ಪಡಿತರ ವಿತರಣೆಯಲ್ಲಿ ಗೋಲ್‌ಮಾಲ್‌

ಫಲಾನುಭವಿಗಳಿಂದ ಹಣ ವಸೂಲಿ, ತೂಕದಲ್ಲಿ ವ್ಯತ್ಯಾಸ-ಆರೋಪ ದಾನಿಗಳಿಂದ ತಾಲೂಕಾಡಳಿತಕ್ಕೆ ಆಹಾರ ಪದಾರ್ಥ

Team Udayavani, Apr 9, 2020, 12:51 PM IST

09-April-10

ದೇವದುರ್ಗ: ದಾನಿಗಳು ನೀಡಿದ ಆಹಾರ ಪದಾರ್ಥಗಳನ್ನು ತಹಶೀಲ್ದಾರ್‌ ಕಚೇರಿಯಲ್ಲಿ ಸಂಗ್ರಹಿಸಲಾಗಿದೆ.

ದೇವದುರ್ಗ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರಿಗೆ ಪಡಿತರ ತಲುಪಿಸಲು ಏ.10ರ ವರೆಗೆ ಗಡುವು ನೀಡಲಾಗಿದ್ದು, ಆಹಾರಧಾನ್ಯ ವಿತರಣೆಯಲ್ಲಿ ಫಲಾನುಭವಿಗಳಿಂದ ಹಣ ವಸೂಲಿ, ತೂಕದಲ್ಲಿ ವ್ಯತ್ಯಾಸ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಗಾಣದಾಳ, ಕರ್ಕಹಳ್ಳಿ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆದಿದೆ.

ಬಿಪಿಎಲ್‌, ಅಂತ್ಯೋದಯ ಸೇರಿ 50 ಸಾವಿರಕ್ಕೂ ಹೆಚ್ಚು ಕಾರ್ಡ್‌ ಹೊಂದಿವೆ. 2500 ಹೊಸ ಕಾರ್ಡ್‌ಗಳು ಬಾಕಿ ಇದ್ದು, ಅಂತಹ ಫಲಾನುಭವಿಗಳು ಪಡಿತರದಿಂದ ವಂಚಿತರಾಗಿದ್ದಾರೆ. ಉಚಿತ ಆಹಾರ ವಿತರಣೆಯಲ್ಲಿ ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಗೋಲ್‌ಮಾಲ್‌: ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಏ.14ರ ವರೆಗೆ ಲಾಕ್‌ ಡೌನ್‌ ಘೋಷಣೆ ಹಿನ್ನೆಲೆ ರಾಜ್ಯ ಸರ್ಕಾರ ಪಡಿತರದಾರರಿಗೆ ಎರಡು ತಿಂಗಳ ಅಕ್ಕಿ, ಗೋ ದಿ ಪೂರೈಸಲು ಆದೇಶಿಸಿದೆ. ಆದರೆ ಇಲ್ಲಿನ ಕೆಲ ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯ ವಿತರಿಸುವಾಗ ತೂಕದಲ್ಲಿ ವ್ಯತ್ಯಾಸವಾಗುತ್ತದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ತಹಶೀಲ್ದಾರ್‌ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಣ ವಸೂಲಿ, ತೂಕದಲ್ಲಿ ಗೋಲ್‌ಮಾಲ್‌ ನಡೆದ ಹಿನ್ನೆಲೆ ಗಾಣಧಾಳ, ಕರ್ಕಹಳ್ಳಿ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಪಡಿತರ ಕಾರ್ಡ್‌ ಸೌಲಭ್ಯ ಇಲ್ಲದವರಿಗೂ ಉಚಿತ ಅಕ್ಕಿ, ಗೋದಿ ನೀಡಲಾಗುತ್ತಿದೆ ಎಂದು ಆದೇಶಿಸಿದ ಹಿನ್ನೆಲೆಯಲ್ಲಿ ಬಹುತೇಕರು ನ್ಯಾಯಬೆಲೆ ಅಂಗಡಿಗಳಿಗೆ ಅಲೆದು ಪಡಿತರ ಸಿಗದೇ ವಾಪಸ್‌ ಆಗುತ್ತಿದ್ದಾರೆ. ಹಂಚಿಕೆ ಮಾಡಲು ಸರ್ಕಾರದಿಂದ ಇನ್ನೂ ಆಹಾರ ಪೂರೈಕೆಯಾಗಿಲ್ಲ ಎನ್ನುವ ಉತ್ತರ ಅಂಗಡಿ ಮಾಲೀಕರಿಂದ ಕೇಳಿಬರುತ್ತಿದ್ದು, ನೂರಾರು ಬಡವರು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುವಂತಾಗಿದೆ.

ದಾನಿಗಳಿಂದ ಆಹಾರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರು-ನಿರ್ಗತಿಕರಿಗೆ ಆಹಾರ ವಿತರಣೆಗಾಗಿ ದಾನಿಗಳ ಮೂಲಕ ಅಕ್ಕಿ, ಬೇಳೆ, ಖಾರ, ಉಪ್ಪು, ಎಣ್ಣೆ, ಅರಿಶಿಣ, ಮಸಾಲೆ ಪ್ಯಾಕೇಟ್‌ ಸೇರಿ ಇತರೆ ಆಹಾರ ಪದಾರ್ಥಗಳನ್ನು ದಾನಿಗಳು ತಾಲೂಕಾಡಳಿತಕ್ಕೆ ನೀಡುತ್ತಿದ್ದಾರೆ.

ತೂಕದಲ್ಲಿ ವ್ಯತ್ಯಾಸ, ಹಣ ವಸೂಲಿ ದೂರು ಬಂದ ಹಿನ್ನೆಲೆ ಎರಡು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆದಿದೆ. ದಾನಿಗಳ ಮೂಲಕ ಆಹಾರ ಪದಾರ್ಥಗಳು ಬರುತ್ತಿದ್ದು, ಬಡವರು- ನಿರ್ಗತಿಕರನ್ನು ಗುರುತಿಸಿ ಹಂಚಿಕೆ ಮಾಡಲಾಗುತ್ತಿದೆ.
ಮಧುರಾಜ್‌ ಯಾಳಗಿ,
ತಹಶೀಲ್ದಾರ್‌

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.