ದೇವಲಗಾಣಗಾಪುರ; ಅದ್ಧೂರಿ ಮಾಘ ಉತ್ಸವ
ಹೊರ ರಾಜ್ಯದವರು ಪಾಲ್ಗೊಳ್ಳದಿರಲು ಡಿಸಿ ಆದೇಶಿಸಿದ್ದರು.
Team Udayavani, Mar 5, 2021, 5:36 PM IST
ಅಫಜಲಪುರ: ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರದಲ್ಲಿ ಮಾಘ ಉತ್ಸವ ನಿಮಿತ್ತ ಸಾವಿರಾರು ಭಕ್ತರ ಮಧ್ಯೆ ಮೊಸರು ಗಡಿಗೆ (ಗೋಪಾಳ ಕಾವಲಿ) ಒಡೆಯಲಾಯಿತು. ನಂತರ ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತರು ದತ್ತ ಮಹಾರಾಜರ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡು ಭಕ್ತಿ ಮೆರೆದರು. ತದನಂತರ ದತ್ತ ಮಹಾರಾಜರು ನಿರ್ಗುಣ ಪಾದುಕೆ ಇಟ್ಟು ಶ್ರೀಶೈಲಕ್ಕೆ ಹೋದ ದಿನದ ಸವಿ ನೆನಪಿಗಾಗಿ ಸನ್ಯಾಸಿಗಳ ಪಾದ ಪೂಜೆ ಮಾಡಲಾಯಿತು.
ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ, ಮಾಸ್ಕ್ ಧರಿಸುವಂತೆ, ಸ್ಯಾನಿಟೈಸರ್ ಬಳಸುವಂತೆ ಮುನ್ನೆಚ್ಚರಿಕೆ ಸೂಚನಾ ಫಲಕ ಹಾಕಿಸಿದ್ದೇವು. ಅಲ್ಲದೇ ಎಲ್ಲೆಡೆ ಸ್ಯಾನಿಟೈಸರ್ ವ್ಯವಸ್ಥೆ ಕೂಡಾ ಮಾಡಲಾಗಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಮದೇವ ರಾಠೊಡ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ:
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದ ಸುಕ್ಷೇತ್ರದಲ್ಲಿ ದೇವರ ಉತ್ಸವಗಳನ್ನು ಸರಳವಾಗಿ
ಆಚರಿಸಲು ಹಾಗೂ ಹೊರ ರಾಜ್ಯದವರು ಪಾಲ್ಗೊಳ್ಳದಿರಲು ಡಿಸಿ ಆದೇಶಿಸಿದ್ದರು. ಆದರೆ ದೇವಲ ಗಾಣಗಾಪುರದಲ್ಲಿ ನಡೆದ ಮಾಘ ಉತ್ಸವದಲ್ಲಿ ಮಹಾರಾಷ್ಟ್ರದ ಅಪಾರ ಭಕ್ತರು ಆಗಮಿಸಿದ್ದರು. ಅಲ್ಲದೇ ಅಂತರ ಕೂಡ ಕಾಪಾಡಿಕೊಂಡಿದ್ದು ಕಂಡುಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.