ಹಡಪದ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯ
Team Udayavani, Feb 17, 2022, 10:04 AM IST
ಕಲಬುರಗಿ: ಸಾಮಾಜಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿರುವ ಹಡಪದ ಸಮಾಜ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ತಾಲೂಕು ಘಟಕ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಡಪದ, ನಾವಿ, ಕ್ಷೌರಿಕ, ನಾವಲಿಗ, ನಾಯಿಂದಾ, ಭಂಡಾರಿ ಹೀಗೆ ವಿವಿಧ ವಿಭಾಗದಲ್ಲಿ ಆಯಾ ಪದಗಳಿಂದ ಕರೆಸಿಕೊಳ್ಳುವ ಸಮುದಾಯವು ರಾಜ್ಯದ 20 ಜಿಲ್ಲೆಗಳಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಸಮುದಾಯದ ಪ್ರಗತಿಗಾಗಿ ರಾಜ್ಯ ಸರ್ಕಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು. ಮಂಡಳಿಗೆ 50 ಕೋಟಿ ರೂ. ಅನುದಾನ ಮೀಸಲಿಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹಡಪದ ಅಪ್ಪಣ್ಣನವರ ಪೀಠ ಇರುವ ತಂಗಡಗಿ ಮಠದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಹಡಪದ ಸಮಾಜವನ್ನು ಪ್ರಗರ್ವ-1 ಅಥವಾ ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಸಮುದಾಯದ ಮುಖಂಡರಾದ ಈರಣ್ಣ ಹಡಪದ ಅವರನ್ನು ಯಾವುದಾದರೂ ಒಂದು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿದರು.
ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ತೊನಸನಳ್ಳಿ, ಗೌರವಾಧ್ಯಕ್ಷ ಮಲ್ಲನಗೌಡ ಫರಹತಾಬಾದ, ಪ್ರಧಾನ ಕಾರ್ಯದರ್ಶಿ ವಿನೋದ ಅಂಬಲಗಿ, ಮುಖಂಡರಾದ ರಮೇಶ ಕೌಲಗಾ, ಬಸವರಾಜ, ರಮೇಶ ಹಡಪದ, ಸುನೀಲಕುಮಾರ ಭಾಗಹಿಪ್ಪರಗಾ, ಮಲ್ಲಿಕಾರ್ಜುನ ಸುಗೂರ, ಭೀಮರಾಯ ಹಡಪದ, ಬಸವರಾಜ ಹಳ್ಳಿಶಹಾಬಾದ, ರೇವಣಸಿದ್ಧಪ್ಪ, ಶಿವಾನಂದ ಬಬಲಾದಿ, ಶರಣು ರಾಜಾಪೂರ, ಶಂಕರ ಹರವಾಳ, ಮಲ್ಲು ಅವರಾದ, ರಮೇಶ ಮಲಕೂಡ ವಕೀಲರು, ಸಿದ್ರಾಮ ಯಾಗಾಪೂರ, ಶಿವುಕುಮಾರ ಸಿಂದಗಿ, ಮಲ್ಲು ಬೆಳಗುಪ್ಪಿ, ಅರುಣ ಗೊಬ್ಬೂರು, ಸಂದಿಧೀಪ ಮಹಾಗಾಂವ್, ನಾಗರಾಜ ಸಾತನೂರ ಹಾಗೂ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.