ಸಮಾಜಮುಖೀ ಚಿಂತಕರನ್ನು ಪ್ರೋತ್ಸಾಹಿಸಿ
Team Udayavani, Jan 24, 2022, 12:53 PM IST
ಆಳಂದ: ವಿವಿಧ ಕ್ಷೇತ್ರದ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಪ್ರತಿಭಾವಂತರು ನಮ್ಮ ಭಾಗದಲ್ಲಿದ್ದು, ಅಂತಹವರನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರ ಸಾಧನೆ, ಕೊಡುಗೆಯನ್ನು ಸಮಾಜಕ್ಕೆ ಪರಿಚಯಿಸುವ ಕಾರ್ಯ ದೊಡ್ಡದು ಎಂದು ಲೇಖಕ, ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು.
ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸುತ್ತಿರುವ ವಿವಿಧ ಮಹನೀಯರಿಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಸತ್ಕಾರ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ಶಿಕ್ಷಣ ತಜ್ಞರು, ಅನುಭಾವಿಗಳ ಸಲಹೆ, ಸಹಕಾರ ನಮ್ಮ ಸಂಘಕ್ಕೆ ಅವಶ್ಯಕವಿದೆ. ಇಂತಹ ಮಹನೀಯರು ಮತ್ತು ತಾಲೂಕಿನ ಎಲ್ಲ ಶಿಕ್ಷಕರ ಸಹಕಾರದಿಂದ ರಾಜ್ಯದಲ್ಲಿಯೇ ಮಾದರಿ ಸಂಘ ಮಾಡಬೇಕು ಎಂಬುದು ನಮ್ಮ ಗುರಿಯಗಿದೆ ಎಂದರು.
ಲಕ್ಷ್ಮೀಕಾಂತ ಮೇತ್ರೆ, ಕಲ್ಲಪ್ಪ ಹತಗುಂದಿ, ಅಂಬಣ್ಣ ಜಮಾದಾರ ಅವರನ್ನು ಸತ್ಕರಿಸಲಾಯಿತು. ಪ್ರಮುಖರಾದ ಎಚ್.ಬಿ.ಪಾಟೀಲ್, ರಾಜಕುಮಾರ ಬಟಗೇರಿ, ಅಣ್ಣಾರಾಯ ಎಚ್.ಮಂಗಾಣೆ, ಶಿವಶರಣ ಉದನೂರ, ಸಿದ್ಧರಾಮ ಬೇತಾಳೆ, ವಿಕ್ರಮ ಗಂಗಾಣೆ, ವೀರೇಶ ಬೋಳಶೆಟ್ಟಿ ನರೋಣಾ, ರಾಜಶೇಖರ ಮೇಟೆಗಾರ, ಅಶೋಕ ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.