ಎಲ್ಲರಿಗೂ ಕಾನೂನು ಮಾಹಿತಿ ಇರಬೇಕು: ಅಶೋಕ
Team Udayavani, Jan 6, 2022, 10:53 AM IST
ಅಫಜಲಪುರ: ಕಾನೂನು ಕೇವಲ ವಕೀಲರು, ಪೊಲೀಸರಿಗೆ ಗೊತ್ತಿರಬೇಕಾದುದ್ದಲ್ಲ. ದೇಶದ ಜವಾಬ್ದಾರಿಯುತ ಎಲ್ಲ ಪ್ರಜೆಗಳಿಗೆ ಕಾನೂನಿನ ಮಾಹಿತಿ ಇರಬೇಕು ಎಂದು ಸಿವಿಲ್ ನ್ಯಾಯಾ ಧೀಶ ಟಿ.ಅಶೋಕ ಹೇಳಿದರು.
ಮಲ್ಲಾಬಾದ ಗ್ರಾಮದ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಅಫಜಲಪುರ, ತಾಲೂಕು ನ್ಯಾಯವಾದಿಗಳ ಸಂಘ ಅಫಜಲಪುರ ಮತ್ತು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಮಲ್ಲಾಬಾದ್ ಅವರ ಸಂಯುಕ್ತಾಶ್ರಯದಲ್ಲಿ ನಡೆದ ಜನಸಾಮಾನ್ಯರಿಗಾಗಿ ಕಾನೂನು ಮಾಹಿತಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಬಹಳಷ್ಟು ಜನರಿಗೆ ಸರಿಯಾಗಿ ಕಾನೂನಿನ ಮಾಹಿತಿ ಇರುವುದಿಲ್ಲ. ಇದು ನಿಜಕ್ಕೂ ಸರಿಯಾದ ಬೆಳವಣಿಗೆಯಲ್ಲ. ಅಲ್ಲದೇ ವಿದ್ಯಾರ್ಥಿಗಳು ತಮ್ಮ ಓದುವ ವಯಸ್ಸಿನಲ್ಲಿ ಸಿನಿಮಾ, ಹಾಡು, ಮೊಬೈಲ್‌ಗಳಿಂದ ಪ್ರೇರಣೆಗೊಂಡು ಪ್ರೀತಿ, ಪ್ರಣಯ ಅಂತೆಲ್ಲ ಅಮೂಲ್ಯ ಸಮಯ ವ್ಯರ್ಥ ಮಾಡಿಕೊಳ್ಳುತ್ತಾರೆ. ಆದರೆ ಅಸಲಿಗೆ ಅವರು ತಮ್ಮ ಭವಿಷ್ಯವನ್ನು ಕೂಡ ಹಾಳು ಮಾಡಿಕೊಳ್ಳುತ್ತಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರಾವ ಕಡೆಗೂ ಮನಸ್ಸನ್ನು ಹರಿಬಿಡದೆ ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿಮ್ಮ ಪಾಲಕರು, ನೀವು ಕಲಿತ ಶಾಲೆ, ಕಾಲೇಜುಗಳಿಗೆ ಹೆಮ್ಮೆ ತರುವಂತ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಹಿರಿಯ ವಕೀಲರಾದ ಎಸ್.ಜಿ ಹುಲ್ಲೂರ, ಕೆ.ಜಿ. ಪೂಜಾರಿ ಮಾತನಾಡಿ, ಜನನ ಮರಣ ನೋಂದಣಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಂಗಣ್ಣ ಎಂ. ಸಿಂಗೆ ಆನೂರ ಮಾತನಾಡಿ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದವರು ಗ್ರಾಮೀಣ ಭಾಗಗಳಿಗೆ ಬಂದು ಜನರಿಗೆ ಕಾನೂನಿನ ಮಾಹಿತಿಯನ್ನು ಉಚಿತವಾಗಿ ನೀಡುವ ಮೂಲಕ ಜನಸಾಮಾನ್ಯರಲ್ಲಿ ಕಾನೂನಿನ ಪ್ರಜ್ಞೆ ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಜನಸಾಮಾನ್ಯರು, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ಕಾನೂನಿನ ಅರಿವು ಮೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರಾದ ಮಲ್ಲಣಗೌಡ ಪಾಟೀಲ್, ಸುರೇಶ ಅವಟೆ, ಸಿದ್ರಾಮಯ್ಯ ಹಿರೇಮಠ, ಗಡಿನಾಡು ಹೋರಾಟಗಾರ ಸದ್ದಾಂಹುಸೇನ್ ನಾಕೇದಾರ, ಸಂಸ್ಥೆಯ ಸಿಬ್ಬಂದಿ ಯಲ್ಲಾಲಿಂಗ ಪೂಜಾರಿ, ನಿಂಗಣ್ಣ ಪೂಜಾರಿ, ಸುಧಿಧೀರಕುಮಾರ ಬಿಂಜಗೇರಿ, ನಬಿ ದೇವರಮನಿ, ಶಾಹಿನ್ ದೇವರಮನಿ, ಮಲ್ಲಯ್ಯ ಮಠ ಇದ್ದರು. ಯಲ್ಲಾಲಿಂಗ ಮೈಲಾರಿ ನಿರೂಪಿಸಿದರು. ಗುರು ಮಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.