ವಸತಿ ನಿಲಯದ ಸಮಸ್ಯೆ: ವಾರ್ಡ್ ಸದಸ್ಯ ಪರಿಶೀಲನೆ
Team Udayavani, Dec 18, 2021, 12:40 PM IST
ಚಿತ್ತಾಪುರ: ಪಟ್ಟಣದ ವಾರ್ಡ್ ಸಂಖ್ಯೆ 4ರಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಪುರಸಭೆ ಸದಸ್ಯ ವಿನೋದ ಗುತ್ತೇದಾರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರೀಶಿಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಶಾಸಕ ಪ್ರಿಯಾಂಕ್ ಖರ್ಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಗೊಳಿಸಿ ಬಾಲಕರ ವಸತಿ ನಿಲಯ ನಿರ್ಮಿಸಿದ್ದಾರೆ. ಆದರೆ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದರಿಂದ ವಸತಿ ನಿಲಯದಲ್ಲಿ ಹಲವು ಸಮಸ್ಯೆಗಳು ಉದ್ಭವವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಳೆ ಬಂದರೆ ವಸತಿ ನಿಲಯದ ಕೋಣೆಗಳಲ್ಲಿ ನೀರು ಸಂಗ್ರಹವಾಗುತ್ತಿದೆ. ವಿದ್ಯಾರ್ಥಿಗಳು ಸ್ನಾನ ಮಾಡಿದ ನೀರು, ಊಟ ಮಾಡಿ ಕೈ ತೊಳೆದುಕೊಳ್ಳುವ ನೀರು, ಅಡುಗೆ ಮಾಡಿದ ನೀರು ಒಂದೇ ಪೈಪ್‌ನಲ್ಲಿ ಹೋಗುತ್ತಿದೆ. ಇದರಿಂದ ವಸತಿ ನಿಲಯದ ಆವರಣದಲ್ಲಿ ಈ ನೀರು ಜಮಾವಣೆ ಆಗುತ್ತಿದೆ. ವಸತಿ ನಿಲಯದ ಆವರಣದಿಂದ ನೀರು ಹೊರಗೆ ಹೋಗಲು ಪೈಪ್ ಅಳವಡಿಸಿಲ್ಲ. ಇದರಿಂದ ಸೊಳ್ಳೆಗಳ ಕಾಟ, ಗಬ್ಬು ವಾಸನೆ ಹರಡಿದೆ ಎಂದು ಸಿಡಿಮಿಡಿಗೊಂಡರು.
ಈ ಕುರಿತು ಗುತ್ತಿಗೆದಾರರನ್ನು ಪ್ರಶ್ನಿಸಿದರೆ ಅದು ನಮ್ಮ ಎಸ್ಟಿಮೆಂಟ್‌ನಲ್ಲಿ ಇಲ್ಲ ಎನ್ನುತ್ತಿದ್ದಾರೆ. ಕೂಡಲೇ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದು ಮಾಡಬೇಕು ಎಂದು ಪುರಸಭೆಗೆ ಒತ್ತಾಯಿಸಿದರು. ನಂತರ ಸ್ಥಳಕ್ಕೆ ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕರೆಸಿ ವಸತಿ ನಿಲಯದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.