ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಆಕ್ರೋಶ

ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಆಕೆಗೆ ಅನ್ಯಾಯ ಮಾಡಿದ್ದಾರೆ.

Team Udayavani, Mar 29, 2021, 6:20 PM IST

ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಆಕ್ರೋಶ

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಡಿ.ಕೆ. ಶಿವಕುಮಾರ ಅಭಿಮಾನಿಗಳು ಮತ್ತು ಬೆಂಬಲಿಗರು ರವಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಇಂದಿರಾ ಸ್ಮಾರಕ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ  ಪುತ್ಥಳಿ ಮುಂಭಾಗದಲ್ಲಿ ಅಖೀಲ ಕರ್ನಾಟಕ ಡಿ.ಕೆ. ಶಿವಕುಮಾರ ಅಭಿಮಾನಿಗಳ ಸಂಘ ಮತ್ತು ವಾರ್ಡ್‌ ಸಂಖ್ಯೆ 53ರ ಬುದ್ಧ ನಗರದಲ್ಲಿ ಡಿ.ಕೆ. ಶಿವಕುಮಾರ ಅಭಿಮಾನಿ ಬಳಗದವರು ಜಮಾವಣೆಗೊಂಡು ರಮೇಶ ಜಾರಕಿಹೊಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ರಸ್ತೆಯಲ್ಲಿ ರಮೇಶ ಜಾರಕಿಹೊಳಿ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಸಂತ್ರಸ್ತೆ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿ ರಮೇಶ ಜಾರಕಿಹೊಳಿ ವಿರುದ್ಧ ಮೊಕದ್ದಮೆ ದಾಖಲು ಮಾಡಿದ್ದಾರೆ. ಆದರೂ, ಆರೋಪಿ ಸ್ಥಾನದಲ್ಲಿರುವ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮೇಲೆ ಇಲ್ಲದ ಆರೋಪ ಮಾಡಿ ಏಕವಚನದಲ್ಲಿ ಕೀಳುಮಟ್ಟದ ಶಬ್ದ ಗಳನ್ನು ಉಚ್ಚರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧಿ  ಪುತ್ಥಳಿ ಮುಂಭಾಗದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ ಮತ್ತು ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ರಾಜಕೀಯದಲ್ಲಿ ಒಬ್ಬರಿಗೊಬ್ಬರು ಟೀಕೆ ಮಾಡುವ ಮೂಲಕ ಹೇಳಿಕೆ ನೀಡುವುದು ಸಹಜ. ಆದರೆ, ಕೀಳುಮಟ್ಟದ ಪದಗಳನ್ನು ಬಳಸಿ ಮಾತನಾಡುವುದು ರಾಜಕೀಯ ನಾಯಕರಿಗೆ ಶೋಭೆ ತರುವಂತದ್ದಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಯ ಡಿ.ಕೆ.ಶಿವಕುಮಾರ ಮೇಲೆ ಇಲ್ಲ, ಸಲ್ಲದ ಆರೋಪ ಮಾಡಿ,ನಾಲಿಗೆ ಹರಿಬಿಟ್ಟು ಹೇಳಿಕೆ ನೀಡುತ್ತಿರುವ ರಮೇಶ ಜಾರಕಿಹೊಳಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲಾಗಿ ರಮೇಶ ಜಾರಕಿಹೊಳಿ ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಆಕೆಗೆ ಅನ್ಯಾಯ ಮಾಡಿದ್ದಾರೆ. ಆದರೆ, ನಿಜವಾದ, ಸತ್ಯವಾದ ಘಟನೆಯನ್ನು ತಿರುಚಿ, ಅಸತ್ಯವನ್ನಾಗಿ ಮಾಡಿ ಬೇರೆ ಪಕ್ಷದ ನಾಯಕರ ಮೇಲೆ ತೇಜೋವಧೆಗೆ ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ತೀವ್ರವಾಗಿ ಖಂಡಿಸಿದರು.

