ಜಲಜೀವನ್‌ ಯೋಜನೆ ಜಾರಿ ವಿರುದ್ದ ಜನಾಕ್ರೋಶ

Team Udayavani, Feb 9, 2022, 11:42 AM IST

6water

ವಾಡಿ: ಮನೆಗೊಂದು ನಳ ಕೊಡು ವುದಾದರೆ ಯೋಜನೆಯನ್ನು ಸ್ವಾಗತಿಸುತ್ತೇವೆ. ಆದರೆ ನಳಕ್ಕೆ ಮೀಟರ್‌ ಅಳವಡಿಸಿ ಕುಡಿಯುವ ನೀರಿನ ದಂಧೆ ನಡೆಸುವ ಸರ್ಕಾರದ ಷಡ್ಯಂತ್ರ ಸಾಕಾರಗೊಳ್ಳಲು ಬಿಡುವುದಿಲ್ಲ.

ಆಕ್ಷೇಪದ ನಡುವೆಯೂ ನಳಗಳಿಗೆ ಮೀಟರ್‌ ಅಳವಡಿಸಲು ಮುಂದಾದರೆ ಅವರುಗಳನ್ನು ಕಿತ್ತೆಸೆಯುತ್ತೇವೆ. ಜನವಿರೋಧಿ ಜಲಜೀವನ್‌ ಮಿಷನ್‌ ಯೋಜನೆ ಹಿಂದೆ ವ್ಯಾಪಾರದ ತಂತ್ರವಿದೆ. ಮೊದಲು ಉಚಿತವಾಗಿ ನೀರು ಕೊಟ್ಟು ನಂತರ ಸುಲಿಗೆಗೆ ಕೈ ಹಾಕುವ ಒಳಸಂಚು ರೂಪಿಸಲಾಗಿದೆ. ಇದನ್ನು ನಾವು ಒಪ್ಪೋದಿಲ್ಲ. ನಾವು ಪಂಚಾಯಿತಿಗೆ ತೆರಿಗೆ ಕಟ್ಟುತ್ತೇವೆ. ಮೀಟರ್‌ ಇಲ್ಲದೇ ಶುದ್ಧ ಕುಡಿಯುವ ನೀರು ಕೊಡಿ.. ಹೀಗೆ ತರಾಟೆಗೆ ತೆಗೆದುಕೊಳ್ಳುವ ಮೂಲಕ ಹಳಕರ್ಟಿ ಗ್ರಾಪಂ ವ್ಯಾಪ್ತಿಯ ಗುರುಜಿ ನಗರದ ನಿವಾಸಿಗಳು ಜಲಜೀವನ್‌ ಮಿಷನ್‌ ಯೋಜನೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಮನೆ-ಮನೆಗೆ ಗಂಗಾ ಯೋಜನೆ ಸಾಕಾರಗೊಳಿಸಲು ಪೈಪ್‌ ಮತ್ತು ಮೀಟರ್‌ಗಳ ಸಮೇತ ಬಡಾವಣೆಗೆ ಬಂದ ಗ್ರಾಪಂ ಅಧ್ಯಕ್ಷ ಸೋಮು ಚವ್ಹಾಣ, ಪಿಡಿಒ ರಾಚಯ್ಯಸ್ವಾಮಿ ಮಠಪತಿ, ತಾಲೂಕು ನೀರು ಸರಬರಾಜು ಇಲಾಖೆ ಎಇಇ ಅಜಯ ರಾಠೊಡ, ಜಲಜೀವನ್‌ ಮಿಷನ್‌ ಜೆಇ ರಾಜಕುಮಾರ ಮಡಿವಾಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಲಜೀವನ್‌ ಮಿಷನ್‌ ಯೋಜನೆ ಯಡಿ ಮನೆ ಮನೆಗೂ ಗಂಗೆ ತಲುಪಿಸುವ ಮಹತ್ವದ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಇದು ಜನಪರವಾಗಿದೆ ಎಂದು ವಾದಿಸಲು ಮುಂದಾದ ಅಧಿಕಾರಿಗಳೊಂದಿಗೆ ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್‌ ಪಕ್ಷದ ಮುಖಂಡ ಮಲ್ಲಿನಾಥ ಹುಂಡೇಕಲ್‌, ಗ್ರಾಮದ ಮುಖಂಡ ಮಲ್ಲಪ್ಪ ಚೌಧರಿ ವಾಗ್ವಾದ ನಡೆಸಿದರು.

ರೈತ ಕೃಷಿ ಕಾರ್ಮಿಕ ಸಂಘಟನೆ ಅಧ್ಯಕ್ಷ ಚೌಡಪ್ಪ ಗಂಜಿ, ಶಿವುಕುಮಾರ ಆಂದೋಲಾ ಆಕ್ರೋಶ ವ್ಯಕ್ತಪಡಿಸಿದರು. ಹೀಗಾಗಿ ಅಧಿಕಾರಿಗಳು ಗ್ರಾಮದಿಂದ ಕಾಲ್ಕಿತ್ತಿದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.