28ರಂದು ಡಾ| ಅಂಬೇಡ್ಕರ್ ಭವನ ಉದ್ಘಾಟನೆ: ಹರನಾಳ
Team Udayavani, Apr 26, 2022, 12:19 PM IST
ಜೇವರ್ಗಿ: ಕಳೆದ 20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಬಿ.ಆರ್. ಅಂಬೇಡ್ಕರ್ ಭವನ ಲೋಕಾರ್ಪಣೆಗೆ ಮಹೂರ್ತ ಕೂಡಿ ಬಂದಿದ್ದು, ಏ.28ರಂದು ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿ ನಿರ್ಮಿಸಿರುವ ಡಾ| ಅಂಬೇಡ್ಕರ್ ನೂತನ ಭವನದ ಉದ್ಘಾಟನೆ, ಡಾ|ಬಾಬಾಸಾಹೇಬರ 131ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಡಾ| ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಹರನಾಳ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ನಿರ್ಮಿಸಿದ ಡಾ| ಬಾಬಾಸಾಹೇಬ ಅಂಬೇಡ್ಕರ್ ಭವನ ಉದ್ಘಾಟನೆ, ಐತಿಹಾಸಿಕ 131ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಕೊರೊನಾ ಸೋಂಕಿನ ಕಾರಣ ಕಳೆದ ಎರಡು ವರ್ಷಗಳ ನಂತರ ಹಮ್ಮಿಕೊಳ್ಳಲಾಗಿದೆ. ಕಳೆದ ಒಂದು ವಾರದಿಂದ ಜಯಂತ್ಯುತ್ಸವ ಯಶಸ್ವಿಗೆ ಸಮುದಾಯದ ಮುಖಂಡರು ಹಗಲಿರುಳು ಶ್ರಮಿಸು ತ್ತಿದ್ದಾರೆ. ಎಲ್ಲ ಸಮುದಾಯದ, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಶಾಸಕ ಡಾ| ಅಜಯಸಿಂಗ್ ಪಟ್ಟಣದಲ್ಲಿಯೇ ಬೀಡುಬಿಟ್ಟಿದ್ದು, ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಜೇವರ್ಗಿ-ಯಡ್ರಾಮಿ ತಾಲೂಕಿನ 165 ಹಳ್ಳಿಗಳ ಜನ ಜಯಂತ್ಯುತ್ಸವದಲ್ಲಿ ಭಾಗವಹಿಸಲಿದ್ದು, ಎಲ್ಲ ರೀತಿಯ ಸಕಲ ವ್ಯವಸ್ಥೆ ಮಾಡಲಾಗಿದೆ. ಏ.28ರಂದು ಬೆಳಗ್ಗೆ 11ಗಂಟೆಗೆ ಪಟ್ಟಣದ ಬಸವೇಶ್ವರ ಸರ್ಕಲ್‌ದಿಂದ ಅಂಬೇಡ್ಕರ್ ಭವನದ ವರೆಗೆ ಡಾ| ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಲಿದೆ.
ನೂತನ ಭವನವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆ ಮಾಡಲಿದ್ದಾರೆ. ಬೀದರನ ಅಣದೂರ ಬುದ್ಧವಿಹಾರದ ವರಜ್ಯೋತಿ ಬಂತೇಜಿ, ಕಲಬುರಗಿ ಬುದ್ಧವಿಹಾರದ ಸಂಘಾನಂದ ಬಂತೇಜಿ, ಮೈಸೂರಿನ ಉರಿಲಿಂಗಪೆದ್ದಿ ಸಂಸ್ಥಾನ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರು. ಶಾಸಕ ಡಾ| ಅಜಯಸಿಂಗ್, ಚಂದ್ರಶೇಖರ ಹರನಾಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜ್ಯೋತಿ ಬೆಳಗಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ಕೇಂದ್ರಿಯ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಪ್ರೊ| ಅಪ್ಪುಗೆರೆ ಸೋಮಶೇಖರ ಮುಖ್ಯಭಾಷಣ ಮಾಡುವರು.
ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೊಲ್ಲಾಳಪ್ಪ ಯಾತನೂರ, ಜಿ.ಪಂ. ಮಾಜಿ ಸದಸ್ಯರಾದ ಶಾಂತಪ್ಪ ಕೂಡಲಗಿ, ಮರೆಪ್ಪ ಬಡಿಗೇರ, ಡಿಎಸ್‌ಎಸ್ ರಾಜ್ಯ ಸಂಚಾಲಕ ಡಿ.ಜಿ.ಸಾಗರ, ಡಾ| ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಯಪ್ಪ ಬಾರಿಗಿಡ, ಮುಖಂಡರಾದ ಸುಭಾಸ ಚನ್ನೂರ, ಯಶವಂತ ಆಂದೋಲಾ, ಪುಂಡಲೀಕ ಗಾಯಕವಾಡ, ಮಲ್ಲಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಚಂದ್ರಶೇಖರ ಹರನಾಳ ಹೇಳಿದರು.
ಜಿಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ, ದಲಿತ ಮುಖಂಡರಾದ ಸುಭಾಷ ಚನ್ನೂರ, ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ರಾಯಪ್ಪ ಬಾರಿಗಿಡ, ಶಾಂತಪ್ಪ ಯಲಗೋಡ, ಸಿದ್ರಾಮ ಕಟ್ಟಿ, ಶ್ರೀಹರಿ ಕರಕಿಹಳ್ಳಿ, ಭಾಗರೆಡ್ಡಿ ಆಂದೋಲಾ, ಮಲ್ಲಿಕಾರ್ಜುನ ಕೆಲ್ಲೂರ, ಶ್ರೀಮಂತ ಧನಕರ್, ದವಲಪ್ಪ ಮದನ್, ರವಿ ಕುರಳಗೇರಾ, ಸಿದ್ಧಪ್ಪ ಆಲೂರ, ಡಾ| ಅಶೋಕ ದೊಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.