ಕೂಡು ರಸ್ತೆ ದುರಸ್ತಿಗೆ ಆಗ್ರಹ
Team Udayavani, Jul 8, 2022, 3:49 PM IST
ಚಿಂಚೋಳಿ: ಸೇಡಂ ಮತಕ್ಷೇತ್ರಕ್ಕೆ ಒಳಪಟ್ಟಿರುವ ತಾಲೂಕಿನ ಇರಗಪಳ್ಳಿ- ಬುರಗಪಳ್ಳಿ ಗ್ರಾಮದ ಕೂಡು ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ವಾಹನ ಗಳು ರಸ್ತೆಯಲ್ಲೇ ಸಿಲುಕಿಕೊಂಡು ಶಾಲೆ ಸಮಯಕ್ಕೆ ಹೋಗಲು ವಿದ್ಯಾರ್ಥಿ ಗಳಿಗೆ ತೊಂದರೆಯಾಗುತ್ತಿದೆ ಎಂದು ಇರಗಪಳ್ಳಿ ಶಾಲೆ, ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬುರಗಪಳ್ಳಿ ಹತ್ತಿರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ವಿದ್ಯಾರ್ಥಿಗಳು ಇರಗಪಳ್ಳಿ ಗ್ರಾಮದಿಂದ ಗಣಾಪುರ ಸರ್ಕಾರಿ ಪ್ರೌಢ ಶಾಲೆಗೆ ಟಂಟಂ ವಾಹನದಲ್ಲಿ ಬರುವ ಸಂದರ್ಭದಲ್ಲಿ ಕೆಸರಿನಲ್ಲಿ ಆಯತಪ್ಪಿ ಬಿದ್ದಿದ್ದರಿಂದ ವಿದ್ಯಾರ್ಥಿಗಳ ಬಟ್ಟೆ ಮತ್ತು ಪಠ್ಯಪುಸ್ತಕಗಳು ಕೆಸರುಮಯವಾಗಿದ್ದವು. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿನಿಯರು ಶಾಲೆಗೆ ಹೋಗದೇ ಮನೆಗೆ ತೆರಳಿದ್ದರು. ಇದನ್ನು ಗಮನಿಸಿದ ಪಾಲಕರು ಮಕ್ಕಳೊಂದಿಗೆ ಆಗಮಿಸಿ ಬುರಗಪಳ್ಳಿ ಗ್ರಾಮದ ರಸ್ತೆ ತಡೆ ನಡೆಸಿದರು.
ಇರಗಪಳ್ಳಿ ಗ್ರಾಮದ ಹತ್ತಿರ ಹರಿಯುವ ಮುಲ್ಲಾಮಾರಿ ನದಿಗೆ ಕಳೆದ ಎರಡು ವರ್ಷದ ಹಿಂದೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಿಸಲಾಗಿದೆ. ಆದರೆ ಸೇತುವೆಗೆ ಕೂಡು ರಸ್ತೆ ನಿರ್ಮಿಸಿಲ್ಲ. ಇದರಿಂದಾಗಿ ರಸ್ತೆ ಕೆಸರುಮಯವಾಗಿದೆ. ರಸ್ತೆಯಲ್ಲಿ ಭಾರಿ ತೆಗ್ಗುಗಳು ಬಿದ್ದಿವೆ. ಶಾಲೆಯಿಂದ ಮನೆಗೆ ಬರುವ ಸಂದರ್ಭದಲ್ಲಿ ಅಟೋಗಳು ಅನೇಕ ಸಲ ಪಲ್ಟಿಯಾಗಿವೆ ಎಂದು ಕರ್ಚಖೇಡ ಗ್ರಾಪಂ ಉಪಾಧ್ಯಕ್ಷ ಶ್ರೀಕಾಂತ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ನಾಗಪ್ಪ ಪೂಜಾರಿ, ಹಣಮಂತ ಹೊಸಮನಿ, ಇಬ್ರಾಹಿಂ ಪಟೇಲ್, ದಳಪತಿ, ಸುಭಾನರೆಡ್ಡಿ, ಕೃಷ್ಣಾರೆಡ್ಡಿ, ಶಿವರಾಜ, ಕೈಲಾಶ ಅಶೋಕ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.