ಸಾವಿರ ಸಸಿ ನೆಡುವ ಕಾರ್ಯಕ್ಕೆ ಚಾಲನೆ
Team Udayavani, Jun 6, 2020, 10:51 AM IST
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಸಮೀಪದ ಸಿಯುಕೆ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಚಿವ ಕೆ.ಎಸ್.ಈಶ್ವರಪ್ಪ ಸಸಿ ನೆಟ್ಟರು.
ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಳಂದ ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಒಂದು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದರು.
ಕಳೆದ ಎರಡ್ಮೂರು ವರ್ಷದಲ್ಲಿ ಅರಣ್ಯ ಇಲಾಖೆಯಿಂದ ಕ್ಯಾಂಪಸ್ ಆವರಣದಲ್ಲಿ ನೆಡಲಾದ ಸಸಿಗಳ ಪೈಕಿ ಶೇ.90ರಷ್ಟು ಸಸಿಗಳು ನೆಟ್ಟು ಪೋಷಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಸಚಿವರು, ಸಸಿ ನೆಡುವುದು ಪುಣ್ಯದ ಕೆಲಸವಾಗಿದೆ ಎಂದರು. ಸಿಯುಕೆ ಆವರಣದಲ್ಲಿ ಒಂದು ಸಾವಿರ ಸೇರಿದಂತೆ ಜಿಲ್ಲಾದ್ಯಂತ ಒಟ್ಟಾರೆ ಎರಡು ಸಾವಿರ ಸಸಿಗಳನ್ನು ಸಾಮಾಜಿಕ ಅರಣ್ಯ ವಿಭಾಗದಿಂದ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಗುಂಡಿ ಕೊರೆದು ನೆಡಲಾಯಿತು ಎಂದರು.
6.67 ಲಕ್ಷ ಸಸಿ ನಾಟಿ: ಜಿಪಂ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಚವ್ಹಾಣ ಮಾತನಾಡಿ, ಕಳೆದ 2019-20ನೇ ಸಾಲಿನಲ್ಲಿ ಪ್ರತಿ ತಾಲೂಕಿನಲ್ಲಿ 95 ಸಾವಿರ ಸಸಿ ನೆಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 6.67 ಲಕ್ಷ ಸಸಿ ಬೆಳೆಸಲಾಗಿದೆ. ಈ ವರ್ಷ ದ್ವಿಗುಣ ಸಸಿಗಳನ್ನು ಬೆಳೆಸುವ ಗುರಿ ಹೊಂದಲಾಗಿದೆ ಎಂದರು. ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಆಯುಕ್ತ ಅನಿರುದ್ಧ್ ಶ್ರವಣ್, ಸಿಇಒ ಡಾ.ಪಿ.ರಾಜಾ ಹಾಗೂ ಜನಪ್ರತಿನಿಧಿ, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.