ನಕಲಿ ಮದ್ಯ ನಿಷೇಧಕ್ಕೆ ಒತ್ತಾಯ
Team Udayavani, Jun 2, 2022, 3:45 PM IST
ಚಿತ್ತಾಪುರ: ರಾಜ್ಯದ ತಾಂಡಾ ಮತ್ತು ಹಳ್ಳಿಗಳಲ್ಲಿನ ನಕಲಿ ಮದ್ಯ ಮಾರಾಟ ನಿಷೇಧಿಸಬೇಕು ಹಾಗೂ ಯಾದಗಿರಿ ಜಿಲ್ಲೆ, ಶಹಾಪುರ ತಾಲೂಕಿನ ಅಬಕಾರಿ ಅಧಿಕಾರಿಗಳ ಮೇಲಾಗಿರುವ ಹಲ್ಲೆ ಖಂಡಿಸಿ ಗೋರ ಸೇನಾ ರಾಷ್ಟ್ರೀಯ ಸಂಘಟನೆ ತಾಲೂಕು ಅಧ್ಯಕ್ಷ ಮನೋಜ ರಾಠೊಡ ನೇತೃತ್ವದಲ್ಲಿ ಮುಖಂಡರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಗೋರ ಸೇನಾ ಜಿಲ್ಲಾ ಉಪಾಧ್ಯಕ್ಷ ಅಶ್ವಥ ರಾಠೊಡ ಮಾತನಾಡಿ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಅಬಕಾರಿ ಅಧಿಕಾರಿಗಳು ನಕಲಿ ಮದ್ಯ ಮಾರಾಟ ಜಾಲದ ಆರೋಪಿಗಳನ್ನು ಬಂಧಿಸಲು ಹೋದಾಗ ಅಧಿಕಾರಿಗಳ ಮೇಲೆ ಆಗಿರುವ ಹಲ್ಲೆ ಯನ್ನು ಖಂಡಿಸುತ್ತೇವೆ ಎಂದರು.
ಮುಖಂಡರಾದ ವಿಜಯಕುಮಾರ ಚವ್ಹಾಣ, ರವಿ ಪವಾರ, ಆನಂದ ಜಾಧವ, ಆಕಾಶ ಚವ್ಹಾಣ, ಬಿ.ಜಿ. ಪವಾರ, ರವಿ ರಾಠೊಡ, ಸಂತೋಷ ರಾಠೊಡ, ಪ್ರೇಮ ಪವಾರ, ಅಂಬಾದಾಸ ರಾಠೊಡ, ನರೇಶ ರಾಠೊಡ, ಪವನ ಪವಾರ್, ಆಕಾಶ, ಆನಂದ ಪವಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.