ಸ್ವಚ್ಛ ಕಲಬುರಗಿಗೆ ಬೃಹತ್ ಕಾಲ್ನಡಿಗೆ ಜಾಥಾ
ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
Team Udayavani, Feb 11, 2021, 4:18 PM IST
ಕಲಬುರಗಿ: ಮಹಾ ನಗರದ ಸ್ವತ್ಛತೆಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಹಾನಗರ ಪಾಲಿಕೆಗೆ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸಾಥ್ ನೀಡಿದ್ದು, ಬುಧವಾರ ಅಧಿಕಾರಿಗಳು, ಎನ್‌ಎಸ್ ಎಸ್ ವಿದ್ಯಾರ್ಥಿಗಳು, ಪೌರ ಕಾರ್ಮಿಕರು ಸೇರಿ ಎರಡು ಸಾವಿರಕ್ಕೂ ಹೆಚ್ಚು ಜನರು ಬೃಹತ್ ಜಾಥಾ ನಡೆಸಿದರು.
ಇಲ್ಲಿನ ಜಗತ್ ವೃತ್ತದಲ್ಲಿ ಬೆಳಗ್ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶದ ವಿವಿಧ ಕಾಲೇಜುಗಳ 1,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 500ಕ್ಕೂ ಅಧಿಕ ಪೌರ ಕಾರ್ಮಿಕರು ಸಮಾವೇಶಗೊಂಡು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ಮಾಡಿದರು.
“ನನ್ನ ಕಸ, ನನ್ನ ಹೊಣೆ’, “ಸ್ವತ್ಛ ಕಲಬುರಗಿ, ಸ್ವಸ್ಥ ಕಲಬುರಗಿ’, “ಕಲಬುರಗಿ ಮಹಾಜನತೆ ಸ್ವಚ್ಛ ಕಲಬುರಗಿಗೆ ಬೃಹತ್ ಕಾಲ್ನಡಿಗೆ ಜಾಥಾತೆಗೆ ಆದ್ಯತೆ ಕೊಡಿ’, “ಬಯಲು ಶೌಚ ನಿಲ್ಲಿಸಿ’, “ಸ್ವಚ್ಛ ಕಲಬುರಗಿಗೆ ಬೃಹತ್ ಕಾಲ್ನಡಿಗೆ ಜಾಥಾತೆ ನಮ್ಮೆಲ್ಲರ ಹೊಣೆ’… ಹೀಗೆ ವಿವಿಧ ಘೋಷಣೆಗಳನ್ನು ಕೂಗುತ್ತಾ ಹಾಗೂ ಭಿತ್ತಿ ಫಲಕಗಳನ್ನು ಪ್ರದರ್ಶಿಸುತ್ತಾ ಹಸಿ ಕಸ, ಒಣ ಕಸ ವಿಂಗಡಣೆ, ಪ್ಲಾಸ್ಟಿಕ್ ಬಳಕೆ ಕಡಿವಾಣ ಮತ್ತು ಸ್ವತ್ಛ ಕಲಬುರಗಿ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಿದರು.
ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ, ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ| ದಯಾನಂದ ಅಗಸರ, ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಪೊಲೀಸ್ ತರಬೇತಿ ಮಹಾ ವಿದ್ಯಾಲಯದ ಪ್ರಾಂಶುಪಾಲ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಪ್ರೊ| ರಮೇಶ ಲಂಡನಕರ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.
ಜಾಥಾ ಉದ್ದೇಶಿಸಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ ಮಾತನಾಡಿ, ಇತ್ತೀಚೆಯ ದಿನಗಳಲ್ಲಿ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಜತೆಗೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕಸದ ಸಮಸ್ಯೆ ಬಗೆಹರಿಸಲು ನಿರಂತರ ಪ್ರಯತ್ನ ಮಾಡುತ್ತಿದೆ. ನಗರದ ಸೌಂದರೀಕರಣ ಕೆಲಸವೂ ಸಾಗಿದೆ. ಜಿಲ್ಲೆ ಸ್ವತ್ಛವಾಗಿ ಇರಬೇಕಾದರೆ ಮತ್ತು ಸ್ವತ್ಛತೆಯ ರ್‍ಯಾಂಕಿಂಗ್‌ನಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ದೊರೆಯಬೇಕಾದರೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಎನ್ ಎಸ್‌ಎಸ್ ಸ್ವಯಂ ಸೇವಕರ ಸಹಕಾರ ಅಗತ್ಯ ಎಂದು ಹೇಳಿದರು.
ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ ಮಾತನಾಡಿ, ಜನಜಾಗೃತಿ ಅಭಿಯಾನಕ್ಕೆ ವಿಶ್ವವಿದ್ಯಾಲಯ ಸಹಕಾರ ನೀಡಲಿದೆ. ವಿವಿ ವಿದ್ಯಾರ್ಥಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಕಳೆದ ವರ್ಷ ಸ್ವತ್ಛತಾ ರ್‍ಯಾಂಕಿಂಗ್‌ನಲ್ಲಿ ಮಹಾನಗರ ಪಾಲಿಕೆ 321ನೇ ಸ್ಥಾನ ಪಡೆದಿದೆ. ಮತ್ತಷ್ಟು ಉನ್ನತ ಸ್ಥಾನಕ್ಕೇರಬೇಕಾದರೆ ಸ್ವತ್ಛತೆ ಕಾಪಾಡುವುದು ಅವಶ್ಯವಾಗಿದ್ದು, ಇದಕ್ಕಾಗಿ ಸಾರ್ವಜನಿಕರು, ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ಉತ್ತರ ಮತ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ| ರಮೇಶ ಲಂಡನಕರ್ ಮಾತನಾಡಿ, ಎನ್ ಎಸ್‌ಎಸ್ ಸ್ವಯಂ ಸೇವಕರು ಹಲವು ತಂಡಗಳಾಗಿ ಮನೆ-ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ನಗರ ಉಪ ಪೊಲೀಸ್ ಆಯುಕ್ತ ಡಿ. ಕಿಶೋರ್ ಬಾಬು, ನಾಲ್ಕು ಚಕ್ರ ಸಂಘಟನೆಯ ಮಾಲಾ ಕಣ್ಣಿ, ಮಾಲಾ ದಣ್ಣೂರ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಸೋಮವಾರದಿಂದ ಮನೆ-ಮನೆಗೆ 800 ಎನ್‌ಎಸ್‌ಎಸ್ ಸ್ವಯಂ ಸೇವಕರು ತೆರಳಲಿದ್ದಾರೆ. ಒಂದು ತಂಡದಲ್ಲಿ ನಾಲ್ವರು ಇರಲಿದ್ದಾರೆ. ಹಸಿ ಕಸ, ಒಣ ಕಸ, ಪ್ಲಾಸ್ಟಿಕ್, ಬಯಲು ಶೌಚಾಲಯದ ಬಗ್ಗೆ ಒಬ್ಬೊಬ್ಬರು ಒಂದೊಂದರ ಅರಿವು ಮೂಡಿಸಲಿದ್ದಾರೆ.
ಪ್ರೊ| ರಮೇಶ ಲಂಡನಕರ್
ಎನ್‌ಎಸ್‌ಎಸ್ ಸಂಯೋಜಕ, ಗುವಿವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.