ಬಸ್ ಶುರು: ಸಿಬಂದಿಗೆ ಲಸಿಕೆ ಮಾನದಂಡ
ಪಕ್ಕದ ಮಹಾರಾಷ್ಟ್ರ ಹಾಗೂ ತೆಲಂಗಾಣಕ್ಕೂ ಬಸ್‌ಗಳು ಸಂಚರಿಸಲಿವೆ.
Team Udayavani, Jun 21, 2021, 7:29 PM IST
ಕಲಬುರಗಿ: ಕೊರೊನಾ ಸೋಂಕಿನ ಎರಡನೇ ಅಲೆ ತಗ್ಗಿದ್ದರಿಂದ ಸರ್ಕಾರ ಲಾಕ್‌ಡೌನ್ ಮತ್ತುಷ್ಟು ಸಡಿಲಿಕೆ ಮಾಡಿದ್ದರಿಂದ ಸೋಮವಾರದಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗಿಳಿಯಲಿವೆ. ಕೊರೊನಾದಿಂದ ರಕ್ಷಣೆಗಾಗಿ ಕರ್ತವ್ಯ ಹಾಜರಾಗುವ ನೌಕರರಿಗೆ ಲಸಿಕೆ ಮಾನದಂಡ ಅನುಸರಿಸಲು ಮುಂದಾಗಿದ್ದು, ಎರಡೂ ಡೋಸ್ ಲಸಿಕೆ ಪಡೆದವರಿಗೆ ಮೊದಲ ಆದ್ಯತೆ ಮೇಲೆ ಸಾರಿಗೆ ಸಂಸ್ಥೆಯು ನಿಯೋಜನೆ ಮಾಡುತ್ತಿದೆ.
ಲಾಕ್‌ಡೌನ್ ಕಾರಣ ಸುಮಾರು ಎರಡು ತಿಂಗಳಿಂದ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಇದೀಗ ಸೋಂಕಿನ ಪಾಸಿಟಿವ್ ಪ್ರಮಾಣ ಕಡಿಮೆಯಾಗಿದ್ದರಿಂದ ರಾಜ್ಯ ಸರ್ಕಾರ ಹಂತಹಂತವಾಗಿ ಅನ್‌ಲಾಕ್ ಮಾಡುತ್ತಿದೆ. ಎರಡನೇ ಹಂತದ ಅನ್‌ಲಾಕ್‌ನಲ್ಲಿ ಸಾರಿಗೆ ಬಸ್ ಗಳ ಕಾರ್ಯಾಚರಣೆಗೂ ಅವಕಾಶ ನೀಡಲಾಗಿದೆ. ಒಂದು ಬಸ್‌ನಲ್ಲಿ ಶೇ.50ರಷ್ಟು ಮಾತ್ರ ಭರ್ತಿ ಮಾಡಲಾಗುತ್ತದೆ.
ಸೋಮವಾರ ಮೊದಲ ದಿನವೇ ಶೇ.30ರಿಂದ 40ರಷ್ಟು ಬಸ್‌ಗಳನ್ನು ಓಡಿಸಲು ನಿರ್ಧರಿಸಿದ್ದು, ಈಶಾನ್ಯ ಸಾರಿಗೆ ವ್ಯಾಪ್ತಿಯ ಬಳ್ಳಾರಿ, ಹೊಸಪೇಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಒಟ್ಟು ಒಂಭತ್ತು ವಿಭಾಗಗಳಿಂದ ಮೊದಲ ಹಂತದಲ್ಲಿ ಸುಮಾರು ಎರಡು ಸಾವಿರ ಬಸ್‌ಗಳ ಸಂಚಾರ ಆರಂಭವಾಗಲಿದೆ. ಅನ್‌ಲಾಕ್ ಮಾಡಿದ ಜಿಲ್ಲೆಗಳು ಮತ್ತು ಕೊರೊನಾ ಪಾಸಿಟಿವ್ ಪ್ರಮಾಣ ಹೆಚ್ಚಿರುವ ಅನ್‌ಲಾಕ್ ಎರಡನೇ ಹಂತಕ್ಕೆ ತೆರೆದುಕೊಳ್ಳದ ಜಿಲ್ಲೆಗಳು ಹಾಗೂ ಪಕ್ಕದ ಮಹಾರಾಷ್ಟ್ರ ಹಾಗೂ ತೆಲಂಗಾಣಕ್ಕೂ ಬಸ್‌ಗಳು ಸಂಚರಿಸಲಿವೆ.
