ನವೀಕರಿಸುವ ಇಂಧನ ಕ್ಷೇತ್ರದತ್ತ ಗಮನ ಅಗತ್ಯ

Team Udayavani, Jul 23, 2022, 12:38 PM IST

8kalaburugi

ಕಲಬುರಗಿ: ಅಭಿವೃದ್ಧಿ ನಿಟ್ಟಿನಲ್ಲಿ ನವೀಕರಿಸ ಬಹುದಾದ ಇಂಧನ ಕ್ಷೇತ್ರದತ್ತ ಗಮನ ಹರಿಸುವ ಸಮಯ ಇದಾಗಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (ಕ್ರೆಡಲ್‌) ಅಧ್ಯಕ್ಷ ಚಂದ್ರಕಾಂತ ಬಿ. ಪಾಟೀಲ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಶುಕ್ರವಾರ ಇಂಜಿ ನಿಯರಿಂಗ್‌ ಮತ್ತು ತಂತ್ರಜ್ಞಾನ ವಿಭಾಗ, ಗೋದುತಾಯಿ ಇಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್‌ (ಕ್ರೆಡಲ್‌) ಬೆಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸರಕಾರವು ಸೌರ ನೀತಿ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರವು ನವೀಕರಿಸಬಹುದಾದ ಇಂಧನ ನೀತಿ ಬಿಡುಗಡೆ ಮಾಡಿದೆ. ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ವಿದ್ಯುತ್‌ ಉತ್ಪಾದನೆಗೆ ಮಾರ್ಗಸೂಚಿ ನೀಡಲಾಗಿದೆ. ಇದರ ಭಾಗವಾಗಿ ಕೆಆರ್‌ಇಡಿಎಲ್‌ ವಿವಿಧ ಕಾಲೇಜುಗಳ ಸಹಯೋಗದಲ್ಲಿ ವಿಚಾರ ಸಂಕಿರಣ, ಸಮ್ಮೇಳನ, ಕಾರ್ಯಾಗಾರದ ರೂಪದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದತ್ತ ಗಮನಹರಿಸುವ ಸಮಯ ಇದು. ಈ ನೀತಿಗಳ ಆಧಾರದ ಮೇಲೆ ಅನೇಕ ಏಜೆನ್ಸಿಗಳು ಸೌರ ಮತ್ತು ಪವನ ವಿದ್ಯುತ್‌ ಸ್ಥಾವರಗಳನ್ನು ಸ್ಥಾಪಿಸಿವೆ ಎಂದು ತಿಳಿಸಿದರು.

ಶಕ್ತಿ ಸಂರಕ್ಷಣೆ, ಇಂಧನ ಉಳಿತಾಯ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ ಮತ್ತು ನಮ್ಮ ಪ್ರಕೃತಿ ಉಳಿಸಲು ಅದು ಹೇಗೆ ಸಹಾಯಕವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇತ್ತೀಚೆಯ ದಿನ ಗಳಲ್ಲಿ ತಂತ್ರಜ್ಞಾನ ಮತ್ತು ಕೈಗಾರಿಕೀಕರಣದ ಬೆಳವಣಿಗೆಯೊಂದಿಗೆ ವಿದ್ಯುತ್‌ ಅತ್ಯಗತ್ಯವಾಗಿದೆ, ಬೇಡಿಕೆಯು ವೇಗವಾಗಿ ಹೆಚ್ಚುತ್ತಿದೆ ಮತ್ತು ಈ ಬೇಡಿಕೆ ಪೂರೈಸಲು ನಾವು ಸನ್ನದ್ಧರಾಗಬೇಕು ಎಂದರು.

ಕರ್ನಾಟಕ ರಾಜ್ಯವು 15.5 ಜಿವಿ ಸ್ಥಾಪಿತ ಸಾಮರ್ಥ್ಯದೊಂದಿಗೆ ನೆರೆಯ ಶ್ರೀಮಂತ ರಾಜ್ಯಗಳಲ್ಲಿ 4ನೇ ಸ್ಥಾನದಲ್ಲಿದೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ಜಾಗತಿಕವಾಗಿ ಭಾರತ ದೇಶವು ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ 4ನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಕಲಬುರಗಿಯಲ್ಲಿ 500 ಮೆಗಾವ್ಯಾಟ್‌ ಸೋಲಾರ್‌ ಪಾರ್ಕ್‌ ಸ್ಥಾಪಿಸುವ ಯೋಜನೆ ಮಾತುಕತೆ ಹಂತದಲ್ಲಿದೆ ಎಂದು ಚಂದು ಪಾಟೀಲ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತ ನಾಡಿ, ವಿದ್ಯಾರ್ಥಿಗಳು ನವೀಕರಿಸ ಬಹುದಾದ ಇಂಧನಗಳ ಮೂಲ ಕುರಿತು ಹೆಚ್ಚು ಹೆಚ್ಚು ಸಂಶೋಧನೆ ಮಾಡಿ ಪ್ರಕೃತಿಗೆ ಮತ್ತು ದೇಶಕ್ಕೆ ಸಹಾಯವಾಗಬೇಕು ಎಂದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಅನಿಲಕುಮಾರ ಬಿಡವೆ ಸಹ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಹೈದ್ರಾಬಾದ್‌ನ ಎಚ್‌ ಐಇಇ ಎಂಪವರಿಂಗ್‌ ಇಂಜಿನಿಯರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮದನ್‌ ಮೋಹನ್‌ ಗೌಡ ಕೌಕುಂಟ್ಲ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಡೀನ್‌ ಡಾ| ಶಿವಕುಮಾರ ಜವಳಗಿ, ಗೋದುತಾಯಿ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ಎಂ. ಶಶಿಕಲಾ, ಭರತ, ಮಾಲಿನಿ ಶಿವಕುಮಾರ, ಉಮೇಶ ಪಾಟೀಲ, ಸುಷ್ಮಾ ಪಾಟೀಲ ವೇದಿಕೆ ಮೇಲಿದ್ದರು. ಪ್ರೊ| ಶೃತಿ, ಪ್ರೊ| ಅಭಿಲಾಷಾ ನಿರೂಪಿಸಿದರು. ಪ್ರೊ| ಸಾವಿತ್ರಿ ಸ್ವಾಗತಿಸಿದರು, ಪ್ರೊ| ಗೀತಾ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.