![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 6, 2022, 10:29 AM IST
ಸೇಡಂ: ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡ ಅವರ ನಮ್ಮ ನಿವಾಸದ ಭೇಟಿ ಕೇವಲ ಔಪಚಾರಿಕ ಭೇಟಿಯಾಗಿತ್ತು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಯುವ ಮುಖಂಡ ನಾಗರೆಡ್ಡಿ ಪಾಟೀಲ ದೇಶಮುಖ ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಅವರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಾದ ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ ಅವರು, ಎಚ್ .ಡಿ. ದೇವೇಗೌಡರು ಮುಖ್ಯಮಂತ್ರಿ ಗಳಾಗಿದ್ದಾಗ ಶಾಸಕರಾಗಿದ್ದರು. ಅಲ್ಲದೆ ತೀರಾ ಹಳೆಯ ಗೆಳೆತನ ಇಬ್ಬರೂ ನಾಯಕರದ್ದಾಗಿರುವ ಕಾರಣ, ಸೇಡಂ ಬಂದಾಗ ನಮ್ಮ ಮನೆಗೆ ಬಂದು ಊಟ ಮಾಡಿ ಹೋಗಿದ್ದಾರೆ ಅಷ್ಟೆ. ದೇವೇಗೌಡರು ಸೇಡಂ ಬರುವುದಾಗಿ ಕೆಲ ದಿನಗಳ ಹಿಂದೆಯೇ ತಿಳಿಸಿದ್ದರು. ಅಲ್ಲದೆ ಬಂದಾಗ ನಿಮ್ಮ ಮನೆಯಲ್ಲಿ ಊಟ ಮಾಡ್ತೇನೆ ಅಂದಾಗ, ಬನ್ನಿ ಎಂದು ಆಹ್ವಾನಿಸಿದ್ದೆವು. ಈ ನಿಟ್ಟಿನಲ್ಲಿ ಬುಧವಾರ ಬಂದಾಗ ಬಂದು ನಮ್ಮ ಆತಿಥ್ಯ ಸ್ವೀಕರಿಸಿದ್ದಾರೆ. ಈ ಕುರಿತು ಯಾವುದೇ ರೀತಿಯ ರಾಜಕೀಯ ವಿಶ್ಲೇಷಣೆಗಳು ಬೇಡ. ನಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಮುಂದಿನ ಬಾರಿ ರಾಜಕುಮಾರ ಪಾಟೀಲ ಅವರನ್ನು ಸಚಿವರನ್ನಾಗಿ ನೋಡುವ ಆಸೆ ಇದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮತ್ತೂಮ್ಮೆ ಶಾಸಕರನ್ನಾಗಿ ಮಾಡುತ್ತೇವೆ ಎಂದರು.
ರೆಡ್ಡಿ ಸಮಾಜದ ತಾಲೂಕು ಅಧ್ಯಕ್ಷ ನಾಗಭೂಷಣರೆಡ್ಡಿ ಹೂಡಾ, ಹಿರಿಯ ಮುಖಂಡ ಶರಣರೆಡ್ಡಿ ಜಿಲ್ಲೇಡಪಲ್ಲಿ, ಮುರುಗೇಂದ್ರರೆಡ್ಡಿ ಬಿಲಾಕಲ್, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ ಇತರರು ಈ ವೇಳೆ ಹಾಜರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.