ಹಿಂದುಳಿದ ಹೈ.ಕ ಪ್ರಗತಿಗೆ ಪ್ರಣಾಳಿಕೆಯಲ್ಲಿ ಒತ್ತು ನೀಡಿ

Team Udayavani, Mar 30, 2019, 2:17 PM IST

gul-6

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಅಂಶಗಳನ್ನು ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಿದ್ಧಪಡಿಸಿದ್ದು, ಈ ಅಂಶಗಳನ್ನು ರಾಜಕೀಯ ಪಕ್ಷಗಳು ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳಬೇಕೆಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ ಹೈಕ ಭಾಗದ ಆರು ಜಿಲ್ಲೆಗಳಲ್ಲಿ ಮುಖ್ಯವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮತ್ತಿತರ ಮೂಲ ಸೌಕರ್ಯ ಒದಗಿಸುವುದು. 371ನೇ (ಜೆ) ಕಲಂ ಪರಿಣಾಮಕಾರಿ ಅನುಷ್ಠಾನ, ಸಾವಿರಾರು ಖಾಲಿ ಹುದ್ದೆಗಳ ಭರ್ತಿ ಮತ್ತು ವಿಮಾನಯಾನ, ರೈಲ್ವೆ, ಸಾರಿಗೆ, ನೀರಾವರಿ, ಕೈಗಾರಿಕೆ, ಕೃಷಿ, ಶಿಕ್ಷಣ, ಕ್ರೀಡೆ, ಆರೋಗ್ಯ
ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ ಎಂದರು.

ಈ ಭಾಗದ ಜನರಿಂದ ಅಭಿಪ್ರಾಯ ಸಂಗ್ರಹಿಸಿ ಸಮಿತಿಯು ಸಮಗ್ರ ಅಂಶಗಳನ್ನು ಸಿದ್ಧಪಡಿಸಿದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಈ ಬೇಡಿಕೆಗಳನ್ನು ಅಳವಡಿಸಿಕೊಳ್ಳಬೇಕು. ಈ ಭಾಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಅಭ್ಯರ್ಥಿಗಳು ಭರವಸೆಗಳನ್ನು ಈಡೇರಿಸುವ ಭರವಸೆ ನೀಡಬೇಕೆಂದು ಆಗ್ರಹಿಸಿದರು.

ಮುಖಂಡರಾದ ಮನೀಷ್‌ ಜಾಜು, ಡಾ| ಮಾಜಿದ್‌ ಡಾಗಿ, ಶಿವಲಿಂಗಪ್ಪ ಬಂಡಕ, ಎಚ್‌. ಎಂ.ಹಾಜಿ, ಶಿವಕುಮಾರ ಬಿರಾದಾರ, ಅಸ್ಲಂ ಚೌಂಗೆ, ವಿಶಾಲದೇವ ಧನೇಕರ್‌ ಇದ್ದರು.