ನೆಗೆವಿಟ್ ವರದಿ ಕಡ್ಡಾಯ: ಈಗಾಗಲೇ ಎಲ್ಲ ಚಾಲಕರು, ನಿರ್ವಾಹಕರು ಮತ್ತು ಸಿಬ್ಬಂದಿಗೆ ಕರ್ತ ವ್ಯಕ್ಕೆ ಹಾಜರಾಗಲು ಡಿಪೋಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮುಖ್ಯವಾಗಿ ಬಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕ ಮತ್ತು ನಿರ್ವಾಹಕರಿಗೆ ಕೊರೊನಾ ಪರೀಕ್ಷೆ ಆರ್‌ಟಿ-ಪಿಸಿಆರ್ ನೆಗೆಟಿವ್ ಕಡ್ಡಾಯವಾಗಿ ಮಾಡಲಾಗಿದೆ. ಅಲ್ಲದೇ, ಕೊರೊನಾ ಲಸಿಕೆಯನ್ನು ಎರಡು ಡೋಸ್ ಪಡೆದ ಸಿಬ್ಬಂದಿಯನ್ಮು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿದೆ. ಅಗತ್ಯವಾದರೆ ಮೊದಲ ಲಸಿಕೆ ಪಡೆದವರನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಭರದ ಸಿದ್ಧತೆ: ಸಾರಿಗೆ ಬಸ್‌ಗಳನ್ನು ರಸ್ತೆಗಿಳಿಸುವ ಸಂಬಂಧ ನಗರದ ನಾಲ್ಕು ಬಸ್ ಡಿಪೋಗಳಲ್ಲಿ ಸಿಬ್ಬಂದಿ ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಬಸ್ ಗಳ ಸ್ವಚ್ಛತೆ, ಅವುಗಳ ಸ್ಥಿತಿಗತಿ ತಪಾಸಣೆ ಸೇರಿ ಮತ್ತಿತರ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ಅಲ್ಲದೇ, ಬಸ್ ಡಿಪೋ ಮತ್ತು ಬಸ್ ನಿಲ್ದಾಣಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು. ಜತೆಗೆ ಬಸ್‌ಗಳ ಒಳಗೆ ಮತ್ತು ಹೊರಗೂ ಸ್ಯಾನಿಟೈಸ್ ಮಾಡಿ ಸಜ್ಜುಗೊಳಿಸಿದರು.
ಜಿಲ್ಲೆಯಲ್ಲಿ ಎರಡೂ ವಿಭಾಗಗಳಿಂದಲೂ ಸುಮಾರು 300ಕ್ಕೂ ಹೆಚ್ಚಿನ ಬಸ್‌ಗಳು ಸೋಮ ವಾರದಿಂದ ರಸ್ತೆಗಿಳಿಯುವ ಸಾಧ್ಯತೆ ಇದೆ. ಕಲ ಬುರಗಿ ವಿಭಾಗ ಒಂದರಲ್ಲಿ ಅಂದಾಜು 200 ಬಸ್ ಗಳು ಹಾಗೂ ವಿಭಾಗ ಎರಡರಿಂದ 100 ಬಸ್ ಗಳನ್ನು ಓಡಿಸಲು ಸಜ್ಜುಗೊಳಿಸಲಾಗಿದೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯಾದ್ಯಂತ ಈಶಾನ್ಯ ಸಾರಿಗೆ ಬಸ್ ಸಂಚಾರ ನಡೆಯಲಿದೆ. ಬಸ್‌ಗಳ ಸಂಚಾರ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಾಲಕಾಲಕ್ಕೆ ಜಾರಿಯಾಗುವ ಆದೇಶಗಳು ಮತ್ತು ಪಕ್ಕದ ಮಹಾರಾಷ್ಟ್ರ, ತೆಲಂಗಾಣಕ್ಕೂ ಆ ರಾಜ್ಯಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ.
ಕೊಟ್ರಪ್ಪ, ಮುಖ್ಯ ಸಂಚಾರ ವ್ಯವಸ್ಥಾಪಕ,
ಎನ್‌ಇಕೆಆರ್‌ಟಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.