ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ
Team Udayavani, Dec 7, 2021, 10:57 AM IST
ಕಲಬುರಗಿ: ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಮತದಾರರ ಬೇಟೆಗೆ ಬಿಜೆಪಿ-ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
ಹಣವಂತ-ಗುಣವಂತ, ಬಡವ- ಶ್ರೀಮಂತ, ಮತದಾರರ ಸಮಸ್ಯೆ ಗೊತ್ತಿದ್ದವರು-ಗೊತ್ತಿಲ್ಲದವರು, ನಾವು ಗೆದ್ದರೆ ಮತದಾರರ ಬಳಿಗೆ, ಅವರು ಗೆದ್ದರೆ ಮನೆ ಎದುರು ಕಾಯುವುದು, ಸ್ಥಳೀಯ ಮತದಾರರಿಗೆ ಸ್ಪಂದಿಸದಿರುವುದು, ನಾವು ಸ್ಪಂದಿಸುತ್ತೇವೆ. ಹೀಗೆ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಹಾಲಿ ಸದಸ್ಯ ಬಿ.ಜಿ.ಪಾಟೀಲ ಅಭ್ಯರ್ಥಿ ಎಂಬುದು ಮೊದಲೇ ಗೊತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷ ಅಳೆದು-ತೂಗಿ ಎಲ್ಲವನ್ನು ವಿಚಾರಿಸಿ ಕೊನೆಗೆ ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ ಶಿವಾನಂದ ಪಾಟೀಲ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ಕಾಂಗ್ರೆಸ್ ಪಕ್ಷ ನಾಮಕಾವಾಸ್ತೆ ಸ್ಪರ್ಧಿಸಿದೆ ಎಂದಿತ್ತು. ಆದರೆ ಕಾಂಗ್ರೆಸ್ ಪಕ್ಷ ಕೆಳಹಂತದಿಂದ ಅದರಲ್ಲೂ ಸಂಘಟನಾತ್ಮಕವಾಗಿ ಪ್ರಚಾರಕ್ಕೆ ಇಳಿದಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ.
ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಕ್ಷೇತ್ರದಾದ್ಯಂತ ಸಂಚರಿಸಿ ಪ್ರಚಾರ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಮತದಾನ ಹಕ್ಕು ಕೊಟ್ಟಿದ್ದೇ ತಾವು ಹಾಗೂ ಕಳೆದ ಲೋಕಸಭೆ ಚುನಾವಣೆ ಸೋಲಿಗೆ ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮುಖಾಂತರ ತಕ್ಕ ಉತ್ತರ ನೀಡಿ ಎಂಬುದು ಹೇಳಿರುವುದು ಆತ್ಮಾವಲೋಕನಕ್ಕೆ ಎಡೆ ಮಾಡಿಕೊಟ್ಟಿದೆ.
ಬಿಜೆಪಿಯಿಂದ ಹಿರಿಯ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ ಹಾಗೂ ಇತರರು ಪ್ರಚಾರ ನಡೆಸಿದ್ದಾರೆ. ಇನ್ನುಳಿದಂತೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್‌ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಸಂಸದ ಡಾ| ಉಮೇಶ ಜಾಧವ ಹಾಗೂ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರಿಂದ ಚುನಾವಣೆ ಕಾವು ಇಮ್ಮಡಿಗೊಂಡಿದೆ.
ಬಹಿರಂಗ ಚರ್ಚೆಗೆ ಆಹ್ವಾನ
ಚುನಾವಣೆ ಸಂದರ್ಭದಲ್ಲಿ ಪರಸ್ಪರ ಆರೋಪ ಹಾಗೂ ಟೀಕೆಗಳು ಕೇಳಿಬರುವುದು ಸಹಜ. ಅಭಿವೃದ್ಧಿ ಕೆಲಸಗಳು ಹಾಗೂ ಅನುದಾನ ಹಂಚಿಕೆ ಕುರಿತಾಗಿ ಬಹಿರಂಗ ಚರ್ಚೆಗೆ ಸಿದ್ಧ ಎಂಬುದಾಗಿ ಬಿಜೆಪಿ ಅಭ್ಯರ್ಥಿ ಹಾಲಿ ಸದಸ್ಯ ಬಿ.ಜಿ. ಪಾಟೀಲ ಆಹ್ವಾನ ನೀಡಿದ್ದು, ಚುನಾವಣೆ ಅಖಾಡ ಮತ್ತಷ್ಟು ರಂಗೇರಿದೆ ಎನ್ನುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.