ಕರ್ತವ್ಯ ಲೋಪ: ಮೂವರು ಅಧಿಕಾರಿಗಳ ಅಮಾನತು
Team Udayavani, Jul 23, 2022, 12:56 PM IST
ಕಲಬುರಗಿ/ಚಿಂಚೋಳಿ: ವಿವಿಧ ಇಲಾಖೆಗಳಲ್ಲಿ ಕರ್ತವ್ಯಲೋಪ ಎಸಗಿರುವ ಜೆಇ ಸೇರಿದಂತೆ ಮೂವರು ಅಧಿಕಾರಿಗಳನ್ನು ಜಿಪಂ ಸಿಇಒ ಗಿರೀಶ ಬದೋಲೆ ಅಮಾನತು ಮಾಡಿದ್ದಾರೆ.
ಚಿಂಚೋಳಿ ತಾಲೂಕಿನ ವಿವಿಧ ಗ್ರಾಮ ಗಳಿಗೆ ಭೇಟಿ ನೀಡಿ ಸರ್ಕಾರಿ ಕೆಲಸ ಮತ್ತು ಅಂಗನವಾಡಿಗಳಲ್ಲಿ ಆಹಾರ ವಿತರಣೆ ಮತ್ತು ಇತರೆ ಕಾಮಗಾರಿ ವೀಕ್ಷಣೆ ವೇಳೆ ಕಳಪೆ ಕಾಮಗಾರಿ, ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಿರಿಯ ಇಂಜಿನಿಯರ್, ಮುಖ್ಯಶಿಕ್ಷಕ, ಪಿಡಿಒ ಅವರನ್ನು ಅಮಾನತು ಮಾಡಿದ್ದಾರೆ.
ಮೇಲ್ವಿಚಾರಕಿಗೆ ನೋಟಿಸ್ ಜಾರಿ: ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಒ ಬದೋಲೆ, ಆಹಾರ ವಿತರಣೆ ಪರಿಶೀಲನೆ ಮಾಡಿದಾಗ ಮಕ್ಕಳಿಗೆ ಆಹಾರ ವಿತರಣೆ ಸಮರ್ಪಕವಾಗಿ ಆಗದೇ ಇರುವುದು ಬಯಲಾಯಿತು. ಈ ವೇಳೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸಿದರು. ಅಲ್ಲದೇ, ಮೇಲ್ವಿಚಾರಕಿಗೆ ನೋಟಿಸ್ ಜಾರಿ ಮಾಡಿದರು.
ಕಿರಿಯ ಅಭಿಯಂತರ ಅಮಾನತು
ಚಂದ್ರಂಪಳ್ಳಿ ಗ್ರಾಮದಲ್ಲಿ ಜೆಜೆಎಂ ಯೋಜನೆ ಅಡಿ ಪೈಪ್ ಲೈನ್ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಇರುವುದು ಕಂಡುಬಂತು. ಆಗ ಇದಕ್ಕೆ ಸಂಬಂಧಪಟ್ಟ ಆರ್‌ಡಬ್ಲ್ಯೂಎಸ್ ಇಲಾಖೆಯ ಕಿರಿಯ ಅಭಿಯಂತರರ ಕರ್ತವ್ಯ ನಿರ್ಲಕ್ಷ್ಯ ಹಾಗೂ ಸರ್ಕಾರ ನಿಗದಿಪಡಿಸಿದ ಅಂದಾಜು ಪಟ್ಟಿಯಂತೆ ಕಾಮಗಾರಿ ತೆಗೆದುಕೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತು ಮಾಡಲು ಆದೇಶಿಸಿದರು.
ಮುಖ್ಯಶಿಕ್ಷಕ-ಪಿಡಿಒ ಅಮಾನತು
ಚಂದ್ರಂಪಳ್ಳಿ ಗ್ರಾಮದ ಶಾಲೆಯ ಮುಖ್ಯಶಿಕ್ಷಕರು ಮೊಟ್ಟೆ ವಿತರಣೆಯಲ್ಲಿ ಕರ್ತವ್ಯ ಲೋಪ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಕುಂಚಾವರಂ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಬಂದಿರುವುದನ್ನು, ಕರ್ತವ್ಯ ಲೋಪ ಎಸಗಿರುವುದನ್ನು ಪರಿಗಣಿಸಿ ಪಂಚಾಯಿತಿ ಪ್ರಭಾರಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಿದರು. ಆ ನಂತರ ಶಾದಿಪುರ ಗ್ರಾಮದ ಅಮೃತ ಕೆರೆ ವೀಕ್ಷಿಸಿದರು. ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಹಾಗೂ ಮೂಲಭೂತ ಸೌಲಭ್ಯ ಇಲ್ಲದ ತಾಂಡಾಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಜತೆ ಚರ್ಚಿಸಿದರು.
ತಾಪಂ ಇಒ ವೈ.ಎಲ್. ಹಂಪಣ್ಣ, ಎಇಇ ಪ್ರಕಾಶ ಕುಲಕರ್ಣಿ, ಎಇಇ ರಾಜೇಶ ಪಾಟೀಲ, ಡಾ| ಮಹಮ್ಮದ್ ಗಫಾರ, ಸಿಡಿಪಿಒ ಶರಣಬಸಪ್ಪ ಬೆಳಗುಂಪಿ ಮತ್ತು ವಲಯ ಅರಣ್ಯಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.