ಹಿಂದೂ ಧರ್ಮದ ರಕ್ಷಣೆ ಕರ್ತವ್ಯವಾಗಲಿ;ಸಿದ್ಧಲಿಂಗ
ಬರುವ ವರ್ಷ ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ ಮಾಡಲಾಗುವುದು
Team Udayavani, Sep 15, 2021, 5:41 PM IST
ಜೇವರ್ಗಿ: ಧರ್ಮ ಉಳಿದರೆ ರಾಷ್ಟ್ರ ಉಳಿಯುತ್ತದೆ, ರಾಷ್ಟ್ರ ಉಳಿದರೆ ಮಾತ್ರ ಪ್ರಜೆಗಳು ಉಳಿಯಲು ಸಾಧ್ಯ. ಆದ್ದರಿಂದ ಹಿಂದೂ ಧರ್ಮ ರಕ್ಷಣೆ ನಮ್ಮ ಕರ್ತವ್ಯವಾಗಬೇಕು ಎಂದು ಆಂದೋಲಾ ಕರುಣೇಶ್ವರ ಮಠದ ಪೀಠಾ ಧಿಪತಿ, ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಶಾಂತನಗರ ಕ್ರಾಸ್ ಬಳಿ ಶ್ರೀರಾಮಸೇನೆ ಸಂಘಟನೆ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಐದು ದಿನಗಳ ಗಣೇಶ ವಿಸರ್ಜನಾ ನಿಮಿತ್ತ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು.
ಧರ್ಮವನ್ನು ರಕ್ಷಿಸಿದರೇ ಧರ್ಮ ನಮ್ಮನ್ನು ರಕ್ಷಿಸುತ್ತದೆ. ಜೀವನದಲ್ಲಿ ಧರ್ಮ ಪಾಲನೆ ಮಾಡುವುದು ಮುಖ್ಯ. ಹಿಂದೂ ಧರ್ಮ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. ಪ್ರತಿಯೊಬ್ಬರಿಗೂ ಅವರ ಧರ್ಮ ಪಾಲಿಸಲು ಅವಕಾಶ ನೀಡುತ್ತದೆ. ನಾವೇ ಮೊದಲು ಯಾರನ್ನೂ ಕೆಣಕುವುದಿಲ್ಲ, ಯಾವುದೇ ಧರ್ಮದ ಮೇಲೆ ಆಕ್ರಮಣ ಸಹ ಮಾಡುವುದಿಲ್ಲ. ಆದರೆ, ನಮ್ಮ ಧರ್ಮದ ಮೇಲೆ ಆಕ್ರಮಣವಾದರೇ ಮಾತ್ರ ಬಿಡುವುದಿಲ್ಲ ಎಂದರು.
ವಿಶ್ವದಲ್ಲಿಯೇ ಹಿಂದೂ ಧರ್ಮ ಅತ್ಯಂತ ಹಳೆಯ ಹಾಗೂ ಪವಿತ್ರ ಧರ್ಮವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮವನ್ನು ತುಳಿಯಲಾಗುತ್ತಿದೆ. ಬುದ್ಧಿ ಜೀವಿಗಳು, ಪ್ರಗತಿಪರರು ಸೇರಿ ಹಿಂದೂ ಸಂಘಟನೆಗಳನ್ನು ದುರ್ಬಲಗೊಳಿಸಲು ಯತ್ನಿಸುತಿದ್ದಾರೆ. ಮೂಢನಂಬಿಕೆ ಆಚರಣೆ ವಿರೋಧದ ಹೆಸರಿನಲ್ಲಿ ಸನಾತನ ಧರ್ಮದ ನಂಬಿಕೆಗಳಿಗೆ ಕೊಳ್ಳಿ ಇಡಲಾಗುತ್ತಿದೆ. ಹೀಗಾಗಿ, ಯುವ ಜನಾಂಗ ಹಾಗೂ ಸಂತರು ಹಿಂದೂ ಧರ್ಮದ ಉಳಿವಿಗಾಗಿ ಹೋರಾಡಬೇಕು ಎಂದರು.
ಪ್ರಸಕ್ತ ವರ್ಷ ಕೊರೊನಾ ಮೂರನೇ ಅಲೆ ಭೀತಿಯಿಂದ ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, 21 ದಿನದ ಬದಲು 5 ದಿನಗಳಲ್ಲಿಯೇ ಗಣೇಶ ವಿಸರ್ಜನೆ ಮಾಡಲಾಗಿದೆ. ಬರುವ ವರ್ಷ ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ ಮಾಡಲಾಗುವುದು ಎಂದು ಹೇಳಿದರು.
ನಂತರ ಸರಳವಾಗಿ ಗಣೇಶ ಮೂರ್ತಿಯನ್ನು ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ಬಳಿಯ ಭೀಮಾನದಿಯಲ್ಲಿ ವಿಸರ್ಜಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ರಮೇಶಬಾಬು ವಕೀಲ, ವಿಎಚ್‌ಪಿ ಮುಖಂಡ ಮಲ್ಲಿಕಾರ್ಜುನ ಆದವಾನಿ, ಶ್ರೀರಾಮಸೇನೆ ಸಂಘಟನೆ ಜಿಲ್ಲಾ ಉಪಾದ್ಯಕ್ಷ ಈಶ್ವರ ಹಿಪ್ಪರಗಿ, ತಾಲೂಕು ಘಟಕದ ಅದ್ಯಕ್ಷ ನಿಂಗಣ್ಣಗೌಡ ಪಾಟೀಲ ರಾಸಣಗಿ, ಕಿರಣ ಪಾಟೀಲ ಚನ್ನೂರ, ಸಿದ್ದು ನಾಯ್ಕೋಡಿ, ಅನಿಲ ಪವಾರ, ಸುನೀಲ ಗುತ್ತೇದಾರ, ನಿಂಗಣ್ಣ ಗುತ್ತೇದಾರ, ಚಿದಾನಂದ ಭಾವಿಮನಿ, ಸಿದ್ಧು ಮಾವನೂರ, ನಾಗರಾಜ ರಾಸಣಗಿ, ವಿನೋದ ರಾಸಣಗಿ, ಆಕಾಶ ಬಣಮಿ, ಬಸವರಾಜ ಹುಗ್ಗಿ ಹಾಗೂ ಶ್ರೀರಾಮಸೇನೆ ಸಂಘಟನೆ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.