ಗ್ರೂಪ್ ಡಿ ನೌಕರರ ಪ್ರಯಾಣ ಭತ್ಯೆ ಹೆಚ್ಚಿಸಿ
Team Udayavani, Dec 18, 2021, 12:32 PM IST
ಚಿತ್ತಾಪುರ: ಗ್ರೂಪ್ ಡಿ ನೌಕರರಿಗೆ ಪ್ರಸಕ್ತ ವರ್ಷದ ಪ್ರಯಾಣ ಭತ್ಯೆ ಹೆಚ್ಚಿಸಬೇಕು ಮತ್ತು ಕೋವಿಡ್ 19 ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗ್ರೂಪ್ ಡಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶಿವರಾಜ ಕುಮಾರ ನೇತೃತ್ವದಲ್ಲಿ ಪದಾಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ನೌಕರರು ಪ್ರತಿ ವರ್ಷ ಪ್ರಯಾಣ ಭತ್ಯೆ ಪಡೆಯುತ್ತಿದ್ದಾರೆ. ಆದರೆ ಪ್ರಯಾಣ ಭತ್ಯೆ ನೀಡುವಲ್ಲಿ ಪ್ರತಿ ತಿಂಗಳಿಗೆ ಇಂತಿಷ್ಟೇ ಎಂದು ದರ ನಿಗದಿ ಮಾಡಿದ್ದಾರೆ. ನೌಕರರು ವಿಶೇಷವಾಗಿ ಈ ವರ್ಷ ಕೋವಿಡ್-19 ಸಂದರ್ಭದಲ್ಲಿ ಕೋವಿಡ್ ಲಸಿಕೆ ತರುವುದು. ಕೋವಿಡ್ ಮಾದರಿಗಳನ್ನು ಪ್ರಯೋಗಾಲಯಕ್ಕೆ ನೀಡುವುದು. ಹೀಗೆ ಅತಿ ಹೆಚ್ಚು ಪ್ರಯಾಣ ಮಾಡಿದ್ದಾರೆ. ಹೀಗಾಗಿ ಪ್ರತಿ ವರ್ಷದಂತೆ ಪ್ರಯಾಣ ಭತ್ಯೆಗೆ ಯಾವುದೇ ದರ ನಿಗದಿ ಮಾಡದೇ ಸರ್ಕಾರದ ನಿಯಮಾವಳಿಗಳಂತೆ ನೌಕರರು ಎಷ್ಟು ಪ್ರಯಾಣ ಮಾಡಿದ್ದಾರೋ ಅವರಿಗೆ ಸಂಪೂರ್ಣ ಪ್ರಯಾಣ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
ಕೋವಿಡ್-19 ಪ್ರೋತ್ಸಾಹ ಧನ ನೀಡುವಂತೆ ಸರ್ಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಆದೇಶ ಹೊರಡಿಸಿದರೂ ಇನ್ನೂ ಕೆಲವು ನೌಕರರಿಗೆ ಪ್ರೋತ್ಸಾಹ ಧನ ಬಂದಿಲ್ಲ. ಆದ್ದರಿಂದ ಕೂಡಲೇ ನೌಕರರಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಘಟಕದ ಗೌರವಾಧ್ಯಕ್ಷ ಶಿವಾನಂದ, ಉಪಾಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿಗಳಾದ ರಾಘವೇಂದ್ರ, ಶ್ರವಣಕುಮಾರ, ಜಂಟಿ ಕಾರ್ಯದರ್ಶಿಗಳಾದ ರಮೇಶ ಶಿವಶರಣ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಮಹಾದೇವ, ಅಕ್ಷಯಕುಮಾರ, ಸದಸ್ಯರಾದ ಖಾಜಾ, ಶಬ್ಬೀರ್, ಶರಣು, ಸುನೀಲ, ಶಿವಲಿಂಗಪ್ಪ, ನಾಗಪ್ಪಾ ಹೆಚ್, ಹಣಮಂತ, ರಂಜಿತಾ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.