ಜಿಲ್ಲೆಗೆ ಸಿಕ್ಕಿದ್ದು ಡ್ರಾಮಾ ಸಂಸದ: ಪ್ರಿಯಾಂಕ್‌


Team Udayavani, Jan 7, 2022, 11:13 AM IST

6MP

ವಾಡಿ: ಚಿತ್ತಾಪುರ ತಾಲೂಕಿನ ಸನ್ನತಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಂಸದರು ಈ ನೆಲದಲ್ಲಿ ಸಾಮ್ರಾಟ್‌ ಅಶೋಕ ಚಕ್ರವರ್ತಿ ಹಾಗೂ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಶಿಲಾ ಶಾಸನ ಪತ್ತೆಯಾಗಿರುವುದು ತಮಗೆ ಗೊತ್ತೇ ಇರಲಿಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ. ಈ ಶಿಲಾಶಾಸನಗಳು ಪತ್ತೆಯಾಗಿ 21 ವರ್ಷಗಳ ನಂತರವಾದರೂ ಸಂಸದರಿಗೆ ಜ್ಞಾನೋದಯ ಆಗಿರುವುದು ಖುಷಿಯ ವಿಚಾರ. ಒಟ್ಟಿನಲ್ಲಿ ಜಿಲ್ಲೆಗೆ ಡ್ರಾಮಾ ಮಾಡುವ ಸಂಸದರು ಸಿಕ್ಕಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಟೀಕಿಸಿದರು.

ಪಟ್ಟಣದಲ್ಲಿ ಗುರುವಾರ 6 ಕೋಟಿ ರೂ. ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಬೌದ್ಧ ಸ್ತೂಪ ಸ್ಥಳದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ, ಭಾವಚಿತ್ರ ತೆಗೆಸಿಕೊಂಡು ದಲಿತರ ದಾರಿ ತಪ್ಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.

ತಾವು ಏಳು ವರ್ಷದ ಹಿಂದೆಯೇ ಸನ್ನತಿ ಅಭಿವೃದ್ಧಿಗೆ ಮತ್ತು ಇನ್ನಷ್ಟು ಸ್ಥಳದ ಉತ್ಖನನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದೇವು. ಮೋದಿ ಸರ್ಕಾರ ಇದುವರೆಗೂ ಈ ಕುರಿತು ಗಮನ ಹರಿಸಿಲ್ಲ. ಸನ್ನತಿ ಹೆಸರಿನಲ್ಲಿ ರಾಜಕೀಯ ಮಾಡಲು ಮುಂದಾಗಿರುವ ಸಂಸದ ಡಾ| ಉಮೇಶ ಜಾಧವ ಅವರಿಗೆ ನಿಜವಾಗಲು ಬೌದ್ಧ ತಾಣದ ಬಗ್ಗೆ ಕಾಳಜಿ ಇದ್ದಿದ್ದರೆ, ಪಕ್ಷ ರಾಜಕಾರಣ ಬದಿಗೊತ್ತಿ ಸ್ಥಳಕ್ಕೆ ಭೇಟಿ ನೀಡುವ ಮುಂಚೆ ತಮ್ಮನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಿತ್ತು. ತಾವು ರಾಜ್ಯ ಪ್ರವಾಸೋದ್ಯಮ ಸಚಿವರಾಗಿದ್ದಾಗ ಕೈಗೊಂಡ ಕ್ರಮಗಳ ಬಗ್ಗೆ ತಿಳಿದುಕೊಳ್ಳಬಹುದಿತ್ತು. ಇವರ ದಲಿತರ ಪರ ಪ್ರೀತಿ ಭಾವಚಿತ್ರಕ್ಕೆ ಫೋಜ್‌ ಕೊಡಲು ಸೀಮಿತ ಎಂದು ಟೀಕಿಸಿದರು.

ಅಭಿವೃದ್ಧಿಯ ಗಂಧ-ಗಾಳಿ ಗೊತ್ತಿಲ್ಲದ ಬಿಜೆಪಿಯವರು ಚುನಾವಣೆ ಬಂದಾಗ ಧರ್ಮ, ಭಕ್ತಿಯನ್ನು ಜನರ ಮುಂದಿಟ್ಟು ಮರಳು ಮಾಡುತ್ತಾರೆ. ರಾಮ-ಕೃಷ್ಣರ ಕಥೆ ಹೇಳಿ ಮತ ಕೀಳುವ ಮೂಲಕ ಮೋಸ ಮಾಡುತ್ತಾರೆ. ಇಂಥಹವರನ್ನು ಅಧಿಕಾರದಿಂದ ದೂರವಿಡಿ ಎಂದು ಮನವಿ ಮಾಡಿದರು.

ಪುರಸಭೆ ಅಧ್ಯಕ್ಷೆ ಝರೀನಾಬೇಗಂ, ಮುಖ್ಯಾ ಧಿಕಾರಿ ಡಾ| ಚಿದಾನಂದ ಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಕಾಂಗ್ರೆಸ್‌ ಮುಖಂಡರಾದ ಶಿವಾನಂದ ಪಾಟೀಲ, ನಾಗರೆಡ್ಡಿ ಪಾಟೀಲ ಕರದಾಳ, ಶಂಕ್ರಯ್ಯಸ್ವಾಮಿ ಮದರಿ, ವೀರಣ್ಣಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ಟೋಪಣ್ಣ ಕೋಮಟೆ, ಭೀಮರಾವ್‌ ದೊರೆ, ದೇವಿಂದ್ರ ಕರದಳ್ಳಿ, ಜಗಣ್ಣಗೌಡ ಪಾಟೀಲ, ರಮೇಶ ಮರಗೋಳ, ಸುಗಂಧಾ ಜೈಗಂಗಾ, ವಿಶಾಲ ನಂದೂರಕರ, ಮಲ್ಲಯ್ಯ ಗುತ್ತೇದಾರ, ಶರಣು ನಾಟೀಕಾರ, ಪೃಥ್ವಿರಾಜ ಸೂರ್ಯವಂಶಿ, ಮರಗಪ್ಪ ಕಲಕುಟಗಿ, ಮಹ್ಮದ್‌ ಗೌಸ್‌ ಹಾಗೂ ಸಾವಿರಾರು ಜನರು ಪಾಲ್ಗೊಂಡಿದ್ದರು. ಪುರಸಭೆ ಸಿಬ್ಬಂದಿ ಮಲ್ಲಿಕಾರ್ಜುನ ಯಳಸಂಗಿ ನಿರೂಪಿಸಿದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.