ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Jul 4, 2022, 12:42 PM IST
ಚಿಂಚೋಳಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಜಟ್ಟೂರ ಗ್ರಾಮದ ಸರಕಾರಿ ಶಾಲೆ ವಿದ್ಯಾರ್ಥಿನಿಯರು ಚಿಂಚೋಳಿ ಬಸ್ ಡಿಪೋ ಹತ್ತಿರ ಪ್ರತಿಭಟನೆ ನಡೆಸಿದರು.
ತಾಲೂಕಿನ ಜಟ್ಟೂರ, ಹಲಕೋಡಾ, ಪೋತಂಗಲ, ವೆಂಕಟಾಪೂರ ಗ್ರಾಮಗಳಿಗೆ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಶಾಲೆಗಳಿಗೆ ಹೋಗಲು ತೊಂದರೆ ಆಗಿದೆ. ಬಸ್ ಬಾರದೇ ಇರುವುದರಿಂದ ಶಾಲೆಗೆ ಹೋಗದೇ ಮನೆಯಲ್ಲಿ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತೆಲಂಗಾಣ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ಈ ಗ್ರಾಮಗಳಿಗೆ ಸರಿಯಾಗಿ ಬಸ್ ಬರುತ್ತಿಲ್ಲ. ವಿದ್ಯಾಭ್ಯಾಸಕ್ಕಾಗಿ ಪ್ರತಿನಿತ್ಯ ನಿಡಗುಂದಾ, ಸೇಡಂ ಹೋಗುತ್ತೇವೆ. ಆದರೆ ಸರಿಯಾಗಿ ಬಸ್ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಟ್ಟೂರ್-ನಿಡಗುಂದಾ 8 ಕಿ.ಮೀ ದೂರ ಇರುವುದರಿಂದ ನಡೆದುಕೊಂಡು ಹೋಗುವುದಕ್ಕೆ ತುಂಬಾ ತೊಂದರೆ ಆಗುತ್ತಿದೆ. ಸೇಡಂ ಶಾಸಕರಿಗೆ ಮತ್ತು ಚಿಂಚೋಳಿ ಬಸ್ ಡಿಪೋ ವ್ಯವಸ್ಥಾಪಕರಿಗೆ ಅನೇಕ ಸಲ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಈಗ ಶಾಲೆ ಕಾಲೇಜುಗಳು ಪ್ರಾರಂಭ ಆಗಿವೆ. ತರಗತಿಗಳು ನಡೆಯುತ್ತಿವೆ. ಸಮಯಕ್ಕೆ ಸರಿಯಾಗಿ ಹೋಗದೇ ಇರುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ಜಟ್ಟೂರ, ಹಲಕೋಡ, ಪೋತಂಗಲ, ವೆಂಕಟಾಪೂರ ಗ್ರಾಮಗಳಿಗೆ ಕೂಡಲೇ ಬಸ್ ಸಂಚಾರ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕೆಂದು ಚಿಂಚೋಳಿ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಜಟ್ಟೂರ ಗ್ರಾಪಂ ಅಧ್ಯಕ್ಷ ವೆಂಕಟರೆಡ್ಡಿ, ಶ್ರೀಶೈಲಂ, ಬಿಚ್ಚಪ್ಪ, ಭೀಮಪ್ಪ, ಶ್ರೀನಿವಾಸ ಹಾಗೂ ಗ್ರಾಮಸ್ಥರು ಶಾಲೆ ಮಕ್ಕಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.