ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ| ದಯಾನಂದ ಅಗಸರ ನೇಮಕ
ಈಗ ವಿಶ್ವವಿದ್ಯಾಲಯದಲ್ಲಿ ಹಲವು ಸಮಸ್ಯೆ ಮತ್ತು ಸವಾಲುಗಳ ಸರಮಾಲೆಯೇ ಇದೆ.
Team Udayavani, Jan 23, 2021, 3:36 PM IST
ಕಲಬುರಗಿ: ನಗರದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಕೊನೆಗೂ ಕಾಯಂ ಕುಲಪತಿ ನೇಮಕವಾಗಿದ್ದು, ನೂತನ ಕುಲಪತಿಯಾಗಿ ಪ್ರೊ| ದಯಾನಂದ ಅಗಸರ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕಾಯಂ ಕುಲಪತಿಯಾಗಿದ್ದ ಪ್ರೊ| ಎಸ್. ಆರ್. ನಿರಂಜನ ನಿವೃತ್ತವಾದ ನಂತರದ ದಿನದಿಂದ ಹೊಸ ಕುಲಪತಿ ನೇಮಕ ನನೆಗುದಿಗೆ ಬಂದಿತ್ತು. ಹಂಗಾಮಿ ಕುಲಪತಿಯಾಗಿ ಪ್ರಾಧ್ಯಾಪಕರನ್ನು ಒಬ್ಬರ ನಂತರ ಒಬ್ಬರನ್ನು ನೇಮಿಸಲಾಗಿತ್ತು. ಹೀಗೆ ಐದಾರು ಜನ ಪ್ರಾಧ್ಯಾಪಕರು ಹಂಗಾಮಿಯಾಗಿ ಕಾರ್ಯ ನಿರ್ವಹಿಸಿದ್ದರು. ಈ ನಡುವೆ ಕಾಯಂ ಕುಲಪತಿ ಹುದ್ದೆಗೆ ಅನೇಕರ ನಡುವೆ ಪೈಪೋಟಿ ಏರ್ಪಟಿತ್ತು. ಇದೀಗ ಇದೇ ವಿಶ್ವವಿದ್ಯಾಲಯದ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ| ದಯಾನಂದ ಅಗಸರ ಅವರನ್ನು ನೇಮಕ ಮಾಡಲಾಗಿದೆ.
ಶುಕ್ರವಾರ ಸಂಜೆ ಪ್ರಭಾರಿ ಕುಲಪತಿಯಾದ ಪ್ರೊ| ಚಂದ್ರಕಾಂತ ಯಾತನೂರ ಅವರು ನೂತನ ಕುಲಪತಿ ಪ್ರೊ| ದಯಾನಂದ ಅಗಸರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರಭಾರಿ ಕುಲಸಚಿವ ಡಾ| ಕೆ.ಎಂ. ಸಂಜೀವ ಕುಮಾರ, ಪ್ರೊ ಎನ್.ಬಿ. ನಡುವಿನಮನಿ, ಪ್ರೊ| ಚಂದ್ರಕಾಂತ ಕೆಳಮನಿ, ಡಾ| ಎಂ.ಎಸ್. ಪಾಸೋಡಿ, ಡಾ| ಎಚ್.ಎಂ. ಜಂಗೆ, ಡಾ| ಎನ್. ಜಿ. ಕಣ್ಣೂರ, ಪ್ರೊ| ಲಕ್ಷ್ಮಣ ರಾಜನಾಳಕರ್, ಪ್ರೊ| ಎಚ್.ಟಿ. ಪೋತೆ ಮತ್ತಿತರರು ಶುಭಕೋರಿದರು.
ಸಮಸ್ಯೆ-ಸವಾಲು ಹಲವು: ಜಿಲ್ಲೆಯ ಆಳಂದ ತಾಲೂಕಿನ ಬೆಳಮಗಿ ಗ್ರಾಮದವರಾದ ಪ್ರೊ| ದಯಾನಂದ ಅಗಸರ ಈ ಹಿಂದೆ ಇದೇ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಈಗ ವಿಶ್ವವಿದ್ಯಾಲಯದಲ್ಲಿ ಹಲವು ಸಮಸ್ಯೆ ಮತ್ತು ಸವಾಲುಗಳ ಸರಮಾಲೆಯೇ ಇದೆ. ವಿಶ್ವವಿದ್ಯಾಲಯ
ಆರ್ಥಿಕ ಮತ್ತು ಮಾನವ ಸಂಪನ್ಮೂಲ ಕೊರತೆಯಿಂದ ಬಳಲುತ್ತಿದೆ. ಶೇ.70ಕ್ಕೂ ಹೆಚ್ಚು ಬೋಧಕ-ಬೋಧಕೇತರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಮತ್ತು ಸಕಾಲಕ್ಕೆ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸುವ ಮುಖ್ಯ ಸವಾಲುಗಳು ನೂತನ ಕುಲಪತಿ ಎದುರಿಗಿವೆ.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಇದೇ ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ಮೂರು ವರ್ಷ ಕುಲಸಚಿವನಾಗಿ ಕಾರ್ಯನಿರ್ವಹಿಸಿದ್ದು, ಆಡಳಿತದ ಅನುಭವ ಇದೆ. ಬೋಧಕ, ಬೋಧಕೇತರ ಸಿಬ್ಬಂದಿ ಸಹಕಾರದೊಂದಿಗೆ ವಿಶ್ವವಿದ್ಯಾಲಯವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕನಸು ಹೊಂದಿದ್ದೇನೆ ಎಂದು ಹೇಳಿದರು. ಇದೇ ವಿವಿ ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕನಾದ ನಾನು ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ. ನ್ಯಾಕ್ ಸಮಿತಿಗೆ ಹೋಗಲು ಅಗತ್ಯ ಸಿಬ್ಬಂದಿ ಅವಶ್ಯಕತೆ ಇದೆ. ಹೀಗಾಗಿ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅನುಮತಿ ಕೋರಿ ಸರ್ಕಾರಕ್ಕೆ ಪತ್ರದ ಬರೆದು ಮನವಿ ಮಾಡುತ್ತೇನೆ. ಉಳಿದಂತೆ ಸಣ್ಣ-ಪುಟ್ಟ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಲಾವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.