![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 9, 2021, 6:37 PM IST
ಕಲಬುರಗಿ: ಫರತಾಬಾದ್ ಬಳಿ ಸ್ಥಾಪಿಸಲು ಉದ್ದೇಶಿಸಲಾಗಿರುವ 500 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕದ ಸ್ಥಳವನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಬಿ. ಪಾಟೀಲ ಗುರುವಾರ ವೀಕ್ಷಿಸಿ, ಪರಿಶೀಲಿಸಿದರು. ನವೀಕರಿಸಬಹುದಾದ ಇಂಧನ ಮಂತ್ರಾಲಯದಿಂದ ಭಾರತದ ಸರ್ಕಾರದ ಆರ್ಥಿಕ ಸಹಾಯದಡಿ ನವ ಹಾಗೂ ನವೀಕರಿಸಬಹುದಾದ ಇಂಧನ ಮೂಲಗಳ ಪಾರ್ಕ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, ಅದರಂತೆ 1750 ಕೋಟಿ ರೂ. ಮೊತ್ತವು ಘಟಕ ಸ್ಥಾಪನೆಗೆ ಹೂಡಿಕೆಯಾಗಲಿದೆ.
ಒಟ್ಟಾರೆ 350 ಕೋಟಿ ರೂ. ವೆಚ್ಚದಲ್ಲಿ ಪಾರ್ಕ್ ಸ್ಥಾಪನೆಗೆ ವಿನಿಯೋಗಿಸಲಾಗುತ್ತಿದೆ. ಹೀಗಾಗಿ ಘಟಕ ಸ್ಥಾಪನೆಗೆ ಬೇಕಾಗುವ ಪ್ರದೇಶ ಹಾಗೂ ಇತರ ಅವಶ್ಯಕತೆಗಳ ಕುರಿತಾಗಿ ಪಾಟೀಲ ಅವಲೋಕಿಸಿದರು. ಈಗಾಗಲೇ ರಾಜ್ಯದ ಪಾವಗಡದಲ್ಲಿ ಯಶಸ್ವಿಯಾಗಿ ಸೌರಶಕ್ತಿ ಪಾರ್ಕ್‌ನ್ನು ಅಭಿವೃದ್ಧಿಪಡಿಸಲಾಗಿದೆ. ಅದೇ ರೀತಿ ಫರತಾಬಾದ್ (ಫಿರೋಜಾಬಾದ್) ಬಳಿ ಸೌರಶಕ್ತಿ ಘಟಕ ಸ್ಥಾಪನೆ ಆಗುತ್ತಿರುವುದು ಸ್ಥಳೀಯ ಅಭಿವೃದ್ಧಿ ಜತೆಗೆ ಉದ್ಯೋಗಾವಕಾಶಕ್ಕೆ ಪೂರಕವಾಗುವ ಕಾರ್ಯ ಶೀಘ್ರವೇ ಆಗುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಮ್ಮ ಜತೆಗೆ ಕ್ರೆಡಲ್ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹೆಗಾರರು ಸ್ಥಳ ವೀಕ್ಷಿಸಿದ್ದಾರೆ ಎಂದು ಚಂದು ಪಾಟೀಲ ತಿಳಿಸಿದರು.
ನವ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಹೊಸ ಆಕರ್ಷಣೆಯಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಜಲಾನಯನ ಪ್ರದೇಶದಲ್ಲಿ (ಕೆರೆ ಹಾಗೂ ಅಣೆಕಟ್ಟು) ಒಂದು ಮೆಗಾ ವ್ಯಾಟ್ ಸಾಮರ್ಥ್ಯದ ತೇಲುವ ಸೌರಶಕ್ತಿ ವಿದ್ಯುತ್ ಘಟಕವನ್ನು ನಗರದ ಶರಣಬಸವೇಶ್ವರ (ಅಪ್ಪ ) ಕೆರೆಯಲ್ಲಿ ಸ್ಥಾಪಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅಂದಾಜು 5.50 ಕೋಟಿ ರೂ. ವೆಚ್ಚದಲ್ಲಿ ಘಟಕ ಸ್ಥಾಪನೆಯಾಗಲಿದೆ ಎಂದು ವಿವರಿಸಿದರು.
ಪಾರ್ಕ್‌ನಲ್ಲಿ ಉತ್ಪಾದಿಸಲಾದ ವಿದ್ಯುತ್‌ನ್ನು ಹೊರ ರಾಜ್ಯಗಳಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೌರ ವಿದ್ಯುತ್ ಪಾಕ್
ìನ್ನು ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯ ಕೇಂದ್ರ ಸರ್ಕಾರ ನಿಗದಿಪಡಿಸಿದ ಗುರಿಗಳನ್ನು ಸಾಧಿಸಿ 15097 ಮೆ.ವ್ಯಾ ಸಾಮರ್ಥಯದ ಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶದಲ್ಲೇ ನವ-ನವೀಕರಿಸಬಹುದಾದ ಇಂಧನ ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನದಲ್ಲಿದೆ.
ಚಂದು ಪಾಟೀಲ, ಕರ್ನಾಟಕ
ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.