರ ಆಯೋಜಿಸಲಾಗುವುದು ಎಂದರು.
ಜಿಪಂ ಎಇಇ ನಾಗಮೂರ್ತಿ ಕೆ. ಶೀಲವಂತ, ಬಿಸಿಎಂ ಅಧಿಕಾರಿ ಬಸವರಾಜ ಕಾಳೆ, ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮ ಸುತಾರ, ಕೈಗಾರಿಕೆ ಅಧಿಕಾರಿ ಜಾಫರ್ ಅನ್ಸಾರಿ, ಸಿಡಿಪಿಒ ಶಿವಮೂರ್ತಿ ಕುಂಬಾರ, ಎಡಿಎಲ್ ಶಿವಕಾಂತ ಜಿಡಗೇಕರ, ನಾಡ ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ನೋಂದಣಿ ಇಲಾಖೆಯ ಶೃತಿ, ತೋಟಗಾರಿಕೆಯ ಶಿವಣ್ಣಾ ಬಿರಾದಾರ, ಅಕ್ಷರದಾಸೋಹ ಅಧಿಕಾರಿ ವಂದನಾ, ರೇಷ್ಮೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.