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಪರ ಬೇಡಿಕೆಗಳನ್ನು ಎಲ್ಲ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಬೇಕೆಂದು ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಮರನಾಥ ಪಾಟೀಲ ಒತ್ತಾಯಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಹೈ.ಕ ಭಾಗದ ಆರು ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ಈ ಭಾಗದ ನನೆಗುದಿಗೆ ಬಿದ್ದ ಯೋಜನೆಗಳನ್ನು ಆರಂಭಿಸುವುದು ಮತ್ತು ಹೆಚ್ಚಿನ ಅನುದಾನ ಒದಗಿಸುವುದರೊಂದಿಗೆ ಹಲವು ಹೊಸ ಕ್ರಮಗಳನ್ನು ಜಾರಿಗೆ ತರುವ ಅಗತ್ಯವಿದೆ. ಆದ್ದರಿಂದ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಹೈ.ಕ ಭಾಗದ ಬೇಡಿಕೆಗಳನ್ನು ಅಳವಡಿಸುವಂತೆ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಘಟಕಗಳ  ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಸಂವಿಧಾನದ 371ನೇ (ಜೆ) ಕಲಂ ಅಡಿಯಲ್ಲಿ ಸ್ಥಾಪಿತವಾಗಿರುವ ಹೈ.ಕ ಪ್ರದೇಶಾಭಿವೃದ್ಧಿ ಮಂಡಳಿಗೆ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳ ಮಾದರಿಯಲ್ಲಿ ಆರ್ಥಿಕ ನೆರವು ನೀಡಬೇಕು. ರೈತರ ಆದಾಯ ಇಮ್ಮಡಿಗೊಳಿಸುವ ಉದ್ದೇಶದಿಂದ ರಸಗೊಬ್ಬರ, ಕೀಟನಾಶಕ, ಕೃಷಿ ಯಂತ್ರೋಪಕರಣಗಳನ್ನು ಜಿಎಸ್‌ಟಿ ಮುಕ್ತಗೊಳಿಸಬೇಕು. ಕಲಬುರಗಿಯ ಏಕೈಕ ಎಂಎಸ್‌ಎಂಇ ಕ್ಷೇತ್ರದಲ್ಲಿ ಕಾರ್ಯಗತವಿರುವ ಮತ್ತು ಸಂಕಷ್ಟದಲ್ಲಿರುವ ದಾಲ್‌ಮಿಲ್‌ ಗಳಿಗೆ ವಿಶೇಷ ಆರ್ಥಿಕ ಪ್ಯಾಕೆಜ್‌ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ನಿರುದ್ಯೋಗ ಸಮಸ್ಯೆ ನಿವಾರಿಸಲು ಕೈಗಾರಿಕಾ ಅಭಿವೃದ್ಧಿ ಸಹಾಯಕವಾಗಲಿದೆ. ಈ ನಿಟ್ಟಿನಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪಿಸಬೇಕು. ವ್ಯಾಪಾರ, ಕೈಗಾರಿಕೆಗಳನ್ನು ಸ್ಥಾಪಿಸಲು ಪಡೆಯುವ ಬಹು ಪರವಾನಗಿ ನೀತಿ ಕೈಬಿಡಬೇಕು. ಅದರ ಬದಲಾಗಿ ಏಕ ಪರವಾನಗಿ ಪಡೆಯುವ ನೀತಿ ಜಾರಿಗೊಳಿಸಬೇಕು. 371ನೇ (ಜೆ) ಮೀಸಲಾತಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಲಬುರಗಿ ನಗರದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ 25 ಸಾವಿರ ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೂಡಿಕೆ, ಉತ್ಪಾದನಾ ವಲಯ (ನಿಮ್ಜ್) ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಬೇಕು. ಇದರಿಂದ 2.60 ಲಕ್ಷ ಜನರಿಗೆ ನೇರ ಮತ್ತು 2.50 ಲಕ್ಷ ಜನರಿಗೆ ಪರೋಕ್ಷವಾಗಿ ಉದ್ಯೋಗಾವಕಾಶ ಒದಗಿಸಿದಂತಾಗುತ್ತದೆ ಎಂದರು. ಬಹು
ದಿನಗಳಿಂದ ನನೆಗುದಿಗೆ ಬಿದ್ದಿರುವ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸಲು ಕ್ರಮಕೈಗೊಳ್ಳಬೇಕು. ಜತೆಗೆ ಕಲಬುರಗಿಯಿಂದ ಬೆಂಗಳೂರು, ಮುಂಬೈ ನಗರಕ್ಕೆ ನೇರ ರೈಲು ಸೇವೆ ಪ್ರಾರಂಭಿಸಬೇಕೆಂದು ಮನವಿ ಮಾಡಿದರು. ಶರಣು ಪಪ್ಪಾ, ಜಗದೀಶ ಕಡಗಂಚಿ, ಶಿವರಾಜ ಇಂಗಿನ್‌ ಶೆಟ್ಟಿ ಹಾಗೂ ಇತರರಿದ್ದರು

ಅಭಿವೃದ್ಧಿಗಾಗಿ ಬೇಡಿಕೆಗಳು
371ನೇ (ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಜತೆಗೆ ವೈಜ್ಞಾನಿಕ ಕ್ರಿಯಾ ಯೋಜನೆ ರಚಿಸಿ, ಕೇಂದ್ರಕ್ಕೆ ವಿಶೇಷ ಪ್ಯಾಕೇಜ್‌ಗೆ ಬೇಡಿಕೆ ಮಂಡಿಸಬೇಕು.

