ಗ್ರಾಪಂ ಅವ್ಯವಹಾರ ತನಿಖೆಗೆ ಒತ್ತಾಯ
Team Udayavani, Nov 27, 2021, 1:08 PM IST
ಅಫಜಲಪುರ: ತಾಲೂಕಿನ ಚವಡಾಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಹಾಗೂ ಕೋವಿಡ್ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿ ತನಿಖೆಗೆ ಒತ್ತಾಯಿಸಿದರು.
ಈ ಕುರಿತು ಜೆಡಿಎಸ್ ತಾಲೂಕು ಜಮೀಲ್ ಗೌಂಡಿ, ಮುಖಂಡ ಅಮರಸಿಂಗ್ ರಜಪೂತ ಮಾತನಾಡಿ, ಚವಡಾಪುರ ಗ್ರಾ.ಪಂ ಅದ್ಯಕ್ಷ ಹಾಗೂ ಪಿಡಿಒ ಸೇರಿಕೊಂಡು ನರೇಗಾ ಯೋಜನೆಯಡಿಯಲ್ಲಿ ಲಕ್ಷಾಂತರ ರೂ. ಬೋಗಸ್ ಬಿಲ್ ಸೃಷ್ಟಿಸಿ, ಗ್ರಾ.ಪಂ ಕಾರ್ಯಾಲಯಕ್ಕೆ ಹೊಸ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಮಾಹಿತಿ ನೀಡಿ 50 ಸಾವಿರ ರೂ., ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಹೇಳಿ 50 ಸಾವಿರ ರೂ., ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿದ್ದಾಗಿ ಹೇಳಿ 50 ಸಾವಿರ ರೂ. ಲಪಟಾಯಿಸಿದ್ದಾರೆ ಎಂದು ದೂರಿದರು.
ಗ್ರಾಮದಲ್ಲಿ ಸ್ಯಾನಿಟೈಸರ್, ಮಾಸ್ಕ್ ವಿತರಣೆ, ಸ್ವತ್ಛತೆಗಾಗಿ 6.5 ಲಕ್ಷ ರೂ. ಖರ್ಚು ತೋರಿಸಲಾಗಿದೆ. ಆದರೆ ಯಾರೊಬ್ಬರಿಗೂ ಸ್ಯಾನಿಟೈಸರ್ ನೀಡಿಲ್ಲ ಎಂದು ಆಪಾದಿಸಿದರು.
ಮುಖಂಡರಾದ ಶ್ರೀಕಾಂತ ದಿವಾನಜಿ, ರಾಜು ಜಮಾದಾರ ಗ್ರಾ.ಪಂ ಸದಸ್ಯ ಶರಣಪ್ಪ ಕಲಕೇರಿ, ಮುಖಂಡರಾದ ಸಾಯಬಣ್ಣ ಜಮಾದಾರ, ಮಾಜಿ ಸೈನಿಕ ಬಸವರಾಜ ಜಮಾದಾರ, ಕಲ್ಯಾಣಿ ಗಂಡೋಳಿ, ಮಾಂತು ಸಪ್ಪನಗೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.