ಯೋಜನೆ ಫಲಾನುಭವಿಗೆ ತಲುಪಿಸಿ
Team Udayavani, Mar 18, 2022, 2:48 PM IST
ಕಲಬುರಗಿ: ಬಡವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಹಲ ವಾರು ಯೋಜನೆಗಳಿದ್ದು, ಅವುಗಳು ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಸಾರ್ಥಕತೆ ಹೊಂದಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರಣಗೌಡ ಡಿ. ಪಾಟೀಲ ಹೇಳಿದರು.
ನಗರದ ಪಂಚಾಯತ್ ರಾಜ್ ಕಚೇರಿ ಆವರಣದಲ್ಲಿ 2020-21ನೇ ಸಾಲಿನ ಜಿ.ಪಂ ಅಂಗವಿಕಲರ ಅನುದಾನದಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮದ ಅವಿನಾಶ ಸಿಂಗೆ ಅವರಿಗೆ ತ್ರಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದರು.
ಐದು ವರ್ಷ ಕಾಲ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕ್ಷೇತ್ರದಲ್ಲಿ ಮಾದರಿ ಕಾರ್ಯ ಕೈಗೊಂಡಿದ್ದೇನೆ. ವಿ.ಕೆ. ಸಲಗರದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ರಾಜ್ಯದಲ್ಲೇ ಮಾದರಿ ಎನ್ನಬಹುದಾದ ರೈತರಿಗೆ ನೇರವಾಗಿ ಮಾರಾಟದ ಅವಕಾಶ ಕಲ್ಪಿಸುವ ಸಂತೆ ಕಟ್ಟೆ ನಿರ್ಮಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗಿದೆ ಎಂದರು.
ಕಲಬುರಗಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ.ರಾಮಕೃಷ್ಣ ತ್ರಿಚಕ್ರ ವಾಹನ ವಿತರಿಸಿ, ಒಳ್ಳೆಯ ಕೆಲಸ ಮಾಡಿದಾಗ ಜನರು ನೆನಪಿಸಿಕೊಳ್ಳುತ್ತಾರೆ. ಶರಣಗೌಡ ಪಾಟೀಲ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಮುಖಂಡರಾದ ಶರಣಬಸ್ಸಪ್ಪ ಹಾಗರಗಿ, ಕಮಲಾಪುರ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷೆ ನಿರ್ಮಲಾ ಬರಗಾಲಿ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.