ತಿಂಗಳೊಳಗೆ ಕಲ್ಯಾಣ ಭಾಗದ ಖಾಲಿ ಹುದ್ದೆ ಭರ್ತಿ


Team Udayavani, Mar 4, 2022, 1:58 PM IST

18job

ಕಲಬುರಗಿ: ಕಲ್ಯಾಣ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಿಂಗಳೊಳಗೆ ಭರ್ತಿ ಮಾಡಿಕೊಳ್ಳಬೇಕು ಎಂಬುದಾಗಿ 371ನೇ (ಜೆ) ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ನೀಡಿರುವ ವಿಶೇಷ ಸ್ಥಾನಮಾನದ ಅಡಿಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತ ಸಚಿವ ಸಂಪುಟ ಉಪ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಗುರುವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಸಮಿತಿ ಅಧ್ಯಕ್ಷ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 371ನೇ (ಜೆ) ಕಾರ್ಯಾನುಷ್ಠಾನದಲ್ಲಿ ಆಗುತ್ತಿರುವ ತೊಡಕುಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಯಾವುದೇ ನಿರ್ಬಂಧ ಹೇರಿಲ್ಲ ಎಂಬುದು ಸಮಿತಿ ಗಮನಕ್ಕೆ ತರಲಾಯಿತು. ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯೇ ಹಸಿರು ನಿಶಾನೆ ನೀಡಿದ್ದರಿಂದ ತಿಂಗಳೊಳಗೆ ಖಾಲಿ ಹುದ್ದೆಗಳ ನೇಮಕವಾಗಲಿ ಎಂದು ಉಪಸಮಿತಿ ಪ್ರಸ್ತಾಪಿಸಿ, ನಿರ್ಣಯ ಕೈಗೊಂಡಿತು.

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಹೊರತುಪಡಿಸಿ ಇತರ ಜಿಲ್ಲೆಗಳಲ್ಲೂ ಅರ್ಹರಿಗೆ ಅವಕಾಶ ಕಲ್ಪಿಸುವುದು ಹಾಗೂ ನೇಮಕಾತಿ ಸಂಬಂಧ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ 2016 ಮತ್ತು 2020ರಲ್ಲಿ ಹೊರಡಿಸಿರುವ ಅ ಧಿಸೂಚನೆಗಳನ್ನು ಪರಾಮರ್ಶಿಸಲು ಮುಂದಿನ ಸಮಿತಿ ಸಭೆ ಎದುರು ವಿಷಯ ಮಂಡಿಸುವಂತೆ ಸಭೆಯ ಗಮನ ತರಲಾಯಿತು.

ಈ ಸಂದರ್ಭದಲ್ಲಿ ಸಾರಿಗೆ ಸಚಿವರು ಹಾಗೂ ಸಮಿತಿ ಅಧ್ಯಕ್ಷರಾದ ಬಿ. ಶ್ರೀರಾಮುಲು, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಶಾಲಿನಿ ರಜನೀಶ್‌ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.