ಸರ್ಕಾರಿ ಯೋಜನೆ ಮನೆಗಳಿಗೆ ತಲುಪಿಸಿ
Team Udayavani, Nov 18, 2021, 12:13 PM IST
ಜೇವರ್ಗಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೂ ತಲುಪಿಸುವ ಮಹತ್ತರವಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾದ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.
ಪಟ್ಟಣದ ಮಹಿಬೂಬ್ ಫಂಕ್ಷನ್ ಹಾಲ್‌ನಲ್ಲಿ ಜೇವರ್ಗಿ ಬಿಜೆಪಿ ಮಂಡಲ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರೇ ಜೀವಾಳ ಎಂದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ದಿನ- ದಲಿತರು, ಬಡವರು, ಹಿಂದುಳಿದ ವರ್ಗದವರು ಸೇರಿದಂತೆ ಜನಪರ, ರೈತಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಾನುರಾಗಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೋಭಾ ಬಾಣಿ, ಬಿಜೆಪಿ ಮಂಡಲ ಅಧ್ಯಕ್ಷ ಭೀಮರಾವ್ ಗುಜಗೂಂಡ, ಮಲ್ಲಿನಾಥಗೌಡ ಪಾಟೀಲ ಯಲಗೋಡ, ರಮೇಶಬಾಬು ವಕೀಲ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಧರ್ಮಣ್ಣ ಇಟಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹು ಗೋಗಿ, ಕಲಬುರಗಿ ವಿಭಾಗದ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ ಹಾಗೂ ಮುಖಂಡರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.