ರೆಡ್ಡಿ ಸಮಾಜದ ಬಡವರಿಗೆ ನೆರವು ನೀಡಿ: ದರ್ಶನಾಪುರ
Team Udayavani, Jan 21, 2022, 11:26 AM IST
ಸೇಡಂ: ರೆಡ್ಡಿ ಸಮಾಜದಲ್ಲೂ ಬಡವರಿದ್ದಾರೆ. ಅವರ ನೆರವಿಗೆ ಬರುವ ಅವಶ್ಯಕತೆ ಇದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.
ತಾಲೂಕಿನ ಹೂಡಾ ಜವಾಹರನಗರ ಬಳಿ ನಿರ್ಮಿಸಲಾಗುತ್ತಿರುವ ಮಹಾಸ್ವಾ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ ದೇವಾಲಯಕ್ಕೆ ಭೇಟಿ ನೀಡಿ, ನಂತರ ವೇಮನ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಕಲಬುರಗಿ ಜಿಲ್ಲೆಯ ವಿವಿದೆಢೆಯಲ್ಲಿ ಹೇಮರೆಡ್ಡಿ ಮಲ್ಲಮ್ಮ ದೇವಾಲಯಗಳ ನಿರ್ಮಾಣ ಕಾರ್ಯ ನಡೆದಿದೆ. ವೇಮನ ವೈರಾಗ್ಯಶೀಲರಾಗಿ, ಕಾಯಕನಿಷ್ಠರಾಗಿ ಜೀವಿಸಿ ತತ್ವಪದ್ಯಗಳನ್ನು ಭೋಧಿ ಸುವ ಮೂಲಕ ಸಮಾಜದಲ್ಲಿ ತತ್ವ ಜ್ಞಾನಿಯಾದರು. ಅವರ ತತ್ವದಿಂದ ಅದರ್ಶವ್ಯಕ್ತಿಗಳಾಗಿ ಬದುಕಲು ಕಲಿಯೋಣ ಎಂದರಲ್ಲದೇ ದೇವಾಲಯ ನಿರ್ಮಾಣಕ್ಕೆ 5 ಲಕ್ಷ ರೂ. ವೈಯಕ್ತಿಕ ನೆರವು ನೀಡುವುದಾಗಿ ತಿಳಿಸಿದರು.
ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಚನ್ನಾರೆಡ್ಡಿ ಪಾಟೀಲ ಮಾತನಾಡಿ, ಶಿಕ್ಷಣದ ಮೂಲಕ ಸಮಾಜವನ್ನು ಸಂಘಟಿಸುವ ಅವಶ್ಯಕತೆ ಇದೆ. ಇದರಿಂದ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಾಧ್ಯ ಎಂದರು.
ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ, ರೆಡ್ಡಿ ಸಮಾಜದ ಅಧ್ಯಕ್ಷ ನಾಗಭೂಷಣರೆಡ್ಡಿ ಪಾಟೀಲ, ಹೇಮ ವೇಮ ಟ್ರಸ್ಟ್ ಅಧ್ಯಕ್ಷ ಶರಣರೆಡ್ಡಿ ಜಿಲ್ಲೇಡಪಲ್ಲಿ, ಭೂದಾನಿ ಮಾಣಿಕರೆಡ್ಡಿ ಹಾಶನಪಲ್ಲಿ, ರೆಡ್ಡಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಶಾಂತರೆಡ್ಡಿ, ನಾಗರೆಡ್ಡಿ ಪಾಟೀಲ ಕರದಾಳ, ರೆಡ್ಡಿ ಸಮಾಜದ ಯುವ ಘಟಕ ಅಧ್ಯಕ್ಷ ಶಿವಲಿಂಗರೆಡ್ಡಿ ಪಾಟೀಲ ಬೆನಕನಹಳ್ಳಿ, ಲಕ್ಷ್ಮೀ ಪಲ್ಲಾರೆಡ್ಡಿ, ರಾಮರೆಡ್ಡಿ ಪಾಟೀಲ ನಾಲವಾರ, ಶರಣಭೂಪಾಲರೆಡ್ಡಿ ಹಾಬಾಳ, ಅನಂತರೆಡ್ಡಿ ಪಾಟೀಲ ಹಾಶನಪಲ್ಲಿ, ಸತೀಶರೆಡ್ಡಿ ಪಾಟೀಲ ರಂಜೋಳ, ಬಿಜೆಪಿ ಅಧ್ಯಕ್ಷ ಪರ್ವತರೆಡ್ಡಿ ಪಾಟೀಲ ನಾಮವಾರ, ವೀರಾರೆಡ್ಡಿ ಹೂವಿನಬಾವಿ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.