ತಪ್ಪದೇ ಮತ ಚಲಾಯಿಸಿ: ಸುರೇಶ ವರ್ಮಾ
Team Udayavani, Dec 9, 2021, 1:03 PM IST
ಶಹಾಬಾದ: ಪ್ರಜಾಪ್ರಭುತ್ವ ಎಂದರೆ ಜನರಿಗೆ ಸೇರಿದ, ಜನರಿಗೋಸ್ಕರ, ಜನರೇ ನಡೆಸುವ ಒಂದು ವ್ಯವಸ್ಥೆ. ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಅಂಗವಾದ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಎಂದು ತಹಶೀಲ್ದಾರ್ ಸುರೇಶ ವರ್ಮಾ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ವಿಧಾನಪರಿಷತ್ ಚುನಾವಣೆ ನಿಮಿತ್ತ ನಗರಸಭೆಯ ಎಲ್ಲ ಸದಸ್ಯರಿಗೆ ಮತದಾನದ ಕುರಿತು ತಿಳಿವಳಿಕೆ ನೀಡುವ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಈ ಜವಾಬ್ದಾರಿಯನ್ನು ನಾವು ನಿಷ್ಠೆಯಿಂದ ನಿಭಾಯಿಸಬೇಕಿದೆ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಬೇಕು. ಸೂಚನೆಗಳು ಕಾಲಕಾಲಕ್ಕೆ ಗಣನೀಯವಾಗಿ ಬದಲಾಗುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿ ಚುನಾವಣೆ ಕಾರ್ಯವೂ ಹೊಸದಾಗಿರುತ್ತದೆ. ನಾವುಗಳು ಎಷ್ಟೇ ತರಬೇತಿ ಪಡೆ ದಿದ್ದರೂ ಕೆಲವು ವಿಷಯಗಳನ್ನು ಮತ್ತೆ ಕಲಿಯಬೇಕಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು ಎಂದರಲ್ಲದೇ ಮತದಾನದ ವಿಧಾನದ ಕುರಿತು ಅಣುಕು ಮತದಾನ ಮಾಡುವ ಹಾಗೂ ಮತದಾನದ ದಿನ ಅನುಸರಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ಒದಗಿಸಿದರು.
ನಗರಸಭೆ ಪೌರಾಯುಕ್ತ ಡಾ| ಕೆ. ಗುರಲಿಂಗಪ್ಪ ಮಾತನಾಡಿ, ಮತ ಚಲಾಯಿಸುವ ಅವಕಾಶವನ್ನು ನಾವೆಂದು ಕಳೆದುಕೊಳ್ಳಬಾರದು. ನಾವು ಕೊಡುವ ಒಂದು ಮತ ಸ್ವಸ್ಥ ಸಮಾಜಕ್ಕೆ ಅಮೂಲ್ಯ ಕೊಡುಗೆ. ಹಾಗೆಯೇ, ಸೂಕ್ತ ವ್ಯಕ್ತಿ ಆರಿಸುವುದು ಅಷ್ಟೇ ಮುಖ್ಯ. ತಪ್ಪದೇ ಮತ ಚಲಾಯಿಸಿ. ಯಾವುದೇ ಭಯ, ಆಮಿಷಗಳಿಲ್ಲದೇ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ನಿವೆಲ್ಲ ಮತದಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆ ಚುನಾಯಿತ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.