ಪ್ರತಿಭಟನೆಯಲ್ಲಿ ಡಿ.ಕೆ.ಶಿವಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್‌. ಅಂಗಡಿ, ಮುಖಂಡರಾದ ಗೋಪಿಕೃಷ್ಣ, ಧರ್ಮರಾಜ ಪಾಟೀಲ ಕಲ್ಲಹಿಪ್ಪರಗಾ,
ಶಾಮ ನಾಟೀಕಾರ, ಶರಣು ತೇಗನೂರ, ಓಂಕಾರ ವಠಾರ ಕೆರಿಭೋಸಗಾ, ಅನಿಲ ಉಪಾಸಿ, ಪ್ರಜ್ಞಾನಂದ, ಕಲಾವತಿ ಸಂಗಮೇಶ, ರಾಣಪ್ಪ ಕೆರಿಭೋಸಗಾ,ನೂರಜಾ ಬೇಗಂ, ರಾಣಪ್ಪ ಕೆರಿಭೋಸಗಾ, ಗೌತಮ, ಅವಿನಾಶ ಧುತ್ರಗಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ ನಡೆಸಿದ ಕೃತ್ಯವನ್ನು ಕರ್ನಾಟಕ ರಾಜ್ಯ ಮಾತ್ರವಲ್ಲದೇ ಇಡೀ ದೇಶದ ಜನತೆಯೇ ನೋಡಿದ್ದಾರೆ. ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ವಿಡಿಯೋ ವೈರಲ್‌ ಆಗಿದೆ. ಆದರೆ, ರಮೇಶ ಜಾರಕಿಹೊಳಿ ತಮ್ಮಷ್ಟಕ್ಕೆ ತಾವೇ ನಿರಪರಾಧಿ ಎಂದು ಘೋಷಿಸಿಕೊಳ್ಳುತ್ತಿದ್ದಾರೆ.
ಅವರು ಅಪರಾಧಿ ಯೋ ಅಥವಾ ನಿರಪರಾಧಿಯೋ ಎನ್ನುವುದನ್ನು ನ್ಯಾಯಾಲಯ ತೀರ್ಮಾನ ಮಾಡಲಿದೆ. ಅದೆಲ್ಲವನ್ನು ಬಿಟ್ಟು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಗ್ಗೆ ಹಗುರವಾಗಿ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ.
ಜಗದೇವ ಗುತ್ತೇದಾರ,ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಸಿಡಿ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ಕೊಟ್ಟು ಸರ್ಕಾರದಿಂದ ಹೊರ ಬಂದಿದ್ದಾರೆ. ಆಗ ಹೊಸದೊಂದು ನಾಟಕವಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಸಂತ್ರಸ್ತ ಯುವತಿಯೇ ನನಗೆ ರಮೇಶ ಜಾರಕಿಹೊಳಿ ಅನ್ಯಾಯ ಮಾಡಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ರಮೇಶ ಜಾರಕಿಹೊಳಿ ಕೇಸ್‌ ದಾಖಲಾಗಿದೆ. ಮೊದಲು ರಮೇಶ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿಗಳು ಜೈಲಿಗೆ ಹಾಕಬೇಕು.
ಅಲ್ಲಮಪ್ರಭು ಪಾಟೀಲ್‌, ಮಾಜಿ ಎಂಎಲ್‌ಸಿ

ಯುವತಿ ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ ಎಂದು ಹೇಳಿದ್ದಾಳೆ. ಆದರೆ, ರಮೇಶ ಜಾರಕಿಹೊಳಿ ಯುವತಿ ತಂದೆ-ತಾಯಿಗೆ ಆಮಿಷವೊಡ್ಡಿ ಮಾಧ್ಯಮಗಳ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ಹೇಳಿಕೆ ಕೊಡಿಸಿ ಕುತಂತ್ರ ರಾಜಕಾರಣ ಮಾಡಿದ್ದಾರೆ. ರಮೇಶ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸಬೇಕು. ರಾಜ್ಯದಿಂದಲೇ ಅವರನ್ನು ಗಡಿಪಾರು ಮಾಡಬೇಕು.
ತಿಪ್ಪಣ್ಣಪ್ಪ ಕಮಕನೂರ, ಮಾಜಿ ಎಂಎಲ್‌ಸಿ

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.