ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
Team Udayavani, Apr 19, 2022, 1:24 PM IST
ಸೇಡಂ: ದೇಶದಲ್ಲಿ ಧರ್ಮಾಂಧತೆ ಬಿತ್ತಿ, ಜನರ ಕಣ್ಣಿಗೆ ಮಣ್ಣೆರಚುವ ಮೂಲಕ ಬಿಜೆಪಿ ಸರ್ಕಾರ ಲೂಟಿ ತಂತ್ರ ಅನುಸರಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ವಾಗ್ಧಾಳಿ ನಡೆಸಿದರು.
ಪಟ್ಟಣದಲ್ಲಿ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಪಾದಯಾತ್ರೆ ಉದ್ದೇಶಿಸಿ ಅವರು ಮಾತನಾಡಿದರು.
ಜನರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿರುವ ಬಿಜೆಪಿ ಸರ್ಕಾರ ಹಿಜಾಬ್, ಹಲಾಲ್ ವಿಷಯಗಳನ್ನು ಮುನ್ನೆಲೆಗೆ ತಂದು ಬೆಲೆ ಏರಿಕೆ ಮಾಡುವ ಮೂಲಕ ದೇಶವನ್ನು ಲೂಟಿ ಮಾಡುತ್ತಿದೆ. ದಿನೇದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಎಲ್‌ಪಿಜಿ. ಗ್ಯಾಸ್ ಬೆಲೆ ಜಾಸ್ತಿ ಮಾಡಲಾಗಿದೆ. ಹೊಗೆ ಮುಕ್ತ ಭಾರತದ ಹೆಸರಲ್ಲಿ ಗ್ಯಾಸ್ ನೀಡಿ, ಈಗ ಮತ್ತೆ ಹೊಗೆ ಒಲೆಯತ್ತ ಬಡ ಜನರು ವಾಲುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಮಿಕರಿಗೆ ನೀಡಲಾಗುತ್ತಿರುವ ವೇತನದಲ್ಲಿ ಯಾವುದೇ ರೀತಿಯ ಏರಿಕೆಯಾಗಿಲ್ಲ. ಆದರೆ ಪ್ರತಿಯೊಂದು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಹೀಗಾದರೆ ಬದುಕು ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಸಬಕಾ ಸಾಥ್ ಸಬಕಾ ವಿಕಾಸ್ ಎಂಬ ಧ್ಯೇಯವಾಕ್ಯದೊಂದಿಗೆ ಜನರ ಮನಸ್ಸಿಗೆ ಮಂಕು ಬೂದಿ ಎರಚಿಸಿದ ಬಿಜೆಪಿ ಸರ್ಕಾರ ಈಗ ಸಬಕಾ ಸಾಥ್ ಸಬಕಾ ವಿನಾಶ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಎಕ್ಬಾಲಖಾನ್, ಕಾರ್ಯಾಧ್ಯಕ್ಷ ಶಿವರಾಮರೆಡ್ಡಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೀರಬಟ್ಟಿ, ಶಂಕರ ಕಟ್ಟಿ ಸಂಗಾವಿ, ಜೆಡಿಎಸ್ ಮಾಜಿ ಅಧ್ಯಕ್ಷ ಜಗನ್ನಾಥರೆಡ್ಡಿ ಗೊಟೂರ, ಶಿವಪುತ್ರಪ್ಪ ಮೋಘಾ, ವಿಜಯಕುಮಾರ ಕುಲಕರ್ಣಿ ಮಾತನಾಡಿದರು.
ಆರ್.ಆರ್. ಪಾಟೀಲ, ಮಲ್ಲಿಕಾರ್ಜುನ ಮುತ್ಯಾಲ, ಹಸನಪ್ಪ ಮೇತ್ರೆ, ಚಾಂದಪಾಶಾ, ಯುವ ಘಟಕ ಅಧ್ಯಕ್ಷ ಪ್ರವೀಣ ಕೆರಿ, ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾವತಿ ಗೊಬ್ಬೂರ್, ಭೀಮಶಪ್ಪ ಬಳ್ಳಾರಂ, ಹಮೀದ್, ವಿಜಯಕುಮಾರ ಕುಲಕರ್ಣಿ, ಯಶ್ವಂತ ಹಲಚೇರಾ, ಸುರೇಶ ಬಂಡೆ, ಸಿದ್ಧಯ್ಯಸ್ವಾಮಿ, ಖಾಸಿಂ ಅಲಿ ಯಾನಾಗುಂದಿ, ಮಹಾದೇವಿ ಹಲಕರ್ಟಿ, ಖನೀಜ್ ಫಾತಿಮಾ, ರೆಹಮತ್ ಬೇಗಂ, ರಾಜಶ್ರೀ ಕೊರವಿ, ಬಿಸ್ಮಿಲ್ಲಾ ಬೇಗಂ, ಹಣಮಂತರೆಡ್ಡಿ ಚಂದಾಪುರ ಹಾಗೂ ಇತರರು ಇದ್ದರು.
ಇದಕ್ಕೂ ಮುನ್ನ ಚಿಂಚೋಳಿ ರಸ್ತೆಯ ಜೆಡಿಎಸ್ ಕಚೇರಿಯಿಂದ ಕಲಬುರಗಿ ಕ್ರಾಸ್, ಬಸ್ ನಿಲ್ದಾಣ, ಚೌರಸ್ತಾ ಮಾರ್ಗವಾಗಿ ಸಹಾಯಕ ಆಯುಕ್ತರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು. ನಂತರ ಸಹಾಯಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.