ಜೇವರ್ಗಿ: ಕ್ವಾರಂಟೈನ್ ಕೇಂದ್ರಕ್ಕೆ ನರಿಬೋಳ ಭೇಟಿ
Team Udayavani, May 18, 2020, 10:51 AM IST
ಸಾಂದರ್ಭಿಕ ಚಿತ್ರ
ಜೇವರ್ಗಿ: ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ರವಿವಾರ ಭೇಟಿ ನೀಡಿ, ಪರಿಶೀಲಿಸಿದರು.
ಮುಂಬೈ, ಪುಣೆ ಸೇರಿದಂತೆ ಅನ್ಯ ರಾಜ್ಯಗಳಿಂದ ಜೇವರ್ಗಿಗೆ ಬಂದಿರುವವರ ಪೈಕಿ 143 ಜನರನ್ನು ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಇವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಶೌಚಾಲಯ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಹಾಗೂ ದಿನಕ್ಕೆ ಎರಡು ಬಾರಿ ಆರೋಗ್ಯ ತಪಾಸಣೆ ನಡೆಸಬೇಕೆಂದು ಸ್ಥಳದಲ್ಲಿದ್ದ ಸಿಬ್ಬಂದಿಗೆ ನರಿಬೋಳ ಸೂಚಿಸಿದರು.
ಇದೇ ವೇಳೆ ಮುಂಬೈದಿಂದ ಬಂದಿರುವ ತಾಲೂಕಿನ ರೇವನೂರ ಗ್ರಾಮದ ಏಳು ದಿನದ ಬಾಣಂತಿ ಜ್ಯೋತಿ ರಮೇಶ ಪವಾರ ಹಾಗೂ ಗೀತಾ ಅನೀಲ ಪವಾರ ಅವರನ್ನು ಭೇಟಿಯಾದ ನರಿಬೋಳ ಆರೋಗ್ಯ ವಿಚಾರಿಸಿ ಹೋಂ ಕ್ವಾರಂಟೈನ್ ಮಾಡುವಂತೆ ತಾಲೂಕಾಡಳಿತಕ್ಕೆ ಆಗ್ರಹಿಸಿದರು. ಇದಕ್ಕೆ ತಹಶೀಲ್ದಾರ್ ಸಿದರಾಯ ಭೋಸಗಿ ಪ್ರತಿಕ್ರಿಯಿಸಿದ್ದು, ಬಾಣಂತಿ ಹಾಗೂ ಒಂಭತ್ತು ತಿಂಗಳ ಗರ್ಭಿಣಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಗಮನಿಸಿ ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ನರಿಬೋಳ ಭೇಟಿ ಸಂದರ್ಭದಲ್ಲಿ ವಸತಿ ಶಾಲೆ ಪ್ರಾಂಶುಪಾಲ ನವೀದ್ ಅಂಜುಮ್ ಸಲ್ಮಾ, ಬಿಜೆಪಿ ಯುವ ಮುಖಂಡರಾದ ಶಿವಪ್ರಸಾದ ಅರಳಿ, ಅಕºರ್‌ಸಾಬ ಮುಲ್ಲಾ, ಶರಣು ವಡಗೇರಿ, ಬಸವರಾಜ ಡಿವಾಳಕರ್ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.