ಜಂಟಿ ಸಮೀಕ್ಷೆ ವಿಫಲ; ಪ್ರತಿಭಟನಾಕಾರರ ಆಕ್ರೋಶ


Team Udayavani, Dec 26, 2021, 11:21 AM IST

7protest

ಯಡ್ರಾಮಿ: ತಾಲೂಕಿನಲ್ಲಾದ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಸತತ ಐದು ದಿನದಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ಥಳಕ್ಕೆ ತಹಶೀಲ್ದಾರ್‌, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಭೇಟಿ ನೀಡಿ, ರೈತರ ಸಮಸ್ಯೆ ಆಲಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ಮಾತನಾಡಿ, ಬೆಳೆ ನಷ್ಟವಾದ ಕುರಿತು ಮಾಡಿದ ಜಂಟಿ ಸಮೀಕ್ಷೆ ಸಂಪೂರ್ಣ ವಿಫಲವಾಗಿದೆ. ತಾಲೂಕಿನ ಕೃಷಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯ ಜಂಟಿ ಸಮೀಕ್ಷೆಯನ್ನು ಮೇಲಧಿಕಾರಿಗಳಿಗೆ ನೀಡದೇ ಇರುವುದು ದೊಡ್ಡ ಪ್ರಮಾದ. ಈ ಕುರಿತು ಖುದ್ದಾಗಿ ಸರ್ಕಾರದ ಕಂದಾಯ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು, ತಾಲೂಕಿನ ರೈತರು ಬೆಳೆ ನಷ್ಟ ಪರಿಹಾರದಿಂದ ವಂಚಿತರಾಗದಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪ್ರತಿಭಟನೆ ನಿಲ್ಲಿಸಿ, ಮನೆಗೆ ತೆರಳಿ ಎಂದು ವಿನಂತಿ ಮಾಡಿದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಮಾತನಾಡಿ, ಬೆಳೆ ನಷ್ಟ ಪರಿಹಾರದ ಸಮೀಕ್ಷೆ ವರದಿ ಕಳುಹಿಸುವಲ್ಲಿ ತಾಲೂಕಾಡಳಿತ ವಿಳಂಬ ಮಾಡಿದ್ದೆ ಸಮಸ್ಯೆಗೆ ಕಾರಣವಾಗಿದೆ. ನಾನು ಈ ಕುರಿತು ತಾಲೂಕಾಡಳಿತಕ್ಕೆ ಆರು ಜ್ಞಾಪನಾ ಪತ್ರಗಳನ್ನು ಬರೆದಿದ್ದೇನೆ. ಆದರೆ ಪ್ರಯೋಜನವಾಗಿಲ್ಲ. ಆದರೂ ಈ ಸಮಸ್ಯೆಯನ್ನು ನಾವು ಗಂಭೀರವಾಗಿ ಪರಿಗಣಿಸಿ ಡಿ.24ರ ಮಧ್ಯಾಹ್ನ ಸರ್ಕಾರಕ್ಕೆ ಮಾಹಿತಿ ಕಳುಹಿಸಿಯೇ ತಮ್ಮಲ್ಲಿ ಬಂದಿದ್ದೇನೆ ಎಂದು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿದರು.

ಇದು ಸರ್ಕಾರದ ಹಂತದಲ್ಲಿ ಚರ್ಚೆ ಆಗುವಂತದ್ದು. ಆದರೆ ಈ ಸಮಸ್ಯೆಗೆ ಕಾರಣರಾದವರ ಬಗ್ಗೆ ತನಿಖೆ ಆಗಲಿದೆ. ನಂತರ ಸಂಬಂಧಪಟ್ಟ ಮೇಲಧಿಕಾರಿಗಳು ಸೂಕ್ತ ಕ್ರಮ ಜರುಗಿಸಬಹುದು ಎಂದರು.

ತಾಲೂಕಿನ ಕೃಷಿ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ತಾವು ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಭರವಸೆ ನೀಡಿದರು.

ಒಂದು ವಾರದಲ್ಲಿ ಲಾಗಿನ್‌ ನೀಡಿ, ರೈತರ ಬೆಳೆ ನಷ್ಟ ಪರಿಹಾರದ ಮಾಹಿತಿ ಸಲ್ಲಿಕೆಯಾಗುವಂತೆ ಮಾಡಿ, ಕೂಡಲೇ ಖಾತೆಗೆ ಪರಿಹಾರ ಜಮೆ ಮಾಡಬೇಕು. ಈ ಕುರಿತು ಸರ್ಕಾರ, ಕ್ಷೇತ್ರದ ಶಾಸಕರು ಮುತುವರ್ಜಿ ವಹಿಸದಿದ್ದರೆ ಈ ಭಾಗದ ಮಠಾಧಿಧೀಶರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ. -ಡಾ| ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಮಡಿವಾಳೇಶ್ವರ ಮಠ, ಕಡಕೋಳ

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.