ದೇಗುಲ ಸರ್ಕಾರಿ ವಶಕ್ಕೆ ಪಡೆಯಲು ಆಗ್ರಹ
Team Udayavani, Mar 16, 2022, 1:30 PM IST
ಚಿತ್ತಾಪುರ: ತಾಲೂಕಿನ ದಂಡಗುಂಡ ಗ್ರಾಮದ ಐತಿಹಾಸಿಕ ಶ್ರೀ ಬಸವಣ್ಣ ದೇವಸ್ಥಾನವು ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಈಗಿರುವ ಆಡಳಿತ ಮಂಡಳಿ ರದ್ದುಪಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ವೇಳೆ ದೇವಸ್ಥಾನದ ಪೂಜಾರಿ ವಿದ್ಯಾನಂದ ಹಿರೇಮಠ ಸುದ್ದಿಗಾರರೊಂದಿಗೆ ಮಾತನಾಡಿ, ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಎಂದು ಕಳೆದ 2003ರಲ್ಲಿ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆದರೆ ಸಂಬಂಧಟಪ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯ ವರೆಗೆ ಈ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಿಲ್ಲ ಎಂದು ಆರೋಪಿಸಿದರು.
ದೇವಸ್ಥಾನದ ಟ್ರಸ್ಟ್ ಆಡಳಿತ ಮಂಡಳಿ ಅನಧಿಕೃತವಾಗಿ ಮುಂದುವರಿದಿದೆ. ಅಲ್ಲದೇ ದೇವಸ್ಥಾನದ ಲೆಕ್ಕಪತ್ರವನ್ನು ಟ್ರಸ್ಟ್ ಸದಸ್ಯರೇ ನೋಡಿಕೊಳ್ಳುತ್ತಿದ್ದಾರೆ. ದೇಗುಲಕ್ಕೆ ಸಂಬಂದಿಸಿದಂತೆ ಬ್ಯಾಂಕ್ ಖಾತೆಯಲ್ಲಿ ಕೋಟ್ಯಂತರ ರೂ., ಅಪಾರವಾದ ಬಂಗಾರದ ಒಡವೆಗಳು, ಬೆಳ್ಳಿ, ಕಂಚಿನ ಗಂಟೆಗಳು ಇವೆ. ಆದ್ದರಿಂದ ದೇವಸ್ಥಾನದ ಈಗಿನ ಆಡಳಿತ ಮಂಡಳಿ ಸದಸ್ಯರನ್ನು ವಜಾಗೊಳಿಸಿ ಮುಜರಾಯಿ ಇಲಾಖೆಗೆ ವಶಪಡಿಸಿಕೊಳ್ಳಬೇಕು. ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿ ಸದಸ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಗುರುರಾಜ ಪೂಜಾರಿ, ಶರಣಗೌಡ ಪೊಲೀಸ್ ಪಾಟೀಲ, ಮಲ್ಲಣ್ಣ ಕೋರೆ, ಶಿವಲಿಂಗರೆಡ್ಡಿ, ಬಸ್ಸಪ್ಪ ಆಡಕಾಯಿ, ವಿಶಾಲ ಸೌಕಾರ, ಶಿವಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.