ಕಲಬುರಗಿಗೆ ಮೃತದೇಹ ಕಳುಹಿಸಲು ಸಂಸದರ ನೆರವು
Team Udayavani, May 15, 2020, 10:37 AM IST
ಕಲಬುರಗಿ: ಬೆಂಗಳೂರಿನಲ್ಲಿ ಮೃತಪಟ್ಟ ಮಹಿಳೆ ಶವ ಕಲಬುರಗಿಗೆ ಕಳುಹಿಸಲು ನೆರವು ನೀಡಿದ ಸಂಸದ ಡಾ| ಉಮೇಶ ಜಾಧವ.
ಕಲಬುರಗಿ: ಮೃತಪಟ್ಟ ಕೂಲಿ ಕಾರ್ಮಿಕ ಮಹಿಳೆ ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ ಸಾಗಿಸಲು ಹಾಗೂ ಮೃತರ ಬಂಧುಗಳ ಪ್ರಯಾಣಕ್ಕೆ ಪೊಲೀಸ್ ಇಲಾಖೆ ಅನುಮತಿ ಕೊಡಿಸುವ ಮೂಲಕ ಸಂಸದ ಡಾ| ಉಮೇಶ ಜಾಧವ ನೆರವು ನೀಡಿದ್ದಾರೆ.
ಬೆಂಗಳೂರಿನ ಅಮೃತಹಳ್ಳಿಯಲ್ಲಿ ವಾಸವಾಗಿದ್ದ 56 ವರ್ಷದ ದ್ರೌಪದಿ ಅವರು ಹೃದಯಾಘಾತದಿಂದ ಅಸುನೀಗಿದರು. ಇಲ್ಲಿಯ ಬಸವನಗರಕ್ಕೆ ಮೃತದೇಹ ಸಾಗಿಸಲು ಬೆಳಗ್ಗೆಯಿಂದ ಅನುಮತಿಗಾಗಿ ಅವರ ಸಂಬಂಧಿಕರು ಕಸರತ್ತು ನಡೆಸಿದ್ದರು. ಈ ಸಂದರ್ಭದಲ್ಲಿ ಸಂಸದ ಜಾಧವ ಅವರಿಗೆ ವಿಷಯ ತಿಳಿದು ಸಂಜೆ 6:00ಕ್ಕೆ ಸ್ಥಳಕ್ಕೆ ತೆರಳಿ ಬೆಂಗಳೂರಿನ ಈಶಾನ್ಯ ವಲಯ ಡೆಪ್ಯೂಟಿ ಪೊಲೀಸ್ ಕಮೀಷನರ್ ಅವರಿಂದ ಮೃತದೇಹ ಸಾಗಿಸಲು ಅಂಬ್ಯುಲೆನ್ಸ್ ನಲ್ಲಿ ಸಂಬಂಧಿಕರಿಗೆ ಪ್ರಯಾಣಿಸಲು ಅನುಮತಿ ಕೊಡಿಸಿದರು.
ಅಂಬ್ಯುಲೆನ್ಸ್ ಬಾಡಿಗೆ ಪಾವತಿ: ಕಾರ್ಮಿಕರ ಪರಿಸ್ಥಿತಿ ಅರಿತ ಸಂಸದ ಉಮೇಶ ಜಾಧವ ಅಂಬ್ಯುಲೆನ್ಸ್ ಬಾಡಿಗೆ ವೆಚ್ಚ ಭರಿಸಿ ಮೃತದೇಹ ಹಾಗೂ ಸಂಬಂಧಿಕರನ್ನು ಕಲಬುರಗಿ ಕಳುಹಿಸಲು ನೆರವಾಗಿದ್ದಾರೆ. ಶಾಸಕ ಬಿ.ಜಿ. ಪಾಟೀಲ, ಮಾಜಿ ಸಚಿವ ಮಾಲೀಕಯ್ಯ ವಿ. ಗುತ್ತೇದಾರ ಮುಂತಾದವರು ಸಂಸದರ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.