ಸುರಿಯಿತು ಆಲಿಕಲ್ಲು ಮಳೆ-ತಂಪಾದ ಇಳೆ
43ಡಿಗ್ರಿ ಸೆಲ್ಸಿಯಸ್ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆ
Team Udayavani, May 9, 2020, 10:37 AM IST
ನಂದೂರ ಕೈಗಾರಿಕೆ ಪ್ರದೇಶದಲ್ಲಿ ಮಳೆಗೆ ವೇರ್‌ಹೌಸ್ ಮೇಲ್ಛಾವಣಿ ಕುಸಿದು ಬಿದ್ದಿದೆ.
ಕಲಬುರಗಿ: ಉರಿ ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಸೂರ್ಯ ನಗರಿಗೆ ಶುಕ್ರವಾರ ಭಾರೀ ಗಾಳಿ ಸಹಿತ ಸುರಿದ ಮಳೆ ತಂಪೆರೆಯಿತು. ಮಹಾನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗಿದ್ದರಿಂದ ಬಿಸಿಲಿನ ಧಗೆಗೆ ಬೇಸತ್ತಿದ್ದ ಜನರು ನಿರಾಳರಾದರು.
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿತ್ತು. ಪ್ರತಿ ದಿನ 42, 43 ಡಿಗ್ರಿ ಸೆಲ್ಸಿಯಸ್ ಬಿಸಿಲಿಗೆ ಜನತೆ ಕಂಗೆಟ್ಟು ಹೋಗಿದ್ದರು. ಅದರಲ್ಲೂ ಕೊರೊನಾ ಸೋಂಕಿನ ಪರಿಣಾಮ ಲಾಕ್‌ಡೌನ್ ಜಾರಿ ಇರುವುದರಿಂದ ಮನೆಗಳಲ್ಲೇ ಸೇರಿಕೊಂಡಿರುವ ಜನರು ಬಿಸಿಲಿನ ಆರ್ಭಟಕ್ಕೆ ಕಂಗಾಲಾಗಿ ಹೋಗಿದ್ದರು.
ಶುಕ್ರವಾರವೂ ಜಿಲ್ಲೆಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲಾಗಿತ್ತು. ಕನಿಷ್ಠ ಉಷ್ಣಾಂಶ 28.1 ಡಿಗ್ರಿ ಸೆಲ್ಸಿಯಸ್ ಇದ್ದರೆ, ಗರಿಷ್ಠ ಉಷ್ಣಾಂಶ 43.1 ಡಿಗ್ರಿ ಸೆಲ್ಸಿಯಸ್‌ನಷ್ಟು ಇತ್ತು. ಸೆಖೆಯಿಂದ ಜನತೆ ಬಸವಳಿದು ಹೋಗಿದ್ದರು. ಸಂಜೆ 5ಗಂಟೆ ಆಗುತ್ತಿದ್ದಂತೆ ಭಾರಿ ಗಾಳಿ ಬೀಸತೊಡಗಿತ್ತು. ಗಾಳಿಯೊಂದಿಗೆ ಸತತ ಒಂದು ಗಂಟೆ ಸಸತವಾಗಿ ಕಾಲ ಜೋರು ಮಳೆ ಸುರಿಯಿತು. ಕೆಲವೆಡೆ ಆಲ್ಲಿಕಲ್ಲು ಸಹಿತ ಮಳೆಯೂ ಆಯಿತು.
ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನರು ಮಳೆಯಿಂದ ಸಂತಸಗೊಂಡರು. ಮಳೆಯಲ್ಲೂ ವಾಹನಗಳು ಸಹಜವಾಗಿ ಸಂಚರಿಸಿದವು. ಕೆಲವರು ಮಳೆಯಲ್ಲಿ ನೆನೆದು ಆನಂದಿಸಿದರು. ಮಳೆ ಮತ್ತು ಗಾಳಿಗೆ ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಲಾಗಿದ್ದ ಬ್ಯಾರಿಕೇಡ್‌ಗಳು ಉರುಳಿ ಬಿದ್ದವು. ಹಳೆ ಜೇವರ್ಗಿ ರಸ್ತೆಯ ಕೆಳ ಸೇತುವೆ ಸೇರಿದಂತೆ ಕೆಲ ಸೇತುವೆಗಳಲ್ಲಿ ನೀರು ತುಂಬಿಕೊಂಡು ಕೆಲ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುವಿಸುವಂತೆ ಆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್ ಅಲಿ ಆಸ್ತಿ ಎಷ್ಟು?
Team India: ಹೊಸ ಕೋಚ್ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್ ನಲ್ಲಿ ಪೀಟರ್ಸನ್
Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!
ಮಾದರಿ ಸಂಘವಾಗಿ ಗುರುತಿಸಿಕೊಂಡ ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.