ನಾಟ್ಯಗೀತೆ ಪರಂಪರೆ ಉಳಿಸುವುದು ಅಗತ್ಯ
ಭಾರತೀಯ ರಂಗ ಸಂಗೀತ ದಿನವನ್ನಾಗಿ ರಂಗಾಯಣ ಆಚರಿಸುತ್ತಿರುವುದು ಅತ್ಯಂತ ಸಮಂಜಸವಾಗಿದೆ
Team Udayavani, Sep 21, 2021, 4:32 PM IST
ಕಲಬುರಗಿ: ಹಳೆಯ ಕಾಲದ ನಾಟ್ಯಗೀತೆಗಳ ಪರಂಪರೆ ಉಳಿಸಿ-ಬೆಳೆಸುವುದು ಅಗತ್ಯವಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸಂಗೀತ ವಿಭಾಗದ ಮುಖ್ಯಸ್ಥೆ ಡಾ| ಜಯದೇವಿ ಜಂಗಮಶೆಟ್ಟಿ ಹೇಳಿದರು.
ರಂಗಾಯಣದಲ್ಲಿ ಬಿ.ವಿ. ಕಾರಂತ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಭಾರತೀಯ ರಂಗ ಸಂಗೀತ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ರಂಗಭೂಮಿ ಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಹಿರಿಯ ರಂಗಕಲಾವಿದೆ, ವಿಶ್ರಾಂತ ಪ್ರಾಧ್ಯಾಪಕಿ ಶಾಂತಾ ಭೀಮಸೇನ್ ರಾವ್ ಮಾತನಾಡಿ, ಮನೆಯಲ್ಲಿ ಸಾಮಾನ್ಯವಾಗಿ ದೊರೆಯುವ ಸಲಕರಣೆಗಳನ್ನು ಸಂಗೀತ ಪರಿಕರಗಳನ್ನಾಗಿ ಬಳಸಿ ಸಂಗೀತ ನೀಡುವ ಅದ್ಭುತ ಕಲೆಗಾರಿಕೆ ಹೊಂದಿದ್ದ ಬಿ.ವಿ.ಕಾರಂತದ ಜನ್ಮದಿನವನ್ನು ಭಾರತೀಯ ರಂಗ ಸಂಗೀತ ದಿನವನ್ನಾಗಿ ರಂಗಾಯಣ ಆಚರಿಸುತ್ತಿರುವುದು ಅತ್ಯಂತ ಸಮಂಜಸವಾಗಿದೆ ಎಂದರು. ನೀತಾ ಪಾಟೀಲ, ಸ್ವಾತಿಶಂಕರ ಜೋಶಿ ಹಾಗೂ ರಂಗಾಯಣದಕಲಾವಿದರು ಹಾಡಿದ ರಂಗಗೀತೆಗಳು ಪ್ರೇಕ್ಷಕರನ್ನು ರಂಜಿಸಿದವು.
ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಜಗದೀಶ್ವರಿ ಶಿವಕೇರಿ ಸ್ವಾಗತಿಸಿದರು. ಅಕ್ಷತಾ ಕುಲಕರ್ಣಿ ನಿರೂಪಿಸಿದರು, ಅಕ್ಕಮ್ಮ ವಂದಿಸಿದರು. ಮರಿಯಮ್ಮ, ಭಾಗ್ಯ ಪಾಳಾ ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.