3436 ವಲಸೆ ಕಾರ್ಮಿಕರಿಗೆ ಕ್ವಾರಂಟೈನ್
Team Udayavani, May 23, 2020, 10:52 AM IST
ಸಾಂದರ್ಭಿಕ ಚಿತ್ರ
ಜೇವರ್ಗಿ: ಶಾಸಕ ಡಾ| ಅಜಯಸಿಂಗ್ ತಾಲೂಕಿನ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿಗೆ ಕಳೆದ 15 ದಿನಗಳ ಅವಧಿ ಯಲ್ಲಿ 1701 ಜನ ವಲಸೆ ಕಾರ್ಮಿಕರು ಮಹಾರಾಷ್ಟ್ರ ಹಾಗೂ ಆಂಧ್ರ ಪ್ರದೇಶದಿಂದ ವಲಸೆ ಬಂದಿದ್ದಾರೆ.
ಯಡ್ರಾಮಿ ತಾಲೂಕಿಗೆ 1735 ವಲಸೆ ಕಾರ್ಮಿಕರು ಬಂದಿದ್ದು, ಒಟ್ಟು 3436 ವಲಸೆ ಕಾರ್ಮಿಕರಿಗೆ ವಿವಿಧ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು. ಪ್ರತಿ ದಿನ 250-300 ಜನ ವಲಸೆ ಕಾರ್ಮಿಕರ ಗಂಟಲು ದ್ರವ ಸಂಗ್ರಹಿಸಿ ಕೋವಿಡ್ ನಿಗದಿತ ಆಸ್ಪತ್ರೆ ಜಿಮ್ಸ್ ಗೆ ಕಳುಹಿಸಲಾಗುತ್ತಿದೆ. ಮೂರು ದಿನಗಳ ನಂತರ ವರದಿ ಅಧಿಕಾರಿಗಳ ಕೈ ಸೇರಲಿದೆ. ಇಲ್ಲಿಯವರೆಗೆ 500 ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಗೆ ಒಳಪಟ್ಟಿದ್ದ ಐವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದರು. ಕೋವಿಡ್ ಸೋಂಕು ಹರಡು ವುದನ್ನು ತಡೆಗಟ್ಟಲು ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ನಿಯಮಿತ ವಾಗಿ ಅಧಿಕಾರಿಗಳು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕ್ವಾರಂಟೈನ್‌ದಲ್ಲಿರುವ ವಲಸೆ ಕಾರ್ಮಿಕರಿಗೆ ಊಟ, ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಪರಿಶೀಲನೆ: ಪಟ್ಟಣದ ಸಾರಿಗೆ ಘಟಕದ ಬಳಿಯಿರುವ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ನಿಲಯ, ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಂಕಲಗಾ ಗ್ರಾಮದ ವಸತಿ ನಿಲಯಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಸಿದರಾಯ ಭೋಸಗಿ, ಟಿಎಚ್‌ಒ ಡಾ| ಸಿದ್ಧು ಪಾಟೀಲ, ಅಶೋಕ ನಾಯಕ, ಪಿಎಸ್‌ಐ ಮಂಜುನಾಥ ಹೂಗಾರ, ರುಕುಂ ಪಟೇಲ ಇಜೇರಿ, ಕಾಶಿರಾಯಗೌಡ ಯಲಗೋಡ ಇನ್ನಿತರದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.