ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ
Team Udayavani, Nov 9, 2021, 1:45 PM IST
ಕಮಲಾಪುರ: ಗ್ರಾಮೀಣ ಮತಕ್ಷೇತ್ರದ ಚಿಂಚನಸೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ 203 ರೈತರಿಗೆ ಬಡ್ಡಿ ರಹಿತ ಸಾಲದ ಚೆಕ್‌ನ್ನು ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮಡು ವಿತರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಮತಕ್ಷೇತ್ರದ ಎಲ್ಲ ರೈತರಿಗೆ ಸಾಲ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಸಂಬಂಧ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ್ ಜತೆ ಮಾತನಾಡಿ, ಗ್ರಾಮೀಣ ಭಾಗದ ರೈತರಿಗೆ ಸಾಲ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಇದಕ್ಕೆ ಅವರು ಸ್ಪಂದಿಸಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಟಗಿ ಮಾತನಾಡಿ, ಒಂದು ಕೋಟಿ 55 ಲಕ್ಷ ರೂ. ಸಾಲವನ್ನು ನೀಡಲಾಗುತ್ತಿದ್ದು, ಪ್ರತಿ ರೈತರಿಗೆ 25 ಸಾವಿರ ರೂ. ಒದಗಿಸಲಾಗುತ್ತಿದೆ. ರೈತರು ಒಂದು ವರ್ಷದೊಳಗೆ ಸಾಲ ಮರುಪಾವತಿ ಮಾಡಬೇಕು. ಅಂದರೆ ಅವರಿಗೆ ದುಪ್ಪಟ್ಟು ಸಾಲ ನೀಡಲಾಗುವುದು ಎಂದು ಹೇಳಿದರು.
ಶ್ರೀ ಸಿದ್ಧಮಲ್ಲ ಶಿವಾಚಾರ್ಯರು, ಅಶೋಕ ಸಾವಳೇಶ್ವರ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಶಿನಾಥ ರಾಮನಾಥನ್. ಹರ್ಷವರ್ಧನ್ ಗುಗಳೆ, ಸಂಗಮೇಶ ನಾಗನಹಳ್ಳಿ, ಸತೀಶ ಮುಗಳಿ, ರಾಜಕುಮಾರ ಮಂಡಳೆ ಮಡಕಿ, ದೀಪಕ್, ಮಲ್ಲಿಕಾರ್ಜುನ ಮರತೂರಕರ್, ಹನುಮಂತ ಬಿರಾದಾರ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.