100 ಕ್ವಿಂಟಾಲ್ ಅಕ್ಕಿ -ದಿನಸಿ ವಿತರಣೆ
Team Udayavani, Apr 15, 2020, 12:31 PM IST
ಜೇವರ್ಗಿ: ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಶಾಸಕ ಡಾ| ಅಜಯಸಿಂಗ್ ತಾಲೂಕಾಡಳಿತಕ್ಕೆ ಆಹಾರ ಸಾಮಗ್ರಿ ಹಸ್ತಾಂತರಿಸಿದರು.
ಜೇವರ್ಗಿ: ತಾಲೂಕಿನಲ್ಲಿರುವ ಆರು ಸಾವಿರ ನಿರಾಶ್ರಿತರಿಗೆ ಪ್ರತಿ ದಿನ ಎರಡು ಹೊತ್ತು ಆಹಾರ ವಿತರಿಸಲು ಧರ್ಮಸಿಂಗ್ ಫೌಂಡೇಶನ್ ವತಿಯಿಂದ 100 ಕ್ವಿಂಟಲ್ ಅಕ್ಕಿ, ತೊಗರಿ ಬೇಳೆ, ಅಡುಗೆ ಎಣ್ಣೆ ಹಾಗೂ ತರಕಾರಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ತಾಲೂಕಾಡಳಿತಕ್ಕೆ ಆಹಾರ ಸಾಮಗ್ರಿ, ಮಸಾಲೆ ಪದಾರ್ಥ, ತರಕಾರಿ ಹಸ್ತಾಂತರಿಸಿ ಅವರು ಮಾತನಾಡಿದರು. ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ 42 ಗ್ರಾ.ಪಂ ವ್ಯಾಪ್ತಿಯಲ್ಲಿರುವ ಬಡವರಿಗೆ, ನಿರಾಶ್ರಿತರು ಹಾಗೂ ಅಲೆಮಾರಿ ಜನಾಂಗದವರು, ಪಡಿತರ ಚೀಟಿ ಹೊಂದಿರದ ಜನ ಕೊರೊನಾ ವೈರಸ್‌ನಿಂದ ಸಾಕಷ್ಟು ತೊಂದರೆಗೀಡಾಗಿದ್ದಾರೆ. ಇವರಿಗೆ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಎರಡು ಹೊತ್ತಿನ ಊಟ ನೀಡುವ ಅವಕಾಶ ಲಭಿಸಿದೆ ಎಂದರು. ತಾಲೂಕಾಡಳಿತಕ್ಕೆ ಆಹಾರ ಧಾನ್ಯ ನೀಡಲಾಗಿದ್ದು, ಗ್ರಾ.ಪಂ ಕೇಂದ್ರ ಸ್ಥಾನದಲ್ಲಿ ಅಡುಗೆ ತಯಾರಿಸಿ ಪ್ರತಿ ದಿನ ಬೆಳಗ್ಗೆ ಹಾಗೂ ಸಾಯಂಕಾಲ ಆಹಾರದ ಪೊಟ್ಟಣ ವಿತರಿಸಲಾಗುವುದು.
ತಾಲೂಕಿನಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಮೇ 3ರ ವರೆಗೆ ಆಹಾರ ಪೂರೈಕೆ ಮಾಡಲಾಗುವುದು ಎಂದು ಹೇಳಿದರು. ಪ್ರತಿ ದಿನ 6 ಸಾವಿರ ಜನರಿಗೆ 12 ಸಾವಿರ ಆಹಾರ ಪೊಟ್ಟಣ ಸಿದ್ಧಪಡಿಸಿ ನಿರಾಶ್ರಿತ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಕಲಬುರ್ಗಿ ಉಪ ವಿಭಾಗಾಕಾರಿ ರಾಮಚಂದ್ರ ಗಡದೆ, ತಹಶೀಲ್ದಾರ್ ಸಿದರಾಯ ಭೋಸಗಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಅಶೋಕ ನಾಯಕ, ಕ್ಷೇತ್ರ ಶಿಕ್ಷಣಾಧಿ ಕಾರಿ ಶಾಂತಪ್ಪ ಹುಲಕಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿ ಕಾರಿ ಶಕುಂತಲಾ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ. ಪಾಟೀಲ, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಲಿಂಗರೆಡ್ಡಿ ಪಾಟೀಲ ಇಟಗಿ, ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುಕುಂಪಟೇಲ್ ಪೊಲೀಸ್ ಪಾಟೀಲ ಇಜೇರಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಧರ್ಮಸಿಂಗ್ ಫೌಂಡೇಶನ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.