 ಹೈಕ ಭಾಗದಲ್ಲಿ ಪ್ರತಿ ವರ್ಷ ಮೂರು ಉಪ ಸಂಪುಟ ಸಮಿತಿ ಸಭೆ ನಡೆಸಬೇಕು. ಖಾಲಿ ಇರುವ ಹುದ್ದೆಗಳ ಬಗ್ಗೆ ಸಮೀಕ್ಷೆ ನಡೆಸಿ ನೇಮಕಾತಿ ಮಾಡಬೇಕು.

 ಕಲಬುರಗಿ ರೈಲ್ವೆ ವಿಭಾಗೀಯ ಕೇಂದ್ರ ಕಚೇರಿ ಸ್ಥಾಪನೆ, ರಾಯಚೂರು ರೈಲ್ವೆ ನಿಲ್ದಾಣವನ್ನು ರೈಲ್ವೆ ನಿರ್ವಹಣಾ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಬೇಕು. ಈ ಭಾಗದಿಂದ ಬೆಂಗಳೂರು, ಮುಂಬೈಗೆ ಹೊಸ ರೈಲುಗಳನ್ನು ಆರಂಭಿಸಬೇಕು.

 ಕಲಬುರಗಿ ನಗರದ ನಾಗನಹಳ್ಳಿ ಪೊಲೀಸ್‌ ತರಬೇತಿ ಕೇಂದ್ರದಿಂದ ಗಂಜ್‌ ವರೆಗೆ ಮೆಟ್ರೋ ಆರಂಭಿಸಬೇಕು. ಬೀದರ್‌ -ಕಲಬುರಗಿ-ಬಳ್ಳಾರಿ ಹೆದ್ದಾರಿ ಮತ್ತು ಬೀದರ್‌-ಚಾಮರಾಜನಗರ ಹೆದ್ದಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ರಾಯಚೂರು-ಬಳ್ಳಾರಿ ನಡುವೆ ನಾಲ್ಕು ವರ್ತುಲ ರಸ್ತೆ ಆರಂಭಿಸಬೇಕು.

 ಕಲಬುರಗಿಯಿಂದ ವಿಮಾನಯಾನ ಸೇವೆ ಆರಂಭಿಸಬೇಕು. ರಾಯಚೂರಿನ ಯರಮರಸ್‌ನಲ್ಲಿರುವ ಹೆಲಿಪ್ಯಾಡ್‌ ಸ್ಥಳವನ್ನು ಬೋಳಮಾನದೊಡ್ಡಿಗೆ ಸ್ಥಳಾಂತರಿಸಿ ಅಭಿವೃದ್ಧಿ ಪಡಿಸಬೇಕು.

 ಬಳ್ಳಾರಿಯಲ್ಲಿ ಬೃಹತ್‌ ಕಬ್ಬಿಣದ ಉತ್ಪನ್ನಗಳ ಉದ್ದಿಮೆ, ರಾಯಚೂರಿನಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌, ಕೊಪ್ಪಳದಲ್ಲಿ ಹಣ್ಣು ಸಂಸ್ಕರಣ ಘಟಕ, ಬೀದರ್‌ನಲ್ಲಿ ಆಟೋಮೊಬೈಲ್‌ ಉತ್ಪನ್ನ ಘಟಕ ಸ್ಥಾಪಿಸಬೇಕು.

 ಕಲಬುರಗಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ನಿರ್ಮಿಸಬೇಕು. ಕಲಬುರಗಿಯಲ್ಲಿ ಐಐಎಂ, ರಾಯಚೂರಿನಲ್ಲಿ ಐಐಟಿ, ನೂತನ ವಿಶ್ವವಿದ್ಯಾಲಯ, ಹೊಸಪೇಟೆಯಲ್ಲಿ ಪ್ರವಾಸೋದ್ಯಮ ವಿಶ್ವವಿದ್ಯಾಲಯ ಆರಂಭಿಸಬೇಕು .